Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಿಲಕ್ ನಟನೆಯ ʻಉಸಿರುʼ ಸಿನಿಮಾ ಟ್ರೈಲರ್ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ತಿಲಕ್ ನಟನೆಯ ʻಉಸಿರುʼ ಸಿನಿಮಾ ಟ್ರೈಲರ್ ರಿಲೀಸ್

Cinema

ತಿಲಕ್ ನಟನೆಯ ʻಉಸಿರುʼ ಸಿನಿಮಾ ಟ್ರೈಲರ್ ರಿಲೀಸ್

Public TV
Last updated: August 21, 2025 12:59 pm
Public TV
Share
3 Min Read
Usiru Movie Team
SHARE

ಕೇಳಿದ್ದು ಸುಳ್ಳಾಗಬಹುದು, ನೋಡಿದ್ದು ಸುಳ್ಳಾಗಬಹುದು, ನಿಧಾನಿಸಿ ಯೋಚಿಸಿದಾಗ ನಿಜ ತಿಳಿಯುವುದು ಎಂಬ ಕಾನ್ಸೆಪ್ಟ್ ಮೇಲೆ ತಯಾರಾದ (Usiru Movie) ಚಿತ್ರ ಉಸಿರು. ಆರ್.ಎಸ್.ಪಿ. ಪ್ರೊಡಕ್ಷನ್ ಮೂಲಕ ಶ್ರೀಮತಿ ಲಕ್ಷ್ಮಿ ಹರೀಶ್ ನಿರ್ಮಿಸಿರುವ, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ ಈ ಚಿತ್ರ ಇದೇ ತಿಂಗಳ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ, ಉಸಿರು ಚಿತ್ರದ ಟ್ರೈಲರ್‌ನ್ನು ಉದ್ಯಮಿಗಳಾದ ಸುಧೀರ್ ಆನಂದ್ ಹಾಗೂ ರಾಮ್ ಸಂತಾನಿ ಅವರು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು, ನಟ ತಿಲಕ್ ಶೇಖರ್, ಪ್ರಿಯಾ ಹೆಗ್ಡೆ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ ಪನೇಮ್ ಪ್ರಭಾಕರ್ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಆರ್.ಎಸ್.ಗಣೇಶ್ ನಾರಾಯಣನ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದ್ದು, ಭೈರವರಾಮ ಸಂಭಾಷಣೆ ಹಾಗೂ ಸಾಹಿತ್ಯ ರಚಿಸಿದ್ದಾರೆ. ಸಹ ನಿರ್ಮಾಪಕ ಹರೀಶ್ ಅವರು ಚಿಕ್ಕ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

Usiru Movie Team 2

ಅನಾಮಧೇಯ ವ್ಯಕ್ತಿಯಿಂದ ಹೆಂಡತಿಯ ಪ್ರಾಣಕ್ಕೆ ಆಪತ್ತು ಬಂದಾಗ, ಪೊಲೀಸ್ ಅಧಿಕಾರಿಯೊಬ್ಬ ತನ್ನ ಪತ್ನಿಯನ್ನು ಹೇಗೆ ಕಾಪಾಡಿಕೊಳ್ಳುತ್ತಾನೆ ಎಂದು ನಿರ್ದೇಶಕ ಪ್ರಭಾಕರ್ ಅವರು ಈ ಚಿತ್ರದ ಮೂಲಕ ಹೇಳಹೊರಟಿದ್ದಾರೆ, ಬೆಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಮೂಡಿಗೆರೆ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಈ ಸಂದರ್ಭದಲ್ಲಿ ನಿರ್ಮಾಪಕಿ ಲಕ್ಷ್ಮಿ ಹರೀಶ್ ಮಾತನಾಡುತ್ತ ನಮ್ಮನೆಯಲ್ಲಿ ಒಂದು ಕಾರ್ಯಕ್ರಮ ರೆಡಿಯಾಗ್ತಿದೆ, ಅದನ್ನು ಪ್ರೇಕ್ಷಕರಿಗೆ ತಲುಪಿಸುವುದು ಮಾಧ್ಯಮದವರು, ನಿಮ್ಮನೆ ಹೆಣ್ಮಗಳು ಮೊದಲ ಬಾರಿಗೆ ಸಿನಿಮಾ ಮಾಡಿ ನಿಮ್ಮ ಮುಂದೆ ಬಂದಿದ್ದೇನೆ. ಇಲ್ಲಿ ನಾನೊಬ್ಬಳೇ ಅಲ್ಲ, ನನ್ನ ಜತೆ ತುಂಬಾ ಹೆಣ್ಣು ಮಕ್ಕಳಿದ್ದಾರೆ. ಈ ಸಿನಿಮಾ ಗೆದ್ರೆ ಅವರೆಲ್ಲ ಗೆಲ್ತಾರೆ. ನಮ್ಮ ಕಡೆಯಿಂದ ನೂರಕ್ಕೆ ನೂರು ಎಫರ್ಟ್ ಹಾಕಿದ್ದೇವೆ. ಪ್ರಭಾಕರ್ ಅವರು ನಮಗೆ ಈ ಕಥೆ ಹೇಳಿದಾಗ, ಸ್ಟೋರಿಲೈನ್ ಇಷ್ಟವಾಯ್ತು. ಈಗ ಪ್ರೇಕ್ಷಕರ ಮುಂದೆ ಬರುತ್ತಿದ್ದೇವೆ. ನಮ್ಮ ಚಿತ್ರಕ್ಕೆ ಪಿಆರ್‌ಓ ನಾಗೇಂದ್ರ ಅವರ ಸಹಕಾರ ತುಂಬಾ ಇದೆ ಎಂದು ಹೇಳಿದರು. ಇದನ್ನೂ ಓದಿ: 3 ವರ್ಷದಿಂದ ಅಶ್ಲೀಲ ಮೆಸೇಜ್‌ ಕಳಿಸ್ತಿದ್ದಾರೆ, ಹೋಟೆಲ್‌ಗೆ ಕರೀತಿದ್ದಾರೆ – ರಾಜಕಾರಣಿ ವಿರುದ್ಧ ನಟಿ ರಿನಿ ಜಾರ್ಜ್ ಆರೋಪ

Usiru Movie Team 1

ನಂತರ ನಿರ್ದೇಶಕ ಪ್ರಭಾಕರ್ ಮಾತನಾಡಿ ನನ್ನ ನಿರ್ದೇಶನದ ಪ್ರಥಮ ಚಿತ್ರವಿದು, ನಾವೆಲ್ಲ ಸೇರಿ ಪ್ಯಾಷನೇಟ್ ಆಗಿ, ಒಂದೊಳ್ಳೇ ಟೀಮ್ ಕಟ್ಟಿಕೊಂಡು ದೊಡ್ಡಮಟ್ಟದಲ್ಲಿ ಈ ಚಿತ್ರವನ್ನು ಮಾಡಿದ್ದೇವೆ, ನಮ್ಮ ಚಿತ್ರದಲ್ಲಿ ಕಂಟೆಂಟೇ ಹೀರೋ. ಗಂಡನ ಪ್ರೀತಿ, ಸ್ನೇಹ ಸಂಬಂಧ ಹೀಗೆ ಎಲ್ಲಾ ರೀತಿಯ ಎಮೋಷನ್ಸ್ ಚಿತ್ರದಲ್ಲಿದ್ದು, ಪ್ರತಿ ಪಾತ್ರಕ್ಕೂ ಅದರದೇ ಆದ ಪ್ರಾಮುಖ್ಯತೆಯಿದೆ. ಟ್ರೈಲರ್ ಇಷ್ಟು ಚೆನ್ನಾಗಿ ಬರಲು ನನ್ನ ಟೀಮ್ ಕಾರಣ, 07.08.09:ಚಿತ್ರದಲ್ಲಿ ಈ ನಂಬರ್ ಏಕೆ ಬರುತ್ತೆ ಎನ್ನುವುದು ತೆರೆಮೇಲೆ ಗೊತ್ತಾಗಲಿದೆ ಎಂದು ಹೇಳಿದರು.

ನಾಯಕ ನಟ ತಿಲಕ್ ಶೇಖರ್ (Actor Tilak) ಮಾತನಾಡುತ್ತ ಈ ಚಿತ್ರದಲ್ಲಿ ನಾನೊಬ್ಬ ಇನ್ವೆಸ್ಟಿಗೇಷನ್ ಆಫೀಸರ್ ಆಗಿ ನಟಿಸಿದ್ದೇನೆ. ಈ ಥರದ ಕಾನ್ಸೆಪ್ಟ್ ನಾನು ಎಲ್ಲೂ ಕೇಳಿಲ್ಲ. ಡೈರೆಕ್ಟರ್ ಬಂದು ನನಗೆ ಕಥೆ ಹೇಳಿದಾಗ ಟೈಟಲ್ ಸೂಟ್ ಆಗಲ್ಲ ಅನಿಸಿತ್ತು, ಆದರೆ ಶೂಟಿಂಗ್ ಮಾಡ್ತಾ ಹೋದಂತೆ ಕ್ಲಾರಿಟಿ ಸಿಕ್ತು. ಇದು ಬರೀ ಮರ್ಡರ್ ಮಿಸ್ಟ್ರಿಯಲ್ಲ, ತುಂಬಾ ಲೇಯರ್ಸ್‌ಗಳಿವೆ. ಚಿತ್ರ ರಿಲೀಸ್ ಹಂತಕ್ಕೆ ಬರಲು ನಿರ್ಮಾಪಕರ ಅವಿರತ ಪ್ರಯತ್ನವೇ ಕಾರಣ. ಚಿತ್ರದಲ್ಲಿ ತುಂಬಾ ಇಂಟರೆಸ್ಟಿಂಗ್ ಎಲಿಮೆಂಟ್ಸ್‌ಗಳಿವೆ ಎಂದು ಹೇಳಿದರು.

ನಾಯಕಿ ಪ್ರಿಯಾ ಹೆಗ್ಡೆ ಮಾತನಾಡಿ ಚಿತ್ರದ ಟೈಟಲ್ ಕೇಳಿದಾಗ ಇದೊಂದು ಲವ್‌ ಸ್ಟೋರಿ ಇರಬೇಕು ಅನ್ಸುತ್ತೆ, ಚಿತ್ರದಲ್ಲಿ ನನ್ನ ಪಾತ್ರಕ್ಕೆ ಹಲವಾರು ಶೇಡ್ಸ್ ಇದ್ದು, ನನ್ನ ಪಾತ್ರದಿಂದ ಚಿತ್ರಕಥೆಗೆ ಟ್ವಿಸ್ಟ್ ಸಿಗುತ್ತದೆ. ಮಹಿಳಾ ನಿರ್ಮಾಪಕಿಯ ಜತೆ ಕೆಲಸ ಮಾಡಿರುವುದೇ ಖುಷಿಯ ವಿಚಾರ ಎಂದು ಹೇಳಿದರು.

ಸಂಗೀತ ನಿರ್ದೇಶಕ ಆರ್.ಎಸ್.ಗಣೇಶ್ ನಾರಾಯಣನ್ ಮಾತನಾಡುತ್ತ ಈ ಚಿತ್ರದಲ್ಲಿ ಎಲ್ಲಾ ಹಾಡುಗಳನ್ನು ಸಂದರ್ಭಕ್ಕನುಗುಣವಾಗಿ ಮಾಡಿದ್ದೇವೆ. ಭೈರವರಾಮ ತುಂಬಾ ಚೆನ್ನಾಗಿ ಲಿರಿಕ್ ಬರೆದಿದ್ದಾರೆ, ಹಾಡುಗಳೂ ಅಷ್ಟೇ ಚೆನ್ನಾಗಿ ಬಂದಿವೆ, ಎಲ್ಲ ಪಾತ್ರಗಳಿಗೂ ಒಂದೊಂದು ಥೀಮ್ ಮಾಡಿದ್ದೇವೆ ಎಂದು ಹೇಳಿದರು. ನಟ ಸಂತೋಷ್ ನಂದಿವಾಡ, ನಟಿ ಅಪೂರ್ವ ನಾಗರಾಜು, ಖಳನಟ ಅರುಣ್, ಸಾಹಿತಿ, ಡೈಲಾಗ್ ರೈಟರ್ ಬೈರವರಾಮ ಎಲ್ಲರೂ ಚಿತ್ರದ ಕುರಿತಂತೆ ತಮ್ಮ ಅನುಭವಗಳನ್ನು ಹಂಚಿಕೊಂಡರು. ಇದನ್ನೂ ಓದಿ: ಬರ್ತ್‌ ಡೇ ಸೆಲೆಬ್ರೇಷನ್ – ಅಭಿಮಾನಿಗಳಿಗೆ ಶಾಕ್ ಕೊಟ್ಟ ನಟ ಡಾಲಿ ಧನಂಜಯ್!

TAGGED:Actor Tilakkannada cinemasandalwoodUsiru Movieಉಸಿರು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
4 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
5 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
5 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
5 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
6 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?