ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನಿಗಾಗಿ ಒಂದಾದ ಸ್ಯಾಂಡಲ್ ವುಡ್ ಸ್ಟಾರ್ಸ್

Public TV
1 Min Read
FotoJet 66

ವಿಚಂದ್ರನ್ ಎರಡನೇ ಪುತ್ರ ವಿಕ್ರಮ್ ಇದೀಗ ಸಿನಿಮಾ ರಂಗಕ್ಕೆ ಪದಾರ್ಪಣೆ ಮಾಡಿ, ಮೊದಲನೇ ಸಿನಿಮಾವನ್ನು ಅಭಿಮಾನಿಗಳಿಗೆ ಉಡುಗೊರೆಯಾಗಿ ನೀಡುತ್ತಿದ್ದಾರೆ. ಇನ್ನೇನು ಅವರ ಚೊಚ್ಚಲ ಸಿನಿಮಾ ರಿಲೀಸ್ಗೆ ರೆಡಿಯಿದೆ. ಇದೇ ವೇಳೆಯಲ್ಲಿ ನಾಳೆ, ವಿಕ್ರಮ್ ನಟನೆಯ ‘ತ್ರಿವಿಕ್ರಮ್’ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಆಯೋಜನೆ ಮಾಡಲಾಗಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ನ ಹಲವು ತಾರೆಯರು ಭಾಗಿಯಾಗಲಿದ್ದಾರೆ.

dhananjay 2

ಕ್ರೇಜಿಸ್ಟಾರ್ ರವಿಚಂದ್ರನ್ ಮತ್ತು ಅವರ ತಂದೆಯವರು ಕನ್ನಡ ಸಿನಿಮಾ ರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ರವಿಚಂದ್ರನ್ ಮೊದಲ ಪುತ್ರ ಕೂಡ ಈಗಾಗಲೇ ಹೀರೋ ಆಗಿ ಲಾಂಚ್ ಆಗಿದ್ದಾರೆ. ಎರಡನೇ ಮಗ ಕೂಡ ಸಿನಿಮಾ ರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಈ ಎಲ್ಲದರ ಸಂಭ್ರಮವನ್ನು ನಾಳೆ ಚಿತ್ರರಂಗದ ನಟರು ಒಟ್ಟಾಗಿ ಆಚರಿಸುತ್ತಿದ್ದಾರೆ. ಈ ಮೂಲಕ ರವಿಚಂದ್ರನ್ ಅವರಿಗೆ ಗೌರವವನ್ನೂ ಸೂಚಿಸುತ್ತಿದ್ದಾರೆ. ವಿಕ್ರಮ್ ಅವರ ಮೊದಲ ಸಿನಿಮಾ ಇದಾಗಿದ್ದರಿಂದ, ಮನತುಂಬಿ ಹಾರೈಸಲು ಸಜ್ಜಾಗಿದ್ದಾರೆ. ಇದನ್ನೂ ಓದಿ:ಬಾಮೈದನಿಂದಲೇ ಸ್ಯಾಂಡಲ್‌ವುಡ್ ನಟ ಸತೀಶ್ ಬರ್ಬರ ಹತ್ಯೆ?

tara anuradha

ನಾಳೆ ನಡೆಯಲಿರುವ ಪ್ರಿ ಇವೆಂಟ್ ಕಾರ್ಯಕ್ರಮದಲ್ಲಿ ಹಿರಿಯ ನಟ ಶಿವರಾಜ್ ಕುಮಾರ್, ತೆಲುಗು ನಟ ಸುಮನ್, ಡಾಲಿ ಧನಂಜಯ, ಜೋಗಿ ಪ್ರೇಮ್,  ಶರಣ್, ರಕ್ಷಿತಾ, ಶೃತಿ, ತಾರಾ, ನಿಶ್ವಿಕಾ ನಾಯ್ಡು, ಅಜಯ್ ರಾವ್, ಶ್ರೀನಗರ ಕಿಟ್ಟಿ, ರವಿಶಂಕರ್ ಗೌಡ, ಲೂಸ್ ಮಾದ ಯೋಗಿ, ನೀನಾಸಂ ಸತೀಶ್, ಡಾರ್ಲಿಂಗ್ ಕೃಷ್ಣ, ಮನುರಂಜನ್ ರವಿಚಂದ್ರನ್, ವಸಿಷ್ಠ ಸಿಂಹ ಸೇರಿದಂತೆ ಹಲವರು ಆಗಮಿಸಲಿದ್ದಾರೆ.

prem 3

ತ್ರಿವಿಕ್ರಮ್ ಸಿನಿಮಾ  ರಾಮ್ಕೊ ಸೋಮಣ್ಣ ನಿರ್ಮಾಣದಲ್ಲಿ ಮೂಡಿ ಬಂದಿದ್ದು, ಸಹನಾ‌ಮೂರ್ತಿ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಪ್ರವಾಸ ಮಾಡಿ, ಸಿನಿಮಾದ ಪ್ರಚಾರವನ್ನೂ ಚಿತ್ರತಂಡ ಮಾಡುತ್ತಿದೆ. ಒಳ್ಳೆಯ ಪ್ರತಿಕ್ರಿಯೆ ಕೂಡ ಸಿಗುತ್ತಿದೆ.

Live Tv

Share This Article
Leave a Comment

Leave a Reply

Your email address will not be published. Required fields are marked *