ಕಿಚ್ಚ ಸುದೀಪ್‍ಗೆ 50ರ ಸಂಭ್ರಮ- ನಂದಿಗ್ರೌಂಡ್ಸ್‌ನಲ್ಲಿ ಅಭಿಮಾನಿಗಳಿಂದ ಸೆಲಬ್ರೇಷನ್

Public TV
1 Min Read
SUDEEP

ಸ್ಯಾಂಡಲ್‍ವುಡ್ ಬಾದ್ ಷಾ ಕಿಚ್ಚ ಸುದೀಪ್‍ಗೆ (Kichcha Sudeep Birthday) ಇಂದು 50ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಈ ಬಾರಿ ತಮ್ಮ ಹುಟ್ಟುಹಬ್ಬವನ್ನ ಕಿಸುದೀಪ್ ಅಭಿಮಾನಿಗಳ ಜೊತೆ ಆಚರಿಸಿಕೊಂಡಿದ್ದಾರೆ.

ಶುಕ್ರವಾರ ರಾತ್ರಿ ನಂದಿ ಲಿಂಕ್ ಗ್ರೌಂಡ್‍ನಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಸಂಭ್ರಮದಲ್ಲಿ ಭಾಗಿಯಾಗಿದರು. ಸುದೀಪ್ ಪತ್ನಿ ಪ್ರಿಯಾ, ಪುತ್ರಿ ಸೇರಿದಂತೆ ಕುಟುಂಬಸ್ಥರು, ಸ್ನೇಹಿತರು ಭಾಗಿಯಾಗಿ ಕೇಕ್ ತಿನ್ನಿಸಿ, ಶುಭಕೋರಿದ್ರು.

ಡ್ರೋಣ್ ಲೈಟಿಂಗ್ ಮೂಲಕ ಪತ್ನಿ ಪ್ರಿಯಾ ಸ್ಪೆಷಲ್ ವಿಶ್ ಮಾಡಿದರು. ಇಂದು ಜೆಪಿ ನಗರದ ನಿವಾಸದಲ್ಲಿ ಅಭಿಮಾನಿಗಳ ಜೊತೆ ಕಿಚ್ಚ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

ಇತ್ತ ಸ್ಯಾಂಡಲ್‌ವುಡ್ (Sandalwood) ಹೀರೋ ಕಿಚ್ಚ ಸುದೀಪ್ (Kichcha Sudeep) ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕಿಚ್ಚನ ಹುಟ್ಟುಹಬ್ಬಕ್ಕೆ ಒಂದು ದಿನ ಮುಂಚಿತವಾಗಿ ಅವರ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ. ಸುದೀಪ್ ಮುಂದಿನ ಚಿತ್ರಕ್ಕೆ ಕೆಆರ್‌ಜಿ ನಿರ್ಮಾಣ ಸಂಸ್ಥೆ ಕೈಜೋಡಿಸಿದ್ದಾರೆ.

ಸುದೀಪ್ ಅವರು ಬೆಸ್ಟ್ ನಟ ಮಾತ್ರವಲ್ಲ, ದಿ ಬೆಸ್ಟ್ ಡೈರೆಕ್ಟರ್ ಅನ್ನೋದನ್ನ ಈಗಾಗಲೇ ಪ್ರೂವ್ ಮಾಡಿದ್ದಾರೆ. ಕೆಂಪೇಗೌಡ, ಮಾಣಿಕ್ಯ, ಮೈ ಆಟೋಗ್ರಾಫ್ ಸೇರಿದಂತೆ ಹಲವು ಸಿನಿಮಾಗಳ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಒಂದು ದಿನ ಮುಂಚಿತವಾಗಿ ಸಿಹಿಸುದ್ದಿ ನೀಡಿದ್ದಾರೆ.

Web Stories

Share This Article