Connect with us

Bengaluru City

ಕನ್ನಡಿಗರ ಮನಸ್ಸಲ್ಲಿ ಅಪ್ಪಾಜಿ ಸದಾ ಜೀವಂತವಾಗಿರ್ತಾರೆ: ದರ್ಶನ್

Published

on

ಬೆಂಗಳೂರು: ಸ್ಯಾಂಡಲ್‍ವುಡ್ ರೆಬೆಲ್ ಸ್ಟಾರ್ ಅಂಬರೀಶ್ ಅವರು ನಿಧನರಾಗಿ ಇಂದಿಗೆ ಎರಡು ವರ್ಷಗಳೇ ಕಳೆಯಿತು. ಈ ಹಿನ್ನೆಲೆಯಲ್ಲಿ ಅಂಬಿ ಅವರನ್ನು ಅಪ್ಪಾಜಿ ಅಂತಲೇ ಕರೆಯುತ್ತಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್ ಮಾಡಿದ್ದಾರೆ.

ಅಪ್ಪಾಜಿ ಅವರು ಕನ್ನಡಿಗರ ಮನಸ್ಸಿನಲ್ಲಿ ಸದಾ ಜೀವಂತವಾಗಿರುತ್ತಾರೆ ಎಂದು ಹೇಳುವ ಮೂಲಕ ಎರಡನೇ ವರ್ಷದ ಪುಣ್ಯತಿಥಿಯಂದು ಅಂಬಿಯನ್ನು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಂಡ್ಯ ಜನ ಅಂಬರೀಶ್‍ನನ್ನು ದೇವರಂತೆ ಪೂಜಿಸ್ತಾ ಇದ್ರು: ಸುಮಲತಾ

ಟ್ವೀಟ್‍ನಲ್ಲೇನಿದೆ..?
ನನ್ನ ಪ್ರೀತಿಯ ಅಂಬಿ ಅಪ್ಪಾಜಿ ಇಂದಿಗೆ ದೈಹಿಕವಾಗಿ ಅಗಲಿ 2 ಸಂವತ್ಸರಗಳು ಕಳೆದಿವೆ. ಆದರೆ ನಮ್ಮೆಲ್ಲರ ಮನಗಳಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಅವರ ನೇರನುಡಿಯ ವ್ಯಕ್ತಿತ್ವ, ಮಾಡಿರುವ ಸಹೃದಯಿ ಕಾರ್ಯಗಳು ಸದಾ ಕನ್ನಡಿಗರ ಮನಸ್ಸಲ್ಲಿ ಜೀವಂತವಾಗಿರುತ್ತವೆ ಎಂದು ಬರೆದುಕೊಂಡಿದ್ದಾರೆ.

ಕಿಡ್ನಿ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅಂಬರೀಶ್ ಅವರು 2018ರ ನವೆಂಬರ್ 24ರಂದು ರಾತ್ರಿ ನಿಧನರಾಗಿದ್ದರು. ಅಂದೇ ಮಂಡ್ಯದಲ್ಲಿ ಬಸ್ ದುರಂತ ನಡೆದಿದ್ದು, ಘಟನೆ ನೋಡಿ ಸುಸ್ತಾಗಿದ್ದ ಅಂಬರೀಶ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗೆಂದು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಂಬರೀಶ್ ನಿಧನಕ್ಕೆ ರಾಜಕೀಯ, ಚಿತ್ರರಂಗ ಸೇರಿದಂತೆ ದೇಶಾದ್ಯಂತ ಕಂಬನಿ ಮಿಡಿದಿತ್ತು. ಇಂದು ಅವರ ಎರಡನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ಅಂಬಿ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಹಾಗೂ ಇತರ ಗಣ್ಯರು ಅವರ ಸಮಾಧಿPಗೆ ತೆರಳಿ ಪೂಜೆ ಸಲ್ಲಿಸಿದರು. ಇದೇ ವೇಳೆ ನಟ ದರ್ಶನ್ ಕೂಡ ತೆರಳಿ ಸಮಾಧಿಗೆ ಪೂಜೆ ಮಾಡಿದರು.

Click to comment

Leave a Reply

Your email address will not be published. Required fields are marked *

www.publictv.in