ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ ಇಂದಿಗೆ 6 ತಿಂಗಳು ಕಳೆದಿದೆ. ಅಪ್ಪು ನಿಧನ ಇಂದಿಗೂ ಅಭಿಮಾನಿಗಳಿಗೆ, ಕುಟುಂಬದವರಿಗೆ ಕಾಡ್ತಿದೆ. ಅಪ್ಪು ಆರು ತಿಂಗಳ ಪುಣ್ಯ ತಿಥಿ ಹಿನ್ನೆಲೆ ಪುನೀತ್ ಕುಟುಂಬದವರಿಂದ ಪುನೀತ್ ಸ್ಮಾರಕಕ್ಕೆ ಪೂಜೆ ಸಲ್ಲಿಸಲಾಗಿದೆ.
ಪುನೀತ್ ರಾಜ್‌ಕುಮಾರ್ ಅವರು ಇಹಲೋಕ ತ್ಯಜಿಸಿದ ದಿನದಿಂದ ಎಲ್ಲವನ್ನು ಅಚ್ಚುಕಟ್ಟಾಗಿ ನೆರವೇರಿಸಲಾಗುತ್ತಿದೆ. ಪ್ರತಿ ತಿಂಗಳು 29ನೇ ದಿನಾಂಕದಂದು ಕಂಠೀರವ ಸ್ಟುಡಿಯೋದಲ್ಲಿರೋ ಪುನೀತ್ ಸ್ಮಾರಕಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಈ ಬಾರಿಯು ಕೂಡ 6 ತಿಂಗಳ ಪುಣ್ಯ ಸ್ಮರಣೆ ಹಿನ್ನೆಲೆ ಪೂಜೆ ಕಾರ್ಯಗಳನ್ನು ದೊಡ್ಮನೆ ಕುಟುಂಬದವರು ಮಾಡಿದ್ದಾರೆ. ಇದನ್ನು ಓದಿ: ವಾಮನ ತೆಕ್ಕೆಗೆ ತುಳುನಾಡ ಬೆಡಗಿ ರಚನಾ ರೈ
ಅಪ್ಪು ಪುಣ್ಯ ಸ್ಮರಣೆ ಹಿನ್ನೆಲೆ ರಾಘವೇಂದ್ರ ರಾಜ್‌ಕುಮಾರ್, ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ಯುವರಾಜ್ ಮತ್ತು ಪುನೀತ್ ಸಹೋದರಿಯರು ಕೂಡ ಕಂಠೀರವ ಸ್ಟುಡಿಯೋದಲ್ಲಿರೋ ಪುನೀತ್ ಪುಣ್ಯ ಸ್ಮರಣೆಯಲ್ಲಿ ಭಾಗಿಯಾಗಿ ಪೂಜೆ ಸಲ್ಲಿಸಿದ್ದಾರೆ.