ಚೆಕ್‌ಬೌನ್ಸ್ ಪ್ರಕರಣದಲ್ಲಿ (Check Bounce Case) ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ (M.N Kumar) ಅವರನ್ನು ಉಪ್ಪಾರಪೇಟೆ (Upparpete Police) ಪೊಲೀಸರು ಬಂಧಿಸಿದ್ದಾರೆ.ಇದನ್ನೂ ಓದಿ:ಬೆಂ-ಮೈ ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿ – ನಾಲ್ವರು ದುರ್ಮರಣ
ಕನ್ನಡದ ಮಾಣಿಕ್ಯ, ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರಗುರು, ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿರುವ ಎಂ.ಎನ್ ಕುಮಾರ್ ಅವರನ್ನು ಕೋರ್ಟ್ ಸೂಚನೆ ಮೇರೆಗೆ ಬುಧವಾರ ತಡರಾತ್ರಿ 2ಗಂಟೆ ಸುಮಾರಿಗೆ ಹಾಸನದಲ್ಲಿ (Hassan) ಬಂಧಿಸಿದ್ದಾರೆ.
1.25 ಕೋಟಿ ರೂ. ವಂಚಿಸಿರುವ ವಿಚಾರವಾಗಿ ಕೇಸ್ ದಾಖಲಾಗಿದ್ದು, ಸದ್ಯ ಎಂಎನ್ ಕುಮಾರ್ ಅವರನ್ನು ಮೆಡಿಕಲ್ ಟೆಸ್ಟ್‌ಗೆ ಕರೆದುಕೊಂಡು ಹೋಗಲಾಗಿದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ:ತೆಲುಗಿನತ್ತ ಧರ್ಮ ಕೀರ್ತಿರಾಜ್- ಅಪ್ಸರ ರಾಣಿ ಜೊತೆ ಸಿನಿಮಾ