ಮುಂಬೈ: ನಕಲಿ ಜಾತಿ ಪ್ರಮಾಣ ಪತ್ರ ಬಳಸಿ ಸರ್ಕಾರಿ ನೌಕರಿ ಪಡೆದಿರುವುದಾಗಿ ಆರೋಪ ಹೊತ್ತಿದ್ದ ಮಾಜಿ ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆಗೆ ಜಾತಿ ಪರಿಶೀಲನಾ ಸಮಿತಿ ಕ್ಲೀನ್ ಚಿಟ್ ನೀಡಿದೆ.
ಸಮೀರ್ ವಾಂಖೆಡೆ ಹುಟ್ಟಿನಿಂದ ಮುಸ್ಲಿಂ ಅಲ್ಲ. ಅವರು ಮಹಾರ್-37 ಪರಿಶಿಷ್ಟ ಜಾತಿಗೆ ಸೇರಿದವರು. ಸಮೀರ್ ವಾಂಖೆಡೆ ಹಾಗೂ ಅವರ ತಂದೆ ದ್ಯಾನೇಶ್ ವಾಂಖೆಡೆ ಹಿಂದೂ ಧರ್ಮವನ್ನು ತ್ಯಜಿಸಿ ಮುಸ್ಲಿಂ ಧರ್ಮವನ್ನು ಸ್ವೀಕರಿಸಿಲ್ಲ ಎಂದು ಸಮಿತಿ ತೀರ್ಮಾನಿಸಿದೆ. ಇದನ್ನೂ ಓದಿ: ಸ್ವಾವಲಂಬಿ ಭಾರತ ಕಟ್ಟಲು ಕೈಜೋಡಿಸಿ: ರಾಜ್ಯಪಾಲರ ಮನವಿ
Advertisement
Advertisement
ಮಹಾರಾಷ್ಟ್ರದ ಮಾಜಿ ಕ್ಯಾಬಿನೆಟ್ ಸಚಿವ ಮತ್ತು ಎನ್‌ಸಿಪಿ ನಾಯಕ ನವಾಬ್ ಮಲಿಕ್ ಸಮೀರ್ ಅವರು ನಕಲಿ ಜಾತಿ ಪ್ರಮಾಣ ಪತ್ರ ಬಳಸಿರುವುದಾಗಿ ಆರೋಪಿಸಿದ್ದರು. ಬಳಿಕ ರಾಜಕೀಯ ಮುಖಂಡರಾದ ಮನೋಜ್ ಸಂಸಾರೆ, ಅಶೋಕ್ ಕಾಂಬ್ಳೆ ಹಾಗೂ ಸಂಜಯ್ ಕಾಂಬ್ಳೆ ಅವರು ಸಮೀರ್ ವಾಂಖೆಡೆ ವಿರುದ್ಧ ದೂರು ನೀಡಿದ್ದರು. ಇದೀಗ ಈ ಆರೋಪ ಆಧಾರ ರಹಿತ ಎಂದು ಜಾತಿ ಪರಿಶೀಲನಾ ಸಮಿತಿ ಹೇಳಿದೆ. ಇದನ್ನೂ ಓದಿ: ಲಂಚ-ಮಂಚ ಹೇಳಿಕೆಗೆ ಕೌಂಟರ್ ಕೊಟ್ಟ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಫೇಸ್‌ಬುಕ್ ಪೋಸ್ಟ್‌ನಲ್ಲಿ ಸುದೀರ್ಘ ಉತ್ತರ
Advertisement
ಸಮೀರ್ ವಾಂಖೆಡೆಗೆ ಕ್ಲೀನ್ ಚಿಟ್ ಲಭಿಸುತ್ತಿದ್ದಂತೆಯೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸತ್ಯಮೇವ ಜಯತೆ ಎಂದು ಬರೆದುಕೊಂಡಿದ್ದಾರೆ.