ಮೋಹಕ ತಾರೆ ರಮ್ಯಾ (Ramya) ಕೊನೆಗೂ ಸಿನಿಮಾಗೆ ಕಮ್ ಬ್ಯಾಕ್ ಆಗೋ ಕಾಲ ಬಂತು. ‘ರಂಗ ಎಸ್‌ಎಸ್‌ಎಲ್‌ಸಿ’ ಆದ್ಮೇಲೆ 20 ವರ್ಷಗಳ ಬಳಿಕ ಮತ್ತೆ ಯೋಗರಾಜ್ ಭಟ್ (Yogaraj Bhat) ಜೊತೆ ಸಿನಿಮಾ ಮಾಡೋಕೆ ರಮ್ಯಾ ಸಾಥ್ ನೀಡಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ರಮ್ಯಾ ಮತ್ತೆ ಬೆಳ್ಳಿಪರದೆಯಲ್ಲಿ ಮಿಂಚಲು ವೇದಿಕೆ ಸಜ್ಜಾಗಿದೆ. ವಿಕಟಕವಿ ನಿರ್ದೇಶಕ ಯೋಗರಾಜ್ ಭಟ್ ಅವರು ಬರೆದ ಸ್ಕ್ರಿಪ್ಟ್ ಇಷ್ಟವಾಗಿ ನಟಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ‘ಮನದ ಕಡಲು’ ಸಿನಿಮಾಗೆ ಬಂಡವಾಳ ಹೂಡಿರುವ ಇ. ಕೃಷ್ಣಪ್ಪ ಮತ್ತು ಜಿ. ಗಂಗಾಧರ್ ಅವರು ರಮ್ಯಾ ಕಮ್ ಬ್ಯಾಕ್ ಚಿತ್ರಕ್ಕೆ ನಿರ್ಮಾಣ ಮಾಡ್ತಿದ್ದಾರೆ. ಈ ಚಿತ್ರಕ್ಕೆ ರಮ್ಯಾ ನಿರ್ಮಾಣದ ಸಂಸ್ಥೆ ‘ಆ್ಯಪಲ್ ಬ್ಯಾಕ್ಸ್’ ಕೂಡ ಕೈ ಜೋಡಿಸಲಿದೆ.
ಸದ್ಯ ರಮ್ಯಾ ಕಮ್ ಬ್ಯಾಕ್ ಸಿನಿಮಾ ಯಾರ ನಿರ್ದೇಶನದಲ್ಲಿ ಎಂದು ಕೇಳಿಯೇ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ರಮ್ಯಾ ಜೊತೆ ಯಾರೆಲ್ಲಾ ನಟಿಸ್ತಾರೆ? ಯಾವಾಗಿನಿಂದ ಶೂಟಿಂಗ್ ಶುರು ಆಗಲಿದೆ ಎಂಬ ಮಾಹಿತಿ ಇನ್ನೂ ಚಿತ್ರತಂಡದ ಕಡೆಯಿಂದ ರಿವೀಲ್ ಆಗಬೇಕಿದೆ. ಇದನ್ನೂ ಓದಿ:ಉಪ್ಪಿ ಅಣ್ಣನ ಮಗನಿಗೆ ಮಹಾಂತೇಶ್ ಹಂದ್ರಾಳ್ ಆ್ಯಕ್ಷನ್ ಕಟ್
ನಿನ್ನೆ ಫಿಲ್ಮ್ ಫಿಸ್ಟಿವಲ್ ಸಂವಾದದಲ್ಲಿ ಭಾಗಿಯಾಗಿದ್ದ ರಮ್ಯಾ ಅವರು ಸಿನಿಮಾ ಕಮ್ ಬ್ಯಾಕ್ ರಿಯಾಕ್ಟ್ ಮಾಡಿದ್ದರು. ಈಗಾಗಲೇ 4 ಸ್ಕ್ರಿಪ್ಟ್ ಕೇಳಿದ್ದೇನೆ. ಬಹುಶಃ ಅದರಲ್ಲಿ ಒಂದು ಸಿನಿಮಾದಲ್ಲಿ ನಾನು ನಟಿಸುತ್ತೇನೆ ಎಂದು ಮಾತನಾಡಿದ್ದರು. ಅದರಂತೆ ಈಗ ಗುಡ್ ನ್ಯೂಸ್ ಸಿಕ್ಕಿದೆ.
ಅಂದಹಾಗೆ, 2004ರಲ್ಲಿ ಯೋಗರಾಜ್ ಭಟ್ ನಿರ್ದೇಶನದ ‘ರಂಗ ಎಸ್‌ಎಸ್‌ಎಲ್‌ಸಿ’ ಚಿತ್ರದಲ್ಲಿ ಸುದೀಪ್‌ಗೆ (Sudeep) ನಾಯಕಿಯಾಗಿ ರಮ್ಯಾ ನಟಿಸಿದ್ದರು. ಕಡೆಯದಾಗಿ 2016ರಲ್ಲಿ ‘ನಾಗರಹಾವು’ ಸಿನಿಮಾದಲ್ಲಿ ದಿಗಂತ್ ಜೊತೆ ರಮ್ಯಾ ನಟಿಸಿದ್ದರು. ಬಳಿಕ 2023ರಲ್ಲಿ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದರು.