ಚೆನ್ನೈ: ಸನಾತನ ಧರ್ಮವು (Sanatana dharma) ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂದು ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ಬೆನ್ನಲ್ಲೇ ಡಿಎಂಕೆ ಪಕ್ಷದ ಸಂಸದ ಎ.ರಾಜಾ (R Raja) ಹೆಚ್‌ಐವಿ (HIV), ಕುಷ್ಠರೋಗಕ್ಕೆ ಸನಾತನ ಧರ್ಮವನ್ನ ಹೋಲಿಸಿ ವಿವಾದವನ್ನ ಮೈಮೇಲೆ ಎಳೆದುಕೊಂಡಿದ್ದಾರೆ.
ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಸನಾತನ ಧರ್ಮವನ್ನ ಹೆಚ್‌ಐವಿ ಮತ್ತು ಕುಷ್ಠರೋಗದಂತಹ (leprosy) ಸಾಮಾಜಿಕ ಕಳಂಕ ಹೊಂದಿರುವ ರೋಗಗಳಿಗೆ ಹೋಲಿಸಬೇಕು. ಸನಾತನ ಧರ್ಮ ಹಾಗೂ ವಿಶ್ವಕರ್ಮ ಯೋಜನೆಗಳು ಬೇರೆ-ಬೇರೆ ಇಲ್ಲ, ಅವೆರಡೂ ಒಂದೇ. ಉದಯನಿಧಿ ಸ್ಟಾಲಿನ್ (Udhayanidhi Stalin) ಅವರು ಸ್ವಲ್ಪ ಮೃದು ಧೋರಣೆಯಿಂದ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.
Advertisement
Advertisement
ಡೆಂಗ್ಯೂ ಹಾಗೂ ಮಲೇರಿಯಾ ರೋಗಗಳು ಸಮಾಜಿಕ ಕಳಂಕ ಹೊಂದಿಲ್ಲ. ಆದ್ರೆ ಕುಷ್ಠ ಮತ್ತು ಹೆಚ್‌ಐವಿ ರೋಗಗಳು ಸಮಾಜದಿಂದ ಕಳಂಕಿತವಾಗಿವೆ. ಹಾಗಾಗಿ ಸನಾತನ ಧರ್ಮವನ್ನ ಹೆಚ್‌ಐವಿ ಮತ್ತು ಕುಷ್ಠರೋಗದಂತ ಕಾಯಿಲೆಯಾಗಿ ನೋಡಬೇಕಾಗಿದೆ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್ ತಲೆ ತಂದವರಿಗೆ 10 ಕೋಟಿ ಬಹುಮಾನ; ಅಯೋಧ್ಯೆಯ ಹಿಂದೂ ಧರ್ಮದರ್ಶಿ ಘೋಷಣೆ
Advertisement
Advertisement
ಯಾರು ಯಾರನ್ನಾದರೂ ಕರೆದುಕೊಂಡು ಬರಲಿ, ಸನಾತನ ಧರ್ಮದ ಬಗ್ಗೆ ಚರ್ಚೆ ಮಾಡೋಕೆ ನಾನು ಸಿದ್ಧ. ಅವರು ಯಾವುದೇ ಆಯುಧಗಳನ್ನ ಬೇಕಾದ್ರೆ ತೆಗೆದುಕೊಂಡು ಬರಲಿ. ಪ್ರಧಾನಿ ಮೋದಿ ಕ್ಯಾಬಿನೆಟ್‌ನಲ್ಲಿ ಸಭೆ ಕರೆದು ನನಗೆ ಅನುಮತಿ ಕೊಟ್ಟರೆ, ಅಲ್ಲಿಯೂ ಸನಾತನ ಧರ್ಮದ ಬಗ್ಗೆ ಉತ್ತರ ಕೊಡಲು ನಾನು ಸಿದ್ಧ ಎಂದು ಸವಾಲ್ ಹಾಕಿದ್ದಾರೆ.
ಏನಿದು ವಿವಾದ?
ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು. ಈ ಹೇಳಿಕೆ ನಂತರ ವಿವಾದ ಭುಗಿಲೆದ್ದಿದೆ.
ಈ ನಡುವೆ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತಾಗಿ ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಕಾನೂನು ಹಕ್ಕುಗಳ ವೀಕ್ಷಣಾಲಯ ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿಕೊಳ್ಳುವಂತೆ ಸೋಮವಾರ ಚೆನ್ನೈನ ಪೊಲೀಸ್ ಕಮಿಷನರ್‌ಗೆ ಲೀಗಲ್ ನೋಟಿಸ್ ಕಳುಹಿಸಿದೆ. ಸೆಪ್ಟೆಂಬರ್ 7 ರಂದು ಹುಬ್ಬಳ್ಳಿಯಲ್ಲೂ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಬದಲಾಗುತ್ತಾ ದೇಶದ ಹೆಸರು – ‘ಇಂಡಿಯಾ’ ಬದಲಿಗೆ ‘ರಿಪಬ್ಲಿಕ್ ಆಫ್ ಭಾರತ್’ ಅಂತ ಮರುನಾಮಕರಣ?
Web Stories