ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್‍ವುಡ್‍ನ ಹಿರಿಯ ಹಾಸ್ಯ ಕಲಾವಿದ ಶಂಕರ್ ರಾವ್(84) ಇಂದು ಕೊನೆಯುಸಿರೆಳೆದಿದ್ದಾರೆ.
Advertisement
ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್ ರಾವ್ ಇಂದು ಬೆಳಗಿನ ಜಾವ 6:30ರ ಸುಮಾರಿಗೆ ತಮ್ಮ ಅರಕೆರೆಯ ನಿವಾಸದಲ್ಲಿ ನಿಧನರಾಗಿದ್ದು, ಇವರು ಪಾಪ ಪಾಂಡು ಧಾರಾವಾಹಿಯ ಪಾತ್ರದಿಂದ ಜನಮನ್ನಣೆಗಳಿಸಿದ್ದರು. ಕನ್ನಡದ ಹಲವಾರು ಜನಪ್ರಿಯ ನಟರೊಂದಿಗೆ ನಟಿಸಿ ಕನ್ನಡದ ಸಿನಿ ಪ್ರೇಕ್ಷಕರನ್ನು ತಮ್ಮ ಹಾಸ್ಯದ ಮೂಲಕ ರಂಜಿಸಿದ ಕಲಾವಿದ ಇಂದು ಇಹಲೋಕ ತ್ಯಜಿಸಿದ್ದಾರೆ. ಕಲಾವಿದನ ಆಗಲಿಕೆಗೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಇದನ್ನೂ ಓದಿ: ಕಠಿಣ ಸಮಯ ಬರುವುದು ಸಹಜ, ಅದನ್ನು ಶಾಂತಿ, ನಗುವಿನಿಂದ ಎದುರಿಸಬೇಕು: ಸುದೀಪ್
Advertisement
Advertisement
ಶಂಕರ್ ರಾವ್ ಹವ್ಯಾಸಿ ರಂಗಭೂಮಿ ಕಲಾವಿದರಾಗಿದ್ದು, ರಂಗಭೂಮಿಯಲ್ಲಿ ಗುರುತಿಸಿಕೊಂಡು ಬಳಿಕ ಸಿನಿಮಾ ರಂಗದಲ್ಲಿ ಅವಕಾಶ ಪಡೆದಿದ್ದರು. ಸಿನಿಮಾ ರಂಗದಲ್ಲಿ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಅಪ್ಪು, ಧ್ರುವ, ಖುಷಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಬಣ್ಣ ಹಚ್ಚಿ ಸೈ ಎನಿಸಿಕೊಂಡಿದ್ದರು. ಶಂಕರ್ ರಾವ್ ಅವರ ಅಂತ್ಯಕ್ರಿಯೆ ಬನಶಂಕರಿ ಚಿತಾಗಾರದಲ್ಲಿ ಇಂದು ಮಧ್ಯಾಹ್ನ ನಡೆಯಲಿದೆ. ಇದನ್ನೂ ಓದಿ: ಅಂದು ನನ್ನ ನಂಬಿ ಸಿನಿಮಾ ಮಂದಿರಕ್ಕೆ ಬಂದವ್ರಲ್ಲಿ ಕ್ಷಮೆ ಕೇಳುತ್ತೇನೆ: ಸುದೀಪ್