Bengaluru CityKarnatakaLatestLeading NewsMain Post

ಜಡಿ ಮಳೆಯಲ್ಲೇ ರಾಹುಲ್ ಗಾಂಧಿ ಭಾಷಣ- ಇದು ಸುದ್ದಿಯೇ ಅಲ್ಲ ಅಂದ್ರು ರಮ್ಯಾ!

ಬೆಂಗಳೂರು: ಭಾರತ ಜೋಡೋ ಯಾತ್ರೆ (Bharat Jodo Yatre) ಯಲ್ಲಿ ಬ್ಯುಸಿಯಾಗಿರುವ ಕೈ ನಾಯಕ ರಾಹುಲ್ ಭಾನುವಾರ ಜಡಿ ಮಳೆ ಸುರಿಯುತ್ತಿದ್ದರೂ ಭಾಷಣ ಮಾಡಿದ್ದರು. ಮಳೆಯನ್ನೂ ಲೆಕ್ಕಿಸದೆ ರಾಹುಲ್ ಗಾಂಧಿ (Rahul Gandhi) ಭಾಷಣ ಮಾಡುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಈ ಫೋಟೋವನ್ನು ಸ್ಯಾಂಡಲ್‍ವುಡ್ ಕ್ವೀನ್ ರಮ್ಯಾ (Ramya) ಕೂಡ ಶೇರ್ ಮಾಡಿಕೊಂಡು ಕ್ಯಾಪ್ಷನ್ ಕೊಟ್ಟಿದ್ದಾರೆ. ಇಲ್ಲಿ ರಾಹುಲ್ ಗಾಂಧಿ ಮಳೆಯಲ್ಲಿ ಭಾಷಣ ಮಾಡುತ್ತಿರುವುದು ಸುದ್ದಿಯಲ್ಲ, ಆ ಜಡಿ ಮಳೆಯಲ್ಲಿಯೂ ಭಾಷಣ (Speech) ಕೇಳಲು ಸಾಕಷ್ಟು ಮಂದಿ ನೆರೆದಿರುವುದೇ ವಿಶೇಷ. ಜನ ನೆರೆದಿರುವುದೇ ಎಲ್ಲವನ್ನೂ ನಿಮಗೆ ತಿಳಿಸುತ್ತದೆ. ಅಂದರೆ ರಾಹುಲ್ ಗಾಂಧಿ ಭಾಷಣ ಕೇಳಲು ಜನ ಕಿಕ್ಕಿರಿದು ನಿಂತಿರುವುದು ಗಮನಸೆಳೆದಿದೆ ಎಂದು ಹೇಳುವ ಮೂಲಕ ರಮ್ಯಾ ಅವರು ಕೈ ನಾಯಕನನ್ನು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ಐಸಿಯುನಲ್ಲಿ ಮುಲಾಯಂ ಸಿಂಗ್ – ಅಖಿಲೇಶ್‍ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

ಮಳೆಯಲ್ಲೇ ಭಾಷಣ: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆ ಭಾನುವಾರ ಮೈಸೂರು (Mysuru) ತಲುಪಿದೆ. ಬಂಡೀಪಾಳ್ಯ ಸಮೀಪ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ರಾಹುಲ್ ಗಾಂಧಿ ಭಾಷಣದ ವೇಳೆ ಭಾರೀ ಮಳೆಯಾಗಿದೆ. ಮಳೆಯಲ್ಲಿಯೂ ರಾಹುಲ್ ಗಾಂಧಿ ಭಾಷಣ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಕಾಂಗ್ರೆಸ್ (Congress) ನಾಯಕರು ಸಹ ಮಳೆಯಲ್ಲಿ ನೆನೆಯುತ್ತಾ ವೇದಿಕೆ ಮೇಲೆಯೇ ಕುಳಿತುಕೊಂಡಿದ್ದರು. ಇದನ್ನೂ ಓದಿ: ಎಐಸಿಸಿ ಅಧ್ಯಕ್ಷೀಯ ಚುನಾವಣೆ – ಮಗನ ಜೊತೆ ಚರ್ಚಿಸೋಕೆ ರಾಜ್ಯಕ್ಕೆ ಬರ್ತಿದ್ದಾರೆ ಸೋನಿಯಾ

ಸಂಜೆ 6.40ರ ಸುಮಾರಿಗೆ ಬಂಡೀಪಾಳ್ಯ ಸಮೀಪಿಸುತ್ತಿದ್ದಂತೆಯೇ ಜೋರು ಮಳೆಯಾಗಿದೆ. ಈ ವೇಳೆ ಎಪಿಎಂಸಿ ಸಮೀಪದಲ್ಲಿ ನಡೆದ ಕಾರ್ನರ್ ಮೀಟಿಂಗ್‍ನಲ್ಲಿ ಮಳೆಯಲ್ಲೇ ಭಾಷಣ ಮಾಡಿದ ರಾಹುಲ್, ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ಧೋರಣೆ ವಿರುದ್ಧ ಧ್ವನಿ ಎತ್ತುತ್ತಲೇ ಇರುತ್ತೇನೆ. ಯಾವ ಕಾರಣಕ್ಕೂ ಯಾತ್ರೆ ನಿಲ್ಲುವುದಿಲ್ಲ. ಈಗ ಮಳೆ ಬರುತ್ತಿದೆ, ಹಾಗೆಂದು ಪಾದಯಾತ್ರೆ ನಿಲ್ಲಿಸಿದ್ದೇವೆಯೇ ಎಂದು ಪ್ರಶ್ನಿಸಿದರು.

Live Tv

Leave a Reply

Your email address will not be published. Required fields are marked *

Back to top button