ನಟ, ನಿರ್ದೇಶಕ ಟಪೋರಿ ಸತ್ಯ ನಿಧನ

Public TV
1 Min Read
tapori satya

ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ (Tapori Sathya) (45) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

tapori sathya raghavendra rajkumar

ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಟಪೋರಿ ಸತ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪತ್ನಿ, ಮೂವರು ಹೆಣ್ಣುಮಕ್ಕಳನ್ನ ಅಗಲಿದ್ದಾರೆ. ಇದನ್ನೂ ಓದಿ: ಸುಳ್ಳು ಸುದ್ದಿ ಬರೆದ ಸಿನಿಮಾ ವಿಶ್ಲೇಷಕನಿಗೆ ಚಳಿ ಬಿಡಿಸಿದ ನಟಿ ಊರ್ವಶಿ ರೌಟೇಲಾ

tapori sathya

ಟಪೋರಿ ಸತ್ಯ ಅವರು ಮನೆಗೆ ಆಧಾರವಾಗಿದ್ದರು. ಅವರ ನಿಧನದಿಂದ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ. ಬನಶಂಕರಿ ಮೂರನೇ ಹಂತದಲ್ಲಿ ಇರುವ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಟಪೋರಿ ಸತ್ಯ ಅವರು ನಂದ ಲವ್ಸ್ ನಂದಿತಾ ಸಿನಿಮಾ ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೇ ‘ಮೇಳ’ ಎನ್ನುವ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಇದನ್ನೂ ಓದಿ: ರಜನಿಕಾಂತ್ ಜೊತೆ ನಟಿಸುವ ಚಾನ್ಸ್ ಸಿಕ್ಕಿದ್ದು ಹೇಗೆ ಎಂದು ಅಸಲಿ ವಿಚಾರ ಬಿಚ್ಚಿಟ್ಟ ಅವಿನಾಶ್

Share This Article