ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಸಿನಿಮಾಗಳಲ್ಲಿ ಬ್ಯುಸಿಯಿರುವಾಗಲೇ ರಾಜಕೀಯ (Politics) ಎಂಟ್ರಿಯ ಕುರಿತು ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ಸುದೀಪ್ ರಾಜಕೀಯ ರಂಗಕ್ಕೆ ಬರುವ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಕಡೆಯಿಂದ ಕಿಚ್ಚನಿಗೆ ಬಂಪರ್ ಆಫರ್ ಸಿಕ್ಕಿದೆ.
Advertisement
ಇತ್ತೀಚೆಗಷ್ಟೇ `ವಿಕ್ರಾಂತ್ ರೋಣ’ (Vikrant Rona) ಸಕ್ಸಸ್ನಲ್ಲಿದ್ದ ಸುದೀಪ್, ಬಿಗ್ ಬಾಸ್ ರಿಯಾಲಿಟಿ ಶೋ (Bigg Boss) ನಿರೂಪಣೆ ಮುಗಿಸಿ ಸ್ವಲ್ಪ ಫ್ರಿ ಆಗಿದ್ದಾರೆ. ಈ ಬೆನ್ನಲ್ಲೇ ಸುದೀಪ್ಗೆ ರಾಜಕೀಯ ರಂಗಕ್ಕೆ ಎಂಟ್ರಿ ಕೊಡಿ ಎಂದು ಕಾಂಗ್ರೆಸ್ ಪಕ್ಷದ ನಾಯಕರು ಮಣೆ ಹಾಕ್ತಿದ್ದಾರೆ. ನಟಿ ರಮ್ಯಾ (Actress Ramya) ಮೂಲಕ ಸುದೀಪ್ ಅವರನ್ನ ಕಾಂಗ್ರೆಸ್ (Congress) ನಾಯಕರು ಈಗಾಗಲೇ ಸಂಪರ್ಕಿಸಿದ್ದಾರೆ.
Advertisement
Advertisement
ಸಿನಿಮಾರಂಗದಲ್ಲಿ ಅಗ್ರ ಸ್ಥಾನದಲ್ಲಿರುವ ಸುದೀಪ್ಗೆ ಕಾಂಗ್ರೆಸ್ ಪಕ್ಷದ ಕಡೆಯಿಂದ ಬಂದಿರುವ ಆಫರ್ ಬಂದಿದೆ. ನಟಿ ರಮ್ಯಾ ಮೂಲಕ ಕಾಂಗ್ರೆಸ್ ನಾಯಕರು ಈಗಾಗಲೇ ನಟ ಸುದೀಪ್ ಜೊತೆ ಒಂದು ಹಂತದ ಮಾತುಕತೆ ನಡೆಸಿದ್ದಾರೆ. ಆದರೆ ತಮ್ಮ ನಿರ್ಧಾರದ ಬಗ್ಗೆ ಯಾವುದೇ ಪ್ರತಿಕ್ರಿಯೆ ಸುದೀಪ್ ಕಡೆಯಿಂದ ಬಂದಿಲ್ಲ. ರಾಜಕೀಯ ಪ್ರವೇಶದ ಬಗ್ಗೆ ಸುದೀಪ್ ಕೂಡ ಮೌನ ವಹಿಸಿದ್ದಾರೆ. ಇದನ್ನೂ ಓದಿ:ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಗಾಯಕಿ ಮಂಗ್ಲಿ
Advertisement
ಬಣ್ಣಲೋಕದಲ್ಲಿ ಭರ್ಜರಿ ಡಿಮ್ಯಾಂಡ್ ಇರುವಾಗ ನಟಿ ರಮ್ಯಾ ಮತ್ತು ಕಾಂಗ್ರೆಸ್ ನಾಯಕರ ಒತ್ತಾಯಕ್ಕೆ ಮಣಿದು ರಾಜಕೀಯ ಅಖಾಡಕ್ಕೆ ಕಿಚ್ಚ ಸುದೀಪ್ (Kiccha Sudeep) ಬರುತ್ತಾರಾ ಎಂಬುದನ್ನ ಕಾದುನೋಡಬೇಕಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k