ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಶ್ವೇತಾ ಶ್ರೀವಾತ್ಸವ್ ತುಂಡುಡುಗೆ ತೊಟ್ಟು ಸೂರ್ಯನ ಕಿರಣಗಳಿಗೆ ಮೈಯೊಡ್ಡಿ ಕಡಲ ತೀರದಲ್ಲಿ ನಿಂತಿರುವ ಫೋಟೋವನ್ನು ಇನ್‍ಸ್ಟಾಗ್ರಾಮ್ ಶೇರ್ ಮಾಡಿಕೊಂಡಿದ್ದಾರೆ.
ಶ್ವೇತಾ ಶ್ರೀವಾತ್ಸವ್ ಕುಟುಂಬದ ಜೊತೆಗೆ ಪ್ರವಾಸ ಮಾಡುತ್ತಿದ್ದಾರೆ. ಅವರ ಪ್ರವಾಸದ ಕೆಲವು ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ತುಂಡುಡುಗೆಯನ್ನು ತೊಟ್ಟ ಶ್ವೇತಾ ಶ್ರೀವಾತ್ಸವ್ ಸಖತ್ ಹಾಟ್ ಆಗಿ ಕಾಣಿಸುತ್ತಿದ್ದಾರೆ. ಅಭಿಮಾನಿಗಳು ಮೆಚ್ಚುಗೆ ಸೂಚಿಸಿ ಕಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಜನ್ಮದಿನಾಚರಣೆಯ ಸಂಭ್ರಮದಲ್ಲಿ ಸಿಂಪಲ್ ನಟಿ ಶ್ವೇತಾ ಶ್ರೀವಾತ್ಸವ್
ಸಿಂಪಲ್ ನಟಿ ಶ್ವೇತಾ ಶ್ರೀವಾತ್ಸವ್ ಕೆಲವು ದಿನಗಳ ಹಿಂದೆ 35ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇದೀಗ ಮಗಳು ಹಾಗೂ ಗಂಡನ ಜೊತೆ ಕಡಲ ತೀರದಲ್ಲಿ ಸಖತ್ ಎಂಜಾಯ್ ಮಾಡುತ್ತಾ ಕಾಲ ಕಳೆದಿದ್ದಾರೆ. ತಂಡುಡುಗೆ ತೊಟ್ಟು ಕಡಲ ತೀರದಲ್ಲಿ ಆಡುತ್ತಾ ಕ್ಯಾಮೆರಾಗೆ ಪೋಸ್ ಕೊಟ್ಟಿರುವ ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.
View this post on Instagram
ಸ್ಯಾಂಡಲ್‍ವುಡ್ ಸ್ಟಾರ್‌ಗಳ ಪೈಕಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯವಾಗಿರುವ ನಟಿಯರಲ್ಲಿ ಶ್ವೇತಾ ಶ್ರೀವಾತ್ಸವ್ ಅವರು ಸದಾ ಮುಂದಿರುತ್ತಾರೆ. ವಾರದಲ್ಲಿ 2-3 ಪೋಸ್ಟ್ ಮಾಡುವ ಮೂಲಕ ನೆಟ್ಟಿಗರ ಜೊತೆ ಸಂಪರ್ಕದಲ್ಲಿರುತ್ತಾರೆ.
ಮಗಳ ಲಾಲನೆ-ಪಾಲನೆ ಜೊತೆ ಅಭಿನಯವನ್ನೂ ಮುಂದುವರೆಸುತ್ತಿರುವ ನಟಿ ಶ್ವೇತಾ ಶ್ರೀವಾತ್ಸವ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಮಗುವಾದ ನಂತರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯವಾಗಿರುವ ಶ್ವೇತಾ, ಮಗಳು ಅಶ್ಮಿತಾ ಜೊತೆ ಫೋಟೋಶೂಟ್‍ಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ.