ಜಗತ್ತಿನಾದ್ಯಂತ ಕ್ರಿಸ್ಮಸ್ ಹಬ್ಬದ (Christmas Festival) ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ಏಸುಕ್ರಿಸ್ತನ ಸ್ಮರಣೆ ಮಾಡಲಾಗುತ್ತಿದೆ. ಇದರ ನಡುವೆ ಸಿನಿಮಾ ನಟ-ನಟಿಯರು ಕೂಡ ಕ್ರಿಸ್ಮಸ್ ಹಬ್ಬ ಸೆಲೆಬ್ರೇಟ್ ಮಾಡಿದ್ದಾರೆ. ಕ್ರಿಸ್ಮಸ್ ಹಬ್ಬದಂದು ಚೆಂದದ ಫೋಟೋಗಳನ್ನ ಕೂಡ ಶೇರ್ ಮಾಡಿದ್ದಾರೆ.
Advertisement
ಕ್ರಿಸ್ಮಸ್ ಹಬ್ಬದ ದಿನದಂದು ‘ಗಟ್ಟಿಮೇಳ’ (Gattimela) ಬ್ಯೂಟಿ ಶರಣ್ಯ ಶೆಟ್ಟಿ (Sharanya Shetty) ಅವರು ಕೆಂಪು ಬಣ್ಣದ ಉಡುಗೆಯಲ್ಲಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಕೆಂಪು ಕಲರ್ ಗೌನ್‌ಗೆ ಬಿಳಿ ಬಣ್ಣದ ಉಲ್ಲನ್ ಶಾಲ್ ಮತ್ತು ಟೋಪಿ ಧರಿಸಿ ಸಖತ್ ಹಾಟ್ ಆಗಿ ಪೋಸ್ ನೀಡಿದ್ದಾರೆ. ಶರಣ್ಯ ಲುಕ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ.
Advertisement
Advertisement
‘ಬಚ್ಚನ್’ ಚಿತ್ರದ ನಟಿ ಪಾರುಲ್ ಯಾದವ್ (Parul Yadav) ಅವರು ತಮ್ಮ ನಾಯಿ ಮರಿಗಳ ಜೊತೆ ಕ್ರಿಸ್ಮಸ್ ಆಚರಣೆ ಮಾಡಿದ್ದಾರೆ. ಇದರ ಸ್ಪೆಷಲ್ ಫೋಟೋಗಳನ್ನ ಕೂಡ ನಟಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಕೊನೆಗೂ ಮಗಳ ಮುಖ ರಿವೀಲ್ ಮಾಡಿದ ರಣ್‌ಬೀರ್-ಆಲಿಯಾ ದಂಪತಿ
Advertisement
ಉಗ್ರಂ, ಬಘೀರ ಹೀರೋ ಶ್ರೀಮುರಳಿ (Srimurali) ಕೂಡ ಕ್ರಿಸ್ಮಸ್ ಹಬ್ಬದ ಸಂಭ್ರಮದಲ್ಲಿದ್ದಾರೆ. ಪತ್ನಿ ವಿದ್ಯಾ ಮತ್ತು ಮಕ್ಕಳೊಂದಿಗಿನ ಹಬ್ಬದ ಫೋಟೋ ಶ್ರೀಮುರಳಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ:ನಿರೂಪ್ ಜೊತೆ ಡ್ಯುಯೆಟ್ ಹಾಡೋಕೆ ಸಜ್ಜಾದ ಬೃಂದಾ
ಬಾಲಿವುಡ್ ನಟಿ ಆಲಿಯಾ ಭಟ್ (Aliaa Bhatt) ದಂಪತಿ ಕೂಡ ತಮ್ಮ ಕುಟುಂಬದ ಜೊತೆ ಅದ್ದೂರಿಯಾಗಿ ಕ್ರಿಸ್ಮಸ್ ಹಬ್ಬ ಆಚರಣೆ ಮಾಡಿದ್ದಾರೆ. ಹಬ್ಬದ ಸುಂದರ ಫೋಟೋಗಳನ್ನ ನಟಿ ಹಂಚಿಕೊಂಡಿದ್ದಾರೆ.
ಇನ್ನೂ ಕ್ರಿಸ್ಮಸ್ ಹಬ್ಬದ ಖುಷಿಯಲ್ಲಿ ರಣ್‌ಬೀರ್-ಆಲಿಯಾ ಭಟ್ ಜೋಡಿ, ಮಗಳ ಮುಖವನ್ನ ರಿವೀಲ್ ಮಾಡಿದ್ದಾರೆ. ಕ್ರಿಸ್ಮಸ್ ಪಾರ್ಟಿವೊಂದರಲ್ಲಿ ಹೊರಬರುವಾಗ ಪಾಪರಾಜಿಗಳ ಕಣ್ಣಿಗೆ ರಾಹಾ ಮುದ್ದು ಮುದ್ದಾಗಿ ಪೋಸ್ ನೀಡಿದ್ದಾಳೆ.