5ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿ ರಾಧಿಕಾ-ಯಶ್

Public TV
2 Min Read
yash son

ಬೆಂಗಳೂರು: ಚಂದನವನದ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಇಂದು 5ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ.

yash radhika

ಮದುವೆ ವಾರ್ಷಿಕೋತ್ಸವದ ಹಿನ್ನೆಲೆ ರಾಧಿಕಾ ಅವರು ಇನ್‍ಸ್ಟಾಗ್ರಾಮ್ ನಲ್ಲಿ ಬ್ಯೂ ಟ್ಯಾಪ್ಲಿನ್ ಬರೆದ ಸಾಲುಗಳನ್ನು ಬರೆದು, ಯಶ್ ಜೊತೆಗಿನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಈ ಸಾಲಿನಲ್ಲಿ, ಯಾರಾದರೂ ನಿಮ್ಮನ್ನು ನೀವು ಉತ್ತಮಗೊಳ್ಳುವಂತೆ ಮಾಡುವ ಪ್ರೀತಿಯಲ್ಲಿ ಮತ್ತು ಜೀವನದಲ್ಲಿ ನಿಮ್ಮನ್ನು ಪ್ರೇರೇಪಿಸುವ, ಪ್ರೋತ್ಸಾಹಿಸುವ, ನೀವು ನಿರ್ಲಕ್ಷಿಸುವ ಕನಸುಗಳು ಮತ್ತು ಗುರಿಗಳ ಕಡೆಗೆ ನಿಮ್ಮನ್ನು ಮತ್ತೆ ತಳ್ಳುವವರು, ಯಾವುದೇ ಅಪೇಕ್ಷೆಗಳಿಲ್ಲದೆ ನಿಸ್ವಾರ್ಥವಾಗಿ ಅವರ ಸಮಯವನ್ನು ನಿಮಗಾಗಿ ತ್ಯಾಗ ಮಾಡುವವರು ನಿಮ್ಮ ಜೀವನದಲ್ಲಿ ಇದ್ದರೆ, ನೀವು ಧೈರ್ಯಶಾಲಿ, ಸುಸಜ್ಜಿತ ಸಂತೋಷದ ವ್ಯಕ್ತಿಯಾಗಲು ಸಹಾಯ ಮಾಡುತ್ತೆ. ಅಂತಹ ಸಂಬಂಧ ಪವಿತ್ರವಾದದ್ದು, ಅಂತಹ ಪ್ರೀತಿಯನ್ನು ನೀವು ಹಿಡಿದುಕೊಳ್ಳಿ ಎಂದು ಬರೆದು ಯಶ್‍ಗೆ ಮದುವೆ ವಾರ್ಷಿಕೋತ್ಸವದ ವಿಶ್ ಮಾಡಿದ್ದಾರೆ. ಇದನ್ನೂ ಓದಿ: ಐರಾಗೆ ಹುಟ್ಟುಹಬ್ಬದ ಸಂಭ್ರಮ – ನಿನ್ನ ಕೈ ಹಿಡಿಯಲು ಯಾವಾಗಲೂ ಇರುತ್ತೇನೆ ಅಂದ ರಾಧಿಕಾ

ಇನ್‍ಸ್ಟಾದಲ್ಲಿ ರಾಧಿಕಾ, ಯಶ್ ಜೊತೆಗೆ ಬೀಚ್ ನಲ್ಲಿ ಕೈಹಿಡಿದುಕೊಂಡು ಕುಳಿತುಕೊಂಡಿರುವ ಫೋಟೋವನ್ನು ಶೇರ್ ಮಾಡಿದ್ದು, ಬ್ಯೂ ಟ್ಯಾಪ್ಲಿನ್ ಬರೆದ ಸಾಲುಗಳನ್ನು ಯಶ್ ಗೆ ಅರ್ಪಿಸಿದ್ದಾರೆ. ಈ ಸಾಲುಗಳ ಮೂಲಕ ಯಶ್ ನನಗೆ ಎಷ್ಟು ಪರ್ಫೆಕ್ಟ್ ಜೋಡಿ ಎಂದು ಹೇಳಿದ್ದಾರೆ.

yash and radhika pandit

ಈ ಜೋಡಿ ಚಂದನವನದ ರಾಕಿಂಗ್ ಜೋಡಿಯಾಗಿದ್ದು, ಇವರ ಕುಟುಂಬ ಎಲ್ಲರಿಗೂ ಆಕರ್ಷಣೆಯ ಕೇಂದ್ರವಾಗಿರುತ್ತೆ. ಇವರ ಪ್ರತಿಯೊಂದು ಅಪ್ಡೇಟ್ ಗಳನ್ನು ಅಭಿಮಾನಿಗಳು ಕೇಳಲು ಕಾತುರದಿಂದ ಕಾಯುತ್ತಿರುತ್ತಾರೆ. ಈ ಜೋಡಿ ಸಿನಿಮಾದಲ್ಲಿಯೂ ಸೂಪರ್ ಹಿಟ್ ಆಗಿದ್ದು, ನಿಜ ಜೀವನದಲ್ಲಿಯೂ ವೈಯಕ್ತಿಕ ಜೀವನದ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿರುತ್ತಾರೆ. ಇದನ್ನೂ ಓದಿ: ಓಟದ ಮೂಲಕ ಅಪ್ಪು ಸಮಾಧಿಗೆ ಹೊರಟ ಮಹಿಳೆಯ ಆರೋಗ್ಯ ವಿಚಾರಿಸಿದ್ರು ರಾಘಣ್ಣ

yash 1 1

ಈ ಜೋಡಿ 2016ರ ಡಿಸೆಂಬರ್ 9 ರಂದು ವಿವಾಹವಾಗಿದ್ದು, ಇವರಿಗೆ ಇಬ್ಬರು ಮಕ್ಕಳಿದ್ದಾರೆ. 2018 ಡಿಸೆಂಬರ್ ನಲ್ಲಿ ಹೆಣ್ಣು ಮಗು ಜನಿಸಿದ್ದು, ಆ ಮಗುವಿಗೆ ‘ಐರಾ’ ಎಂದು ಹೆಸರಿಟ್ಟರು. ನಂತರ 2019 ರಲ್ಲಿ ಗಂಡು ಮಗು ಜನಿಸಿದ್ದು, ಆ ಮಗುವಿಗೆ ‘ಯಥರ್ವ್’ ಎಂದು ಹೆಸರಿಟ್ಟಿದ್ದಾರೆ. ಈ ಸ್ಟಾರ್ ಜೋಡಿಗಳಂತೆ ಇವರ ಮಕ್ಕಳು ಸ್ಟಾರ್ ಆಗಿದ್ದು, ಇವರಿಬ್ಬರಿಗೂ ಅಭಿಮಾನಿ ಬಳಗವಿದೆ.

Share This Article
Leave a Comment

Leave a Reply

Your email address will not be published. Required fields are marked *