ಕಾರವಾರ: ಕಾಳಿ ನದಿ ಪ್ರದೇಶದಲ್ಲಿ ಮರಳುಗಾರಿಕೆಗೆ ಶೀಘ್ರದಲ್ಲಿ ಅನುವು ಮಾಡಿಕೊಡಲಾಗುವುದು ಎಂದು ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ತಿಳಿಸಿದ್ದಾರೆ.
Advertisement
ಮರಳುಗಾರಿಕೆ ಸಂಬಂಧಿಸಿದಂತೆ ಕಾರವಾರದ ಸಕ್ರ್ಯೂಟ್ ಹೌಸ್‍ನಲ್ಲಿ ಮರಳು ಗುತ್ತಿಗೆದಾರರು ಹಾಗೂ ವಿವಿಧ ಸಂಘಟನೆಗಳೊಂದಿಗೆ ಸಭೆ ನಡೆಸಿದ ಅವರು, ಮರಳು ಗಣಿಗಾರಿಕೆ ತೊಡಕುಗಳನ್ನು ನಿವಾರಿಸಿ ಮರಳು ಗಣಿಗಾರಿಕೆಗೆ ಅನುಮತಿ ನೀಡುವಂತೆ ಗಣಿ ಸಚಿವ ಹಾಲಪ್ಪ ಆಚಾರ್ ಅವರಿಗೆ ಸ್ಥಳದಲ್ಲೇ ದೂರವಾಣಿ ಕರೆ ಮಾಡಿ ಸಮಸ್ಯೆ ತಿಳಿಸಿದರು. ಈ ಸಂದರ್ಭದಲ್ಲಿ ಶೀಘ್ರದಲ್ಲಿ ಅನುಮತಿ ನೀಡುವುದಾಗಿ ಸಚಿವರು ಭರವಸೆ ನೀಡಿದರು. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ಪಕ್ಷದ ಪ್ರಭಾವಿಯೊಬ್ಬರಿದ್ದಾರೆ: ರಾಮಲಿಂಗಾರೆಡ್ಡಿ
Advertisement
Advertisement
ಕ್ಷೇತ್ರದಲ್ಲಿ ಮರಳು ಗಣಿಗಾರಿಕೆ ನಿಂತಿರುವುದರಿಂದ ಮನೆಗಳ ನಿರ್ಮಾಣ, ಸರ್ಕಾರಿ ಕಾಮಗಾರಿಗಳ ನಿರ್ಮಾಣಕ್ಕೆ ತೊಡಕಾಗುತ್ತಿರುವ ಬಗ್ಗೆ ಸಚಿವರ ಗಮನಕ್ಕೆ ತರಲಾಗಿದೆ. ಅದಕ್ಕೆ ಸ್ಪಂದಿಸಿದ ಸಚಿವರು ಅಧಿಕಾರಿಗಳೊಂದಿಗೆ ಮಾತನಾಡಿ ಶೀಘ್ರದಲ್ಲಿ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದರು. ಇದನ್ನೂ ಓದಿ: ಶಿಕ್ಷಣದಿಂದ ಜೀವನ ಕಟ್ಟುವ ಕೆಲಸವಾಗುತ್ತಿದೆ: ಬಿ.ವೈ ರಾಘವೇಂದ್ರ
Advertisement
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ನಿತಿನ್ ಪಿಕಳೆ, ಭಾರತೀಯ ಜನತಾ ಪಕ್ಷ ಕಾರವಾರ ನಗರ ಮಂಡಲದ ಅಧ್ಯಕ್ಷರಾದ ನಾಗೇಶ್ ಕುರ್ಡೇಕರ, ಮೀನುಗಾರ ಪ್ರಕೋಷ್ಟಕದ ರಾಜ್ಯ ಸಹಸಂಚಾಲಕರಾದ ಗಣಪತಿ ಉಳ್ವೇಕರ, ಮರಳು ಗುತ್ತಿಗೆದಾರ ಸಂಘದ ಪದಾಧಿಕಾರಿಗಳು, ಬೋಟ್ ಅಸೋಸಿಯೇಷನ್, ಇಂಜಿನಿಯರ್ ಅಸೋಸಿಯೇಷನ್ ಹಾಗೂ ವಿವಿಧ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.