ಬೆಂಗಳೂರು: ಡ್ರಗ್ಸ್ ಸೇವಿಸಿರುವುದು ಖಚಿತ ಎಂದು ವರದಿಯಾಗುತ್ತಿದ್ದಂತೆಯೇ ಇತ್ತ ನಟಿ ಸಂಜನಾ ಗಲ್ರಾನಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೌದು. ಮಗಳು ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದಾಳೆ. ಈ ಹಿಂದೆ ಸಂಜನಾಗೆ ಸರ್ಜರಿ ಆಗಿತ್ತು. ಹೀಗಾಗಿ ರಾತ್ರಿಯೇ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದಾರೆ. ಮೆಂಟಲಿ ಅಪ್ ಸೆಟ್ ಆಗಿದ್ದಾರೆ ಎಂದು ನಟಿ ಸಂಜನಾ ತಾಯಿ ರೇಷ್ಮಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
Advertisement
Advertisement
ಸದ್ಯ ಆಕೆ ಈ ಕೇಸ್ ನಿಂದ ಡಿಸ್ಟರ್ಬ್ ಆಗಿದ್ದಾಳೆ. ಪದೇ ಪದೇ ಇದೇ ಕೇಸ್ ಬಗ್ಗೆ ಕೇಳಿ ಡಿಪ್ರೆಶನ್ ಗೆ ಹೋಗಿದ್ದಾಳೆ. ಹುಷಾರಿಲ್ಲದ ಕಾರಣ ಆಕೆಯನ್ನ ಆಸ್ಪತ್ರೆಗೆ ಸೇರಿಸಲಾಗಿದೆ. ನನ್ನ ಮಗಳು ಏನೂ ತಪ್ಪು ಮಾಡಿಲ್ಲ. ಆದರೆ ದುರಾದೃಷ್ಟದಿಂದ ಈತರ ಎಲ್ಲಾ ಆಗ್ತಿದೆ. ನಾವು ಭಗವಾನ್ ನನ್ನ ನಂಬ್ತೀವಿ. ದೇವರ ದಯೆಯಿಂದ ನಾಲ್ಕು ಜನರಿಗೆ ಸಹಾಯ ಮಾಡುತ್ತಿದ್ದೇವೆ. ಹುಷಾರಿಲ್ಲದ ಕಾರಣ ನಂಗೆ ಊಟ ನೀಡೋಕೆ ಹೇಳಿದಳು ಎಂದರು. ಇದನ್ನೂ ಓದಿ: ಬೆಟ್ಟದಲ್ಲಿ ವಿವಸ್ತ್ರಗೊಳಿಸಿ ಮಹಿಳೆಯ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ
Advertisement
Advertisement
ಒಂದು ಹುಡುಗಿ ಆಗಿ ಒಳ್ಳೆ ಕೆಲಸ ಮಾಡ್ತಿದ್ದಾಳೆ. ಎಲ್ಲಾ ನಮ್ಮ ಡೆಸ್ಟಿನಿ. ಸಂಜನಾಗೆ ಹುಷಾರಿಲ್ಲ ಬೇಜಾರನಲ್ಲಿ ಇದ್ದೇವೆ. ಅವರಿಗೆ ಅಟ್ಯಾಕ್ಟ್ ತರಾ ಆಗ್ತಿದೆ. 10-12 ದಿನ ಊಟ ಕೊಡ್ತೇವೆ. ತುಂಬಾ ಡಿಪ್ರೇಸ್ ಆಗಿದ್ದಾರೆ. ಎಲ್ಲರೂ ಸರ್ಪೋಟ್ ಮಾಡಿ. ತಾಯಿಯಾಗಿ ದೇವರನ್ನು ಪ್ರೇಯರ್ ಮಾಡ್ತೇನೆ ಎಂದು ರೇಷ್ಮಾ ಬೇಸರ ವ್ಯಕ್ತಪಡಿಸಿದ್ದಾರೆ.
10 ತಿಂಗಳ ಬಳಿಕ ಹೈದರಾಬಾದ್‍ನ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಸಿಕ್ಕಿದ್ದು, ತಲೆಕೂದಲ ಪರೀಕ್ಷೆಯಲ್ಲಿ ನಟಿಯರ ಮಾದಕ ದ್ರವ್ಯ ಸೇವನೆ ದೃಢವಾಗಿದೆ. 2020ರ ಸೆಪ್ಟೆಂಬರ್ 13 ಕೆಸಿ ಜನರಲ್ ಆಸ್ಪತ್ರೆಯಲ್ಲಿ ರಕ್ತ, ಯೂರಿನ್ ಸ್ಯಾಂಪಲ್ ಸಂಗ್ರಹ ಮಾಡಲಾಗಿತ್ತು. ಆದರೆ ತಾಂತ್ರಿಕ ದೋಷದಿಂದಾಗಿ ಮತ್ತೆ ಡಿಸೆಂಬರ್ 5ರಂದು ಕೋರ್ಟ್ ಅನುಮತಿ ಪಡೆದು, ಕೂದಲು, ರಕ್ತ, ಯೂರಿನ್ ಅಂಶಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿತ್ತು. ಈಗ ಎಫ್‍ಎಸ್‍ಎಲ್ ವರದಿಯಲ್ಲಿ ಡ್ರಗ್ಸ್ ಸೇವನೆ ಖಚಿತವಾಗಿದೆ. ಈ ಮೂಲಕ ಕರ್ನಾಟಕದಲ್ಲಿ ತಲೆ ಕೂದಲ ಮೂಲಕ ಡ್ರಗ್ಸ್ ಸೇವನೆ ಖಚಿತ ಆಗಿರೋದು ಇದೇ ಮೊದಲ ಕೇಸ್ ಎಂದು ಸಿಸಿಬಿ ಹೇಳಿದೆ.
ಡ್ರಗ್ಸ್ ಸೇವನೆ ಖಚಿತ, ಮುಂದೇನು?
ಡ್ರಗ್ಸ್ ಕೇಸಲ್ಲಿ ಕೂದಲು ಮೂಲಕ ಪತ್ತೆ ಹಚ್ಚಿರೋದು ರಾಜ್ಯದಲ್ಲಿ ಇದೇ ಮೊದಲ ಕೇಸ್ ಆಗಿದೆ. ರಾಗಿಣಿ, ಸಂಜನಾ ವಿರುದ್ಧ ಬೆಂಗಳೂರಿನ 33ನೇ ಸಿಸಿಹೆಚ್ ಕೋರ್ಟ್‍ಗೆ ಸಿಸಿಬಿ ಪೊಲೀಸರು 145 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ. ಎಫ್‍ಎಸ್‍ಎಲ್ ವರದಿ, ಸಿಸಿಬಿ ವಿಚಾರಣೆ ವೇಳೆ ಇಬ್ಬರ ವಿರುದ್ಧ ನಟರು ಕೊಟ್ಟಿರುವ ಹೇಳಿಕೆಯನ್ನು ಸಾಕ್ಷ್ಯವಾಗಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಪ್ರಕರಣ – ಕೊನೆಗೂ ಮೌನ ಮುರಿದ ನಟಿ ರಾಗಿಣಿ
ಹೈದ್ರಾಬಾದ್ ಎಫ್‍ಎಸ್‍ಎಲ್ ರಿಪೋರ್ಟ್ ಬಗ್ಗೆ ಕೋರ್ಟ್ ಪರಿಶೀಲನೆ ನಡೆಸಲಿದೆ. ಇಬ್ಬರ ವಿಚಾರಣೆ ವೇಳೆ ಸರ್ಕಾರಿ ವಕೀಲರು ವಾದ ಮಂಡಿಸಲಿದ್ದಾರೆ. ಈ ವೇಳೆ ಪೂರಕ ಸಾಕ್ಷ್ಯ ಕೊಟ್ಟು ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಮಂಡಿಸಲಿದ್ದಾರೆ. ವಿಚಾರಣೆ ಬಳಿಕ ಆರೋಪ ಸಾಬೀತಾದರೆ ಸಂಜನಾ, ರಾಗಿಣಿಗೆ ಕೋರ್ಟ್ ಶಿಕ್ಷೆ ವಿಧಿಸಬಹುದು. ಕೆಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ನಟಿ ಮಣಿಯರು ಹೈಕೋರ್ಟ್ ಮೊರೆ ಹೋಗಬಹುದು.