ಬೆಂಗಳೂರು: ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ(81) ಇಂದು ನಿಧನರಾಗಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ರುದ್ರಪ್ಪ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಎರಡು ದಿನದ ಹಿಂದೆ ದುನಿಯಾ ವಿಜಯ್, ಅಪ್ಪನನ್ನ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಇಂದು ಬೆಳಗ್ಗೆ 7.30ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ರುದ್ರಪ್ಪ ಮೃತಪಟ್ಟಿದ್ದಾರೆ.
Advertisement
Advertisement
ಈ ಸಂಬಂಧ ವಿಜಯರ್ ಅವರು ಸಾಮಾಜಿಕ ಜಾಲತಾಣದಲ್ಲಿ ಅಪ್ಪನ ಫೋಟೋ ಹಾಕಿ ‘ಮಿಸ್ ಯೂ ಅಪ್ಪ’ ಎಂದು ಬರೆದುಕೊಂಡಿದ್ದಾರೆ. ಆನೇಕಲ್ ನ ಕುಂಬಾರ ಹಳ್ಳಿಯಲ್ಲಿ ವಿಜಯ್ ತಂದೆಯ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ನನಗೆ ಸಲ್ಮಾನ್ ಜೊತೆ ನಟಿಸಲು ಇಷ್ಟವಿರಲಿಲ್ಲ ಎಂದ ಆಯುಷ್ ಶರ್ಮಾ
Advertisement
Advertisement
ಕಳೆದ ಜುಲೈನಲ್ಲಿ ವಿಜಯ್ ರ ತಾಯಿ ನಾರಾಯಣಮ್ಮ ನಿಧನರಾಗಿದ್ದರು. ಈ ಕುರಿತು ಸ್ವತಃ ನಟನೇ ತನ್ನ ತಾಯಿ ಜೊತೆಗಿನ ಫೋಟೋ ಹಾಕಿ ‘ಮತ್ತೆ ಹುಟ್ಟಿ ಬಾ ಅಮ್ಮ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಆನೇಕಲ್ ನ ಕುಂಬಾರ ಹಳ್ಳಿಯಲ್ಲಿ ನಾರಾಯಣಮ್ಮ ಅವರ ಅಂತ್ಯಕ್ರಿಯೆ ನಡೆದಿತ್ತು. ಇದನ್ನೂ ಓದಿ: ಸ್ವಂತ ಮಕ್ಕಳನ್ನು 50,000 ರೂ.ಗೆ ಮಾರಾಟ ಮಾಡಿದ ಪೊಲೀಸ್ – ವೀಡಿಯೋ ವೈರಲ್