ಬೆಂಗಳೂರು: ನಟಿ ಅದಿತಿ ಪ್ರಭುದೇವ ಅವರು ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ..? ಮದುವೆ ಫಿಕ್ಸ್ ಆಯ್ತಾ..? ಎಂಬ ಪ್ರಶ್ನೆ ಸ್ಯಾಂಡಲ್‍ವುಡ್ ಅಂಗಳದಲ್ಲಿ ಎದ್ದಿದೆ.
ಹೌದು. ಅದಿತಿ ಅವರು ಹುಡುಗನ ಜೊತೆ ಕೈ ಹಿಡಿದು ನಿಂತಿರುವ ಫೋಟೋವೊಂದನ್ನು ತಮ್ಮ ಇನ್ ಸ್ಟಾ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ಕ್ಯಾಪ್ಷನ್ ಕೂಡ ನೀಡಿದ್ದು, ಇದೀಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
`ಒಂದು ಕನಸಿನಂತೆ ಈ ಕನಸು ನನಸಾಯಿತು’ ಎಂದು ಅದಿತಿ ತಮ್ಮ ಫೋಟೋದೊಂದಿಗೆ ಬರೆದುಕೊಂಡಿದ್ದಾರೆ. ಅದಿತಿ ಈ ರೀತಿ ಫೋಟೋ, ಕ್ಯಾಪ್ಷನ್ ಹಾಕುತ್ತಿದ್ದಂತೆಯೇ ಅಭಿಮಾನಿಗಳು ಲವ್ ಸಿಂಬಲ್, ಶುಭಾಶಯಗಳು, ಸೂಪರ್ ಜೋಡಿ, ನಿಮ್ಮನ್ನ ಮದುವೆಯಾಗುವ ಹುಡುಗನಾ ಎಂದೆಲ್ಲ ಕಾಮೆಂಟ್ ಮಾಡುತ್ತಿದ್ದಾರೆ. ಫೋಟೋದಲ್ಲಿ ಅದಿತಿ ಕೈಯಲ್ಲಿರುವ ಉಂಗುರ ಹೈಲೈಟ್ ಆಗಿದೆ. ಆದರೆ ಈ ವಿಚಾರದ ಬಗ್ಗೆ ಅದಿತಿ ಯಾವುದೇ ಪ್ರತಿಕ್ರಿಯೆ ನೀಡಿದೆ ಮೌನಕ್ಕೆ ಶರಣಾಗಿದ್ದಾರೆ. ಈ ಮೂಲಕ ಅದಿತಿ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ಎಂಬ ಗುಸುಗುಸು ಆರಂಭವಾಗಿದೆ. ಇದನ್ನೂ ಓದಿ: ಹುಟ್ಟುಹಬ್ಬದ ಶುಭಾಶಯಗಳು ನನ್ನ ಪ್ರೀತಿಯ ಸಹೋದರ – ಸಲ್ಲುಗೆ ಕಿಚ್ಚನ ವಿಶ್
ಸದ್ಯ ಅದಿತಿ ಅವರು ಓಲ್ಡ್ ಮಾಂಕ್ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರ 2022ರ ಫೆಬ್ರವರಿಯಲ್ಲಿ ತೆರೆ ಕಾಣಲಿದೆ. ಶ್ರೀನಿ ನಿರ್ದೇಶಿಸಿ, ನಾಯಕನಾಗಿ ನಟಿಸುತ್ತಿರುವ ಈ ಚಿತ್ರ ಸೆಟ್ಟೇರಿದಾಗಿನಿಂದಲೂ ತನ್ನ ಟೈಟಲ್ ಹಾಗೂ ಕಂಟೆಂಟ್ ಮೂಲಕ ಸಿನಿಪ್ರಿಯರ ಗಮನ ಸೆಳೆದಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್, ಹಾಡು ಎರಡಕ್ಕೂ ಸೋಶಿಯಲ್ ಮೀಡಿಯಾಗಳಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಚಿತ್ರಕ್ಕೂ ಬೇಡಿಕೆ ಹೆಚ್ಚಾಗಿದೆ.
ಒಟ್ಟಿನಲ್ಲಿ ‘ರಂಗನಾಯಕಿ’ ಚಿತ್ರದ ನಂತರ ಮತ್ತೊಮ್ಮೆ ಶ್ರೀನಿ ಜೊತೆ ತೆರೆ ಮೇಲೆ ಜೊತೆಯಾಗಿದ್ದಾರೆ. ಸದ್ಯ ಅದಿತಿ ಅವರ ಮದುವೆ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ: ಡಿಕೆಶಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಪ್ರಶಾಂತ್ ಸಂಬರ್ಗಿ ವಿರುದ್ಧ FIR ದಾಖಲು