Bengaluru CityCinemaLatestMain PostSandalwood

ದೈಹಿಕ ಹಾಗೂ ಮಾನಸಿಕ ಅತ್ಯಾಚಾರಕ್ಕೆ ಕೊನೆ ಯಾವಾಗ?: ಶ್ರುತಿ

Advertisements

ಬೆಂಗಳೂರು: ದೈಹಿಕ ಹಾಗೂ ಮಾನಸಿಕ ಅತ್ಯಾಚಾರಕ್ಕೆ ಕೊನೆ ಯಾವಾಗ? ಎಂದು ಪ್ರಶ್ನಿಸಿ ಸ್ಯಾಂಡಲ್‍ವುಡ್ ನಟಿ ಶ್ರುತಿ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮೈಸೂರಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಘಟನೆ ಕುರಿತಾಗಿ ನಟಿ ಶ್ರುತಿ ಸಹ ಬೇಸರ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಶ್ರುತಿ, ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೈಹಿಕ ಹಾಗೂ ಮಾನಸಿಕ ಅತ್ಯಾಚಾರಕ್ಕೆ ಕೊನೆ ಯಾವಾಗ? ಇಂತಹ ಪುರುಷರ ಮನಸ್ಥಿತಿ ಬದಲಾಗುವುದು ಯಾವಾಗ?  ಕಾಮುಕರನ್ನ ಬಂಧಿಸುವ ಕಾನೂನು ಮತ್ತಷ್ಟು ಗಟ್ಟಿಯಾಬೇಕು. ಇಂಥಹ ಪುರುಷರು ಬೆಳೆಯುವ ಮನೆಯ ವಾತಾವರಣ, ಸಂಸ್ಕಾರ ಪೋಷಕರ ಜವಾಬ್ದಾರಿಯೂ ಆಗಿರುತ್ತದೆ. ಹುಟ್ಟಿನಿಂದ ಸಾವಿನವರೆಗೆ ಹೆಣ್ಣುಮಕ್ಕಳು ಅನುಭವಿಸುವ ಕಷ್ಟ ನೂರಾರು ಆಗಿದೆ. ಹಲವಾರು ಮಹಿಳೆಯರು ಅದನ್ನು ಹಿಮ್ಮೆಟ್ಟಿ ಇಡೀ ಭಾರತವೇ ಮೆಚ್ಚುವಂತ ಸಾಧನೆಯನ್ನು ಮಾಡುತ್ತಿದ್ದಾರೆ. ಸಾಮೂಹಿಕ ಅತ್ಯಾಚಾರದ ಘಟನೆಗಳು ಮಹಿಳೆಯ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸುವಂತಾಗುತ್ತದೆ ಇದು ಆಗದಿರಲಿ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:  ಮಹಿಳೆಯರ ವಿರುದ್ಧದ ಅಪರಾಧಗಳತ್ತ ಕಣ್ಣು ಮುಚ್ಚಬೇಡಿ, ಮಾತನಾಡಿ: ರಮ್ಯಾ

 

View this post on Instagram

 

A post shared by Shruthi (@shruthi__krishnaa)

ನಟಿ ರಮ್ಯಾ ಮಹಿಳೆಯ ಮೇಲೆ ಪುರುಷನು ಮಾಡುವ ಪ್ರತಿಯೊಂದು ಅಪರಾಧಕ್ಕೂ ನಾವು ಯಾವಾಗಲೂ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತೇವೆ. ಅದು ಅತ್ಯಾಚಾರವಾಗಲಿ ಅಥವಾ ಆತ ನಿಮ್ಮನ್ನು ದೈಹಿಕವಾಗಿ ಅಥವಾ ಮೌಖಿಕವಾಗಿ ನಿಂದಿಸುತ್ತಿರಲಿ. ನಾವು ಇದನ್ನು ಆಗಾಗ್ಗೆ ಕೇಳುತ್ತೇವೆ. ಇದು ನಿಮ್ಮ ತಪ್ಪು, ನೀವು ಹಾಗೆ ಹೇಳಬಾರದಿತ್ತು, ನೀವು ಅದನ್ನು ಮಾಡಬಾರದಿತ್ತು ಅಂತ ಹೇಳುತ್ತಾರೆ ಎಂದು ಇನ್‍ಸ್ಟಗ್ರಾಮ್‍ನಲ್ಲಿ ಬರೆದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಂದಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸ್ಯಾಂಡಲ್‍ವುಡ್ ನಟಿ ರಮ್ಯಾ, ಶ್ರುತಿ ಸಾಮಾಜಿಕ ಜಾಲತಾಣದಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಪೋಸ್ಟ್ ಮಾಡಿದ್ದಾರೆ.

Leave a Reply

Your email address will not be published.

Back to top button