ಬೆಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ “ಜಸ್ಟೀಸ್ ಫಾರ್ ಮಧು” ಅಭಿಯಾನ ನಡೆಯುತ್ತಿದೆ. ಈ ಅಭಿಯಾನಕ್ಕೆ ಈಗ ಸೆಲೆಬ್ರೆಟಿಗಳೂ ಸಾಥ್ ನೀಡಿದ್ದಾರೆ.
ಈ ಕುರಿತು ಸ್ಯಾಂಡಲ್‌ವುಡ್ ಸ್ಟಾರ್‌ಗಳಾದ ನೀನಾಸಂ ಸತೀಶ್, ಹರ್ಷಿಕಾ ಪೂಣಚ್ಚ, ರಶ್ಮಿಕಾ ಮಂದಣ್ಣ, ರಕ್ಷಿತಾ ಪ್ರೇಮ್ ಟ್ವೀಟ್ ಮಾಡಿ ಮಧು ಸಾವಿಗೆ ನ್ಯಾಯ ಬೇಕು ಎಂದು ಆಗ್ರಹಿಸಿದ್ದಾರೆ. ನಟ ನೀನಾಸಂ ಸತೀಶ್, “ಮನುಷ್ಯ ಕುಲವೇ ತಲೆ ತಗ್ಗಿಸುವಂಥ ಕೆಲಸ ಮಾಡಿದೆ. ನೀಚರಿಗೆ ಸರಿಯಾದ ಶಿಕ್ಷೆ ಆಗಲಿ. ಮಧು ಅವರಿಗೆ ನ್ಯಾಯ ಸಿಗಲಿ” ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:ಎಲ್ಲವನ್ನೂ ಸಹಿಸಿಕೊಂಡಿದ್ದರಿಂದ ನನ್ನ ಮಗಳಿಗೆ ಈ ಗತಿ ಬಂದಿದೆ – ಮಧು ತಾಯಿ ಕಣ್ಣೀರು
ಮನುಷ್ಯ ಕುಲವೇ ತಲೆ ತಗ್ಗಿಸುವಂಥ ಕೆಲಸ ಮಾಡಿದ ನೀಚರಿಗೆ ಸರಿಯಾದ ಶಿಕ್ಷೆ ಆಗಲಿ…
ನ್ಯಾಯ ಸಿಗಲಿ ಮಧು ಅವರಿಗೆ….#JusticeForMadhu pic.twitter.com/Z5QP5wT9kL
— Sathish Ninasam (@SathishNinasam) April 19, 2019
ಇನ್ನೂ ಹರ್ಷಿಕಾ ಪೂಣಚ್ಚ, “ಬಡ ಹುಡುಗಿಯನ್ನ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಫೋಟೋಗಳನ್ನು ನೋಡಿ ನನಗೆ ಆಘಾತವಾಯಿತು. ಅಪರಾಧಿಗೆ ತಕ್ಷಣವೇ ಶಿಕ್ಷೆಯಾಗಬೇಕು” ಎಂದು ಹೇಳಿದ್ದಾರೆ. “ಮಾನವೀಯತೆ ಎಲ್ಲಿದೆ? ರಾಯಚೂರಿನ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಅವರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಇದು ನಿಜಕ್ಕೂ ಆಘಾತದ ಸುದ್ದಿಯಾಗಿದ್ದು, ‘ಜಸ್ಟೀಸ್ ಫಾರ್ ಮಧು’ ಮೂಲಕ ನ್ಯಾಯ ಸಿಗುತ್ತದೆ ಎಂಬ ಭರವಸೆ ಇದೆ. ಈ ಮೂಲಕವಾದರೂ ಇದು ಕೊನೆಯಾಗಲಿ” ಎಂದು ರಶ್ಮಿಕಾ ಮಂದಣ್ಣ ದುಃಖದಿಂದ ಟ್ವೀಟ್ ಮಾಡಿದ್ದಾರೆ.
https://twitter.com/actressharshika/status/1118919162238083077
ನಟಿ ರಕ್ಷಿತಾ ಪ್ರೇಮ್ ಕೂಡ ಈ ಘಟನೆಯಿಂದ ದು:ಖಿತರಾಗಿದ್ದು, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಅಮಾಯಕ ಮಧು ಹುಡುಗಿಯ ಜೀವ ಬಲಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಏನಿದು ಪ್ರಕರಣ?
ಏಪ್ರಿಲ್ 16 ರಂದು ಮೃತ ಮಧು ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಪೊಲೀಸರು ಡೆತ್‍ನೋಟ್ ನೋಡಿ ಇದು ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿದ್ದರು. ಬಳಿಕ ಮೃತ ಮಧು ತಾಯಿ ಇದು ಕೊಲೆಯಲ್ಲ. ನನ್ನ ಮಗಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಮೃತ ಮಧು ಗೆಳೆಯ ಸುದರ್ಶನ್‍ನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
Where is the humanity? According to sources Madhu a Raichur ,engineering student was raped, murdered.. this truly breaks my heart..how many more like this beforeit stops? #JusticeForMadhu ..Hope justice is given.. and this comes to an end..????
— Rashmika Mandanna (@iamRashmika) April 19, 2019