ಬೆಂಗಳೂರು: ಸ್ಯಾಂಡಲ್ವುಡ್ ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಭಾರೀ ಹೃದಯಾಘಾತವಾಗಿದ್ದು, ಸ್ಥಿತಿ ಗಂಭೀರವಾಗಿದೆ. ಸದ್ಯ ನಟ ವಿಕ್ರಂ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
ಎಂದಿನಂತೆ ಇಂದು ಬೆಳಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ನಟ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ರಮಣಶ್ರೀ ಆಸ್ಪತ್ರೆಗೆ ದಾಖಲಿಸಿ ನಂತರ ವಿಕ್ರಂ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿದೆ. ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬರುವಾಗಲೇ ನಟನ ಸ್ಥಿತಿ ಗಂಭೀರವಾಗಿತ್ತು. ಸದ್ಯ ಅವರಿಗೆ ಹೃದ್ರೋಗ ತಜ್ಞರು ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.
Advertisement
Advertisement
ಇತ್ತ ನಟ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ನಟನ ಕುಟುಂಬ ಆಸ್ಪತ್ರೆಗೆ ದೌಡಾಯಿಸಿದೆ. ಅಲ್ಲದೆ ಅಭಿಮಾನಿಗಳು ಕೂಡ ಆಸ್ಪತ್ರೆಯ ಸುತ್ತ ಜಮಾಯಿಸುತ್ತಿರುವುದರಿಂದ ಈಗಾಗಲೇ ಬಿಗಿ ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿದೆ. ಆಸ್ಪತ್ರೆಗೆ ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿದೆ.
Advertisement
ಇತ್ತ ಸಹೋದರ ಶಿವರಾಜ್ ಕುಮಾರ್ ಅವರ ಭಜರಂಗಿ 2 ಸಿನಿಮಾ ಇಂದು ತೆರೆ ಕಂಡಿದ್ದು, ಈ ಹಿನ್ನೆಲೆಯಲ್ಲಿ ಶಿವಣ್ಣ ಕುಟುಂಬ ಸಿನಿಮಾ ವೀಕ್ಷಿಸಲು ತೆರಳಿತ್ತು. ಈ ನಡುವೆ ಪುನೀತ್ ಆರೋಗ್ಯದಲ್ಲಿ ಏರುಪೇರಾದ ವಿಚಾರ ತಿಳಿಯುತ್ತಿದ್ದಂತೆಯೇ ಶಿವಣ್ಣ ಪುತ್ರಿ ಆಸ್ಪತ್ರೆಗೆ ದೌಡಾಯಿಸಿ ಚಿಕ್ಕಪ್ಪನ ಆರೋಗ್ಯ ವಿಚಾರಿಸಿದ್ದಾರೆ. ನಟ ಕ್ರೇಜಿಸ್ಟಾರ್ ರವಿಚಂದ್ರನ್ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.