ಬೆಂಗಳೂರು: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ (Renuka Swamy) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ದರ್ಶನ್ (Darshan) ಹಾಗೂ ಪವಿತ್ರಾ ಗೌಡ (Pavithra Gowda) ಸೇರಿದಂತೆ ಎಲ್ಲಾ 13 ಆರೊಪಿಗಳನ್ನು ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ವಿಚಾರಣೆ ವೇಳೆ ಪೊಲೀಸರು 14 ದಿನಗಳ ಕಾಲ ಕಸ್ಟಡಿಗೆ ಕೇಳಿದ್ದರು. ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ವಿಚಾರಣೆ ವೇಳೆ ನ್ಯಾಯಾಲಯ (Court) ದರ್ಶನ್‍ಗೆ ಯಾವುದಾದರೂ ತೊಂದರೆ ಆಗಿದೆಯೆ ಎಂದು ಕೇಳಿದ ಪ್ರಶ್ನೆಗೆ, ಇಲ್ಲ ಎಂದು ದರ್ಶನ್ ಪ್ರತಿಕ್ರಿಯಿಸಿದರು. ವಕೀಲರ ನೇಮಕ ಮಾಡಿಕೊಳ್ಳುತ್ತೀರಾ? ಎಂಬ ಪ್ರಶ್ನೆಗೆ, ಹೌದು ಎಂದರು. ಬಳಿಕ ಮನೆಯವರಿಗೆ ಬಂಧನದ ಮಾಹಿತಿ ನೀಡಿದ್ದೇನೆ ಎಂದು ನ್ಯಾಯಾಲಯಕ್ಕೆ ದರ್ಶನ್ ತಿಳಿಸಿದ್ದಾರೆ. ಇದನ್ನೂ ಓದಿ: ದರ್ಶನ್ ಟೀಂ ರೌದ್ರವತಾರಕ್ಕೆ ನರಳಿ ನರಳಿ ಪ್ರಾಣಬಿಟ್ಟ ರೇಣುಕಾಸ್ವಾಮಿ!
Advertisement
Advertisement
ಈ ವೇಳೆ ದರ್ಶನ್ ಪರ ವಕೀಲ ನಾರಾಯಣಸ್ವಾಮಿ, ದರ್ಶನ್ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ರೇಣುಕಾಸ್ವಾಮಿ ಶವ ಕೂಡ ಪತ್ತೆಯಾಗಿದೆ. ಇಷ್ಟೇ ಅಲ್ಲದೇ ದರ್ಶನ್ ವಿರುದ್ಧ ಯಾವುದೇ ಆರೋಪಗಳಿಲ್ಲ. ಅವರು ಎಲ್ಲೂ ತಪ್ಪಿಸಿಕೊಂಡಿಲ್ಲ. ತನಿಖೆಗೆ ಸಹಕಾರ ನೀಡುತ್ತಿದ್ದಾರೆ. ಹೀಗಾಗಿ ಪೊಲೀಸ್ ಕಸ್ಟಡಿ ಅಗತ್ಯವಿಲ್ಲ ಎಂದು ವಾದಿಸಿದರು.
Advertisement
ವಿಚಾರಣೆ ಬಳಿಕ 6ನೇ ಎಸಿಎಂಎಂ ನ್ಯಾಯಾಧೀಶ ವಿಶ್ವನಾಥ್ ಗೌಡರ್, ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ವಿಚಾರಣೆ ವೇಳೆ ದರ್ಶನ್ ಹಾಗೂ ಪವಿತ್ರಾ ಗೌಡ ನಾಯಾಧೀಶರ ಮುಂದೆ ಕಣ್ಣೀರು ಹಾಕಿದ್ದಾರೆ.
Advertisement
ಏನಿದು ಪ್ರಕರಣ?: ನಟ ದರ್ಶನ್ ಹಾಗೂ ಆರೋಪಿಗಳು ಮೆಡಿಕಲ್ ಶಾಪ್‍ನಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾಸ್ವಾಮಿಯನ್ನು ಶನಿವಾರ ಕಿಡ್ನಾಪ್ ಮಾಡಿ ಬೆಂಗಳೂರಿಗೆ ಕರೆ ತಂದು 24 ಗಂಟೆ ನಿರಂತರ ಚಿತ್ರ ಹಿಂಸೆ ನೀಡಿದ್ದಾರೆ. ತನ್ನ ಸ್ನೇಹಿತ ಉದ್ಯಮಿ, ವಿನಯ್‍ಗೆ ಸೇರಿದ ಆರ್‍ಆರ್ ನಗರದದ ಪಟ್ಟಣಗೆರೆ ಗೋಡೌನ್‍ಗೆ ರೇಣುಕಾಸ್ವಾಮಿಯನ್ನು ಕರೆ ತಂದು ಅಲ್ಲಿ ಮಾರಾಣಾಂತಿಕ ಹಲ್ಲೆ ನಡೆಸಿದ್ದರು.
ಪವಿತ್ರಾ ಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಜೊತೆ ಸಂಪರ್ಕ ಸಾಧಿಸಲು ಹುಡುಗಿ ಹೆಸರಿನಲ್ಲಿ ಫೇಕ್ ಖಾತೆಯನ್ನು ದರ್ಶನ್ ತಂಡ ತೆರೆದಿತ್ತು. ಈ ಖಾತೆಯ ಮೂಲಕ ರೇಣುಕಾಸ್ವಾಮಿಯ ಜೊತೆ ಸಂವಹನ ಮಾಡಲಾಗುತ್ತಿತ್ತು.
ಶನಿವಾರ ಮಾತನಾಡಲು ಮನೆಯಿಂದ ಹೊರಗಡೆ ಬಾ ಎಂದು ಖಾತೆಯಿಂದ ಮಸೇಜ್ ಕಳುಹಿಸಲಾಗಿತ್ತು. ಈ ಮಸೇಜ್‍ಗೆ ಒಪ್ಪಿ ಆತನ ಮನೆಯಿಂದ ಹೊರಗೆ ಬಂದಿದ್ದ. ಚಿತ್ರದುರ್ಗದಲ್ಲಿರುವ ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಸೇನಾ ಅಧ್ಯಕ್ಷ ರಘು ದರ್ಶನ್ ನೇತೃತ್ವದಲ್ಲಿ ಅಪಹರಣ ಮಾಡಿ ಬೆಂಗಳೂರಿಗೆ ಕರೆ ತರಲಾಗಿತ್ತು.
ಹಲ್ಲೆ ನಡೆಸುವ ಸಂದರ್ಭದಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಸ್ಥಳದಲ್ಲಿ ಇದ್ದರು. ದರ್ಶನ್ ಹೊಡೆದ ಬಳಿಕ ರೇಣುಕಾಸ್ವಾಮಿ ಸಾವನ್ನಪ್ಪಿದ್ದಾನೆ ಎಂದು ಉಳಿದ ಆರೋಪಿಗಳು ತಪ್ಪೊಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಈಗ ಮೈಸೂರಿನಲ್ಲಿದ್ದ ದರ್ಶನ್ ಅವರನ್ನು ಬಂಧಿಸಿ ಕರೆ ತಂದಿದ್ದರು. ಇದನ್ನೂ ಓದಿ: ಮೂಗು, ಬಾಯಿ, ದವಡೆ ಕತ್ತರಿಸಿ ವಿಕೃತಿ ಮೆರೆದು ಶವವನ್ನು ಮೋರಿಗೆ ಎಸೆದಿದ್ದ ದರ್ಶನ್ ಟೀಂ