Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನಕರಾಜನಾದ ನಟ ಅನೂಪ್ ರೇವಣ್ಣ – ಇದು ಸಿಎಂ ಅಭಿಮಾನಿ ಸ್ಟೋರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕನಕರಾಜನಾದ ನಟ ಅನೂಪ್ ರೇವಣ್ಣ – ಇದು ಸಿಎಂ ಅಭಿಮಾನಿ ಸ್ಟೋರಿ

Latest

ಕನಕರಾಜನಾದ ನಟ ಅನೂಪ್ ರೇವಣ್ಣ – ಇದು ಸಿಎಂ ಅಭಿಮಾನಿ ಸ್ಟೋರಿ

Public TV
Last updated: October 10, 2025 7:03 pm
Public TV
Share
2 Min Read
Kanakaraja Kannada Movie
SHARE

ಎಸ್ ಆರ್ ಸನತ್ ಕುಮಾರ್ ಅವರು ನಿರ್ಮಿಸುತ್ತಿರುವ, ವಿ.ನಾಗೇಂದ್ರಪ್ರಸಾದ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಸಂಗೀತ ಸಂಯೋಜನೆಯನ್ನೂ ಮಾಡುತ್ತಿರುವ, ವಿ.ಎಂ.ರಾಜು ಮತ್ತು ನೀಲ್ ಕೆಂಗಾಪುರ ಜಂಟಿಯಾಗಿ ನಿರ್ದೇಶಿಸುತ್ತಿರುವ ಹಾಗೂ ಹೆಚ್.ಎಂ ರೇವಣ್ಣ ಅವರ ಪುತ್ರ ಅನೂಪ್ ರೇವಣ್ಣ ನಾಯಕನಾಗಿ ನಟಿಸುತ್ತಿರುವ ‘ಕನಕರಾಜ’ ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮಿ ಲೇಔಟ್ ನ ಪ್ರಸನ್ನ ಶ್ರೀವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್ ಎಂ ರೇವಣ್ಣ ಆರಂಭ ಫಲಕ ತೋರಿದರು. ಕರ್ನಾಟಕ ರಾಜ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಅವರು ಕ್ಯಾಮೆರಾ ಚಾಲನೆ ಮಾಡಿದರು. ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ನಾರ್ ಕೆ ವಿಶ್ವನಾಥ್ ಸೇರಿದಂತೆ ಮುಂತಾದ ಚಿತ್ರರಂಗದ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

Kanakaraja Kannada Movie 1

ಇಂದಿನ ಸಮಾರಂಭಕ್ಕೆ ಆಗಮಿಸಿರುವ ಪ್ರತಿಯೊಬ್ಬರಿಗೂ ಧನ್ಯವಾದ ಎಂದು ಮಾತನಾಡಿದ ನಿರ್ಮಾಪಕ ಸನತ್ ಕುಮಾರ್, ” ಕನಕರಾಜ” ನಮ್ಮ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಆರನೇ ಚಿತ್ರ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬಂದಿರುವ ನಮ್ಮ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಕನಕರಾಜ ಚಿತ್ರದಲ್ಲೂ ಯುವಜನತೆಗೆ ಉತ್ತಮ ಸಂದೇಶವಿದೆ. ನಮ್ಮ ರಾಜ್ಯದ ವಿವಿಧ ಊರುಗಳಲ್ಲಿ, ಪಕ್ಕದ ರಾಜ್ಯಗಳಲ್ಲಿ ಹಾಗೂ ವಿದೇಶದಲ್ಲೂ ಈ ಚಿತ್ರದ ಚಿತ್ರೀಕರಣ ನಡೆಯಲಿದೆ ಎಂದು ನಿರ್ಮಾಪಕ ಸನತ್ ಕುಮಾರ್ ತಿಳಿಸಿದರು.

ನಾವು ಸಾಮಾನ್ಯವಾಗಿ ಯವಜನತೆ ರಾಜಕೀಯಕ್ಕೆ ಬರಬೇಕು. ರಾಜಕಾರಣಿಯಾಗಬೇಕು ಅಂತ ಹೇಳುತ್ತಿರುತ್ತೇವೆ. ಈ ಮಾತನ್ನೇ ಪ್ರಮುಖವಾಗಿಟ್ಟುಕೊಂಡು ಈ ಚಿತ್ರದ ಕಥೆ ಮಾಡಲಾಗಿದೆ. ಚಿತ್ರದ ನಾಯಕ ವಕೀಲನಾಗಿದರೂ ರಾಜಕೀಯದಲ್ಲೂ ಸಕ್ರಿಯ. ಜೊತೆಗೆ ಮುಖ್ಯಮಂತ್ರಿಗಳ ಅಭಿಮಾನಿಯೂ ಹೌದು. ಹಾಗಾಗಿ ನಮ್ಮ “ಕನಕರಾಜ” ಚಿತ್ರಕ್ಕೆ “fan of cm” ಎಂಬ ಅಡಿಬರಹವಿದೆ ಎಂದು ಚಿತ್ರದ ಕಥೆಗಾರರೂ ಆಗಿರುವ ಸಂಗೀತ ನಿರ್ದೇಶಕ ವಿ.ನಾಗೇಂದ್ರಪ್ರಸಾದ್ ಹೇಳಿದರು.

 

ನಿರ್ಮಾಪಕರೂ ಹೇಳಿದ ಹಾಗೆ ನಮ್ಮ ಚಿತ್ರಕ್ಕೆ ಬೆಂಗಳೂರು, ಮಂಗಳೂರು, ಪಕ್ಕದ ರಾಜ್ಯಗಳು ಹಾಗೂ ವಿದೇಶದಲ್ಲೂ ಚಿತ್ರೀಕರಣ ನಡೆಯಲಿದೆ. ರಮೇಶ್ ಕೊಯಿರ ಛಾಯಾಗ್ರಹಣ, ಹಾಗೂ ಲಕ್ಷ್ಮಣ್ ರೆಡ್ಡಿ ಸಂಕಲನವಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳಿರುತ್ತದೆ ಎಂದರು ನಿರ್ದೇಶಕರಲ್ಲೊಬ್ಬರಾದ ವಿ.ಎಂ.ರಾಜು. ಮುಹೂರ್ತ ಸಮಾರಂಭಕ್ಕೆ ಬಂದಿರುವ ಪ್ರತಿಯೊಬ್ಬರಿಗೂ ನನ್ನ ಧನ್ಯಾವಾದ. ನಾನು ಈ ಚಿತ್ರದಲ್ಲಿ ಲಾಯರ್ ಪಾತ್ರ ಮಾಡುತ್ತಿದ್ದೇನೆ. ಮುಖ್ಯಮಂತ್ರಿಗಳ ಅಭಿಮಾನಿಯೂ ಹೌದು. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಾಯಕ ಅನೂಪ್ ರೇವಣ್ಣ ಹೇಳಿದರು.

ಕನಕರಾಜ ಚಿತ್ರದ ಕಥೆ ಹಾಗೂ ನನ್ನ ಪಾತ್ರ ಚೆನ್ನಾಗಿದೆ ಎಂದು ನಾಯಕಿ ನಿಮಿಷ ತಿಳಿಸಿದರು. ನಿರ್ಮಾಪಕ ಸನತ್ ಕುಮಾರ್ ಅವರು ನನ್ನ ಆತ್ಮೀಯ ಸ್ನೇಹಿತರು. ಅವರ ನಿರ್ಮಾಣದ ಚಿತ್ರದಲ್ಲಿ ನನ್ನ ಮಗ ಅನೂಪ್ ರೇವಣ್ಣ ನಾಯಕನಾಗಿ ನಟಿಸುತ್ತಿದ್ದಾರೆ. ಕಥೆ ಬಹಳ ಚೆನ್ನಾಗಿದೆ. ಚಿತ್ರ ಯಶಸ್ವಿಯಾಗಲೆಂದು  ಹೆಚ್ ಎಂ ರೇವಣ್ಣ ಹಾರೈಸಿದರು.

TAGGED:KanakarajaKannada movieRamalinga reddysandalwood
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
3 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
10 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
29 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
42 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
1 hour ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?