ನಟ, ನಿರೂಪಕ ಸೃಜನ್ ಲೋಕೇಶ್ (Srujan Lokesh) ನಿರ್ದೇಶನದತ್ತ ಮುಖ ಮಾಡಿದ್ದಾರೆ. ಸೃಜನ್ ಪುತ್ರ ‘ಜಿಎಸ್‌ಟಿ’ (GST) ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ (Sandalwood) ಪಾದಾರ್ಪಣೆ ಮಾಡ್ತಿದ್ದಾರೆ. ಸೃಜನ್ ಲೋಕೇಶ್ ನಿರ್ದೇಶನದ ಚೊಚ್ಚಲ ಚಿತ್ರದ ಮುಹೂರ್ತ ಅದ್ದೂರಿಯಾಗಿ ನೆರವೇರಿದೆ.
ಜಿಎಸ್‌ಟಿ ಚಿತ್ರವನ್ನು ಸೃಜನ್ ಲೋಕೇಶ್ ನಿರ್ದೇಶನ (Director) ಮಾಡುತ್ತಿದ್ದಾರೆ. ಸಂದೇಶ್ ನಾಗರಾಜ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ಮೂಡಿಬರಲಿದೆ. ಈ ಚಿತ್ರದ ಮುಹೂರ್ತ ಆಗಸ್ಟ್ 21ರಂದು ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿದೆ. ಮೊದಲ ದೃಶ್ಯಕ್ಕೆ ಸಂದೇಶ್ ನಾಗರಾಜ್ ಆರಂಭ ಫಲಕ ತೋರಿಸಿದರು. ಕ್ಯಾಮೆರಾಗೆ ಗಿರಿಜಾ ಲೋಕೇಶ್ ಚಾಲನೆ ನೀಡಿದರು. ಇನ್ನು, ಪಿ.ಶೇಷಾದ್ರಿ, ಟಿ.ಎಸ್.ನಾಗಾಭರಣ, ತಾರಾ, ಶ್ರುತಿ ಕೃಷ್ಣ, ಸುಂದರರಾಜ್, ನಿರೂಪ್ ಭಂಡಾರಿ ಮೊದಲಾದವರು ಆಗಮಿಸಿ ತಂಡಕ್ಕೆ ಶುಭಕೋರಿದ್ದಾರೆ. ಇದನ್ನೂ ಓದಿ:ಚಿಕ್ಕಬಳ್ಳಾಪುರ ಇಶಾ ಫೌಂಡೇಶನ್‌ನಲ್ಲಿ ನಾಗ ಪಂಚಮಿ- ತಮನ್ನಾ, ಶ್ರೀನಿಧಿ ಶೆಟ್ಟಿ ಭಾಗಿ
ವಿಶೇಷ ಅಂದರೆ, ಸೃಜನ್ ಲೋಕೇಶ್ ಪುತ್ರ ಸುಕೃತ್ ಬಾಲ ನಟನಾಗಿ ಈ ಚಿತ್ರದದಿಂದ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡ್ತಿದ್ದಾರೆ. ಜಿಎಸ್‌ಟಿ ಚಿತ್ರಕ್ಕೆ ಘೋಸ್ಟ್ ಇನ್ ಟ್ರಬಲ್ ಎಂಬ ಅಡಿಬರಹ ನೀಡಲಾಗಿದೆ. ದೆವ್ವಗಳೂ ಸಮಸ್ಯೆಯಲ್ಲಿವೆ ಅನ್ನೋದು ಇದರ ಅರ್ಥ. ಈಗಾಗಲೇ ಸಿನಿಮಾಗೆ ಶೂಟಿಂಗ್ ಕೂಡ ಆರಂಭ ಆಗಿದೆ.
ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಪ್ರಮೋದ್ ಶೆಟ್ಟಿ, ರಜನಿ ಭಾರದ್ವಾಜ್, ನಿವೇದಿತಾ ಗೌಡ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ ಮೊದಲಾದವರು ನಟಿಸಲಿದ್ದಾರೆ. ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ಸಂಯೋಜನೆ ಮಾಡಲಿದ್ದಾರೆ.
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]