ಮಿತ್ರ (Mithra) ಅಂದರೆ ಕನ್ನಡ ಸಿನಿಮಾರಂಗಕ್ಕೆ ಚಿರಪರಿಚಿತರು ಕಳೆದ ಎರಡು ದಶಕಗಳಿಂದ ಮಿತ್ರ ಕನ್ನಡ ಚಿತ್ರರಂಗದಲ್ಲಿ ಹಿರಿತೆರೆ ಕಿರುತೆರೆ ಸೇರಿದಂತೆ ಎಲ್ಲೆಡೆ ಭಿನ್ನ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನ ರಂಜಿಸುತ್ತಾ ಬಂದಿದ್ದಾರೆ. ಕಾಮಿಡಿ, ಎಮೋಷನ್ ಹೀಗೆ ಎಲ್ಲಾ ರೀತಿಯ ಪಾತ್ರಕ್ಕೂ ತಮ್ಮನ್ನ ತಾವು ಒಗ್ಗಿಸಿಕೊಂಡು ಅಭಿನಯಿಸುತ್ತಾ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ. ಇದನ್ನೂ ಓದಿ:ಮಲಯಾಳಂ ‘ಪಡಕ್ಕಳಂ’ ಚಿತ್ರಕ್ಕೆ ಚಾಲನೆ ನೀಡಿದ ಕೆ.ಆರ್.ಜಿ.ಸ್ಟುಡಿಯೋಸ್
ಆದರೆ ಈಗ ನಟ ಮಿತ್ರ ಅವರ ಖದರ್ ಬದಲಾಗಿದೆ. ಲುಕ್ ಬೇರೆಯದ್ದೇ ರೀತಿ ಇದೆ. ಯೆಸ್, ಮಿತ್ರ ಅವರು ಪ್ರಜ್ವಲ್ ದೇವರಾಜ್ (Prajwal Devaraj) ನಟನೆಯ ‘ಕರಾವಳಿ’ (Karavali Film) ಸಿನಿಮಾದಲ್ಲಿ ಮುಖ್ಯ ಪಾತ್ರವೊಂದರಲ್ಲಿ ಅಭಿನಯ ಮಾಡ್ತಿದ್ದಾರೆ. ಅದಕ್ಕಾಗಿ ಗೆಟಪ್ ಕೂಡ ಚೇಂಜ್ ಮಾಡಿಕೊಂಡರು. ಒಂದು ಸಿನಿಮಾಗಾಗಿ ಮಾಡಿಕೊಂಡ ಲುಕ್ ಈಗ ಮಿತ್ರ ಅವರ ಕೆರಿಯರ್‌ನಲ್ಲಿ ಟರ್ನಿಂಗ್ ಪಾಯಿಂಟ್ ಕೊಡ್ತಿದೆ.
ಇಷ್ಟು ದಿನಗಳ ಕಾಲ ಕಾಮಿಡಿ ಸ್ಟಾರ್ ಆಗಿ ಮಿಂಚ್ತಿದ್ದ ಮಿತ್ರ ಇನ್ನು ಮುಂದೆ ಸ್ಯಾಂಡಲ್‌ವುಡ್‌ನ ಖಡಕ್ ವಿಲನ್ ಆಗಲಿದ್ದಾರೆ. ಗಡ್ಡ ಬಿಟ್ಟು ಲುಕ್ ಬದಲಾಯಿಸಿಕೊಂಡ ಮೇಲೆ ಬೇರೆ ರೀತಿ ಪಾತ್ರಗಳು ಹುಡುಕಿ ಬರುತ್ತಿವೆಯಂತೆ. ಸದ್ಯ ಅದಕ್ಕಾಗಿ ಒಂದು ಸ್ಟೈಲೀಶ್ ವಿಲನ್ ಲುಕ್‌ನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ ಮಿತ್ರ.
ಸದ್ಯ ಮಿತ್ರ ಅವರು ಮಾಡಿಸಿರೋ ಫೋಟೋಶೂಟ್ ಫೋಟೋಗಳನ್ನ ನೋಡ್ತಿದ್ರೆ ವಾವ್ಹ್ ಮಿತ್ರ ಅವರು ಹೀಗೂ ಕಾಣ್ತಾರಾ ಅಂತ ಅನ್ನಿಸೋದು ಗ್ಯಾರೆಂಟಿ. ವಿಲನ್ ಲುಕ್ ನಲ್ಲಿ ಸಾಕಷ್ಟು ವಿಭಿನ್ನ ಶೇಡ್ ನಲ್ಲಿ ಮಿತ್ರ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಇನ್ನು ಈ ಫೋಟೋಶೂಟ್ ಮಾಡಿರೋದು ‘ಕರಾವಳಿ’ ಸಿನಿಮಾದ ಸಿನಿಮಾಟೋಗ್ರಾಫರ್ ಅಭಿಮನ್ಯು ಸದಾನಂದ್.
ಮಿತ್ರ ಅವರ ಈ ಲುಕ್ ಬರೀ ಲುಕ್ ಆಗಿಯೇ ಉಳಿದಿಲ್ಲ. ‘ಕರಾವಳಿ’ ಸಿನಿಮಾ ಬಿಟ್ಟು ಕನ್ನಡದ ದೊಡ್ಡ ಎರಡು ಸ್ಟಾರ್ ಸಿನಿಮಾಗಳಲ್ಲಿ ಮಿತ್ರ ಖಡಕ್ ವಿಲನ್ ಆಗಿ ಕಾಣಿಸಿಕೊಳ್ತಿದ್ದಾರೆ. ಅದರ ಜೊತೆಗೆ ತಮಿಳಿನ ಒಂದು ಸಿನಿಮಾಗೆ ವಿಲನ್ ಆಗಿ ಆಯ್ಕೆ ಆಗಿದ್ದಾರೆ. ಕಲಾವಿದ ಆದವರು ಎಂದಿಗೂ ಒಂದೇ ಪಾತ್ರಕ್ಕೆ ಅಂಟಿಕೊಳ್ಳಬಾರದು ವಯಸ್ಸಿಗೆ ತಕ್ಕಂತೆ ತಮ್ಮನ್ನ ನಾವು ಬದಲಾಯಿಸಿಕೊಳ್ಳಬೇಕು ಅನ್ನೋದನ್ನ ಮಿತ್ರ ಅವರು ಫಾಲೋ ಮಾಡಿದಂತಿದೆ. ಸದ್ಯ ಸಾಲ್ಟ್ ಅಂಡ್ ಪೆಪ್ಪರ್ ಲುಕ್ ಹಾಗೂ ಮಿಲನ್ ಖದರ್‌ನಲ್ಲಿ ಮಿತ್ರ ಸೂಪರ್ ಆಗಿ ಮಿಂಚ್ತಿದ್ದಾರೆ.