ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ (Sarigama Vijay) ಅವರು ಇಂದು (ಜ.15) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಿಧನರಾಗಿರುವ ವಿಚಾರವನ್ನು ಪುತ್ರ ರೋಹಿತ್ ಅಧಿಕೃತವಾಗಿ ತಿಳಿಸಿದ್ದಾರೆ. ಇದನ್ನೂ ಓದಿ:ಅಪ್ಪ, ಚಿಕ್ಕಪ್ಪನ ಜೊತೆ ವಿನೀಶ್ ಸಂಕ್ರಾಂತಿ ವೈಬ್ಸ್
Advertisement
76 ವರ್ಷದ ಸರಿಗಮ ವಿಜಿ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಹಾಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಒಂದು ವಾರದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಒಂದು ಗಂಟೆಯ ಬಳಿಕ ನಟನ ನಿವಾಸಕ್ಕೆ ಪಾರ್ಥಿವ ಶರೀರ ರವಾನಿಸಲಿದ್ದಾರೆ.
Advertisement
Advertisement
ಅಂದಹಾಗೆ, 1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರಕ್ಕೆ ಸಣ್ಣ ಪಾತ್ರದಲ್ಲಿ ನಟಿಸುವುದರ ಮೂಲಕ ನಟನಾಗಿ ಗುರುತಿಸಿಕೊಂಡರು. ಆ ನಂತರ ಚಿತ್ರರಂಗದಲ್ಲಿ ತೊಡಗಿಕೊಂಡವರು. ಅದರ ಫಲವೇ 269 ಚಿತ್ರಗಳಲ್ಲಿ ನಟನೆ, 80 ಚಿತ್ರಗಳಿಗೆ ಸಹಾಯಕ ನಿರ್ದೇಶನ ಮಾಡಿದ್ದಾರೆ. 2,400 ಧಾರಾವಾಹಿಗಳ ನಿರ್ದೇಶನದ ಜೊತೆಗೆ ನಟನೆ ಮಾಡಿದ್ದಾರೆ. ವಿಶೇಷ ಅಂದರೆ, ಇವರ ನಟನೆಯ ಚಿತ್ರಗಳ ಪಟ್ಟಿಯಲ್ಲಿ ಟೈಗರ್ ಪ್ರಭಾಕರ್ ಚಿತ್ರಗಳೇ ಹೆಚ್ಚಾಗಿದೆ. ಇನ್ನೂ ಅವರು ಸರಿಗಮ ವಿಜಿ ಎಂದೇ ಫೇಮಸ್ ಆಗಿದ್ದಾರೆ.