ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸ್ಯಾಂಡಲ್‍ವುಡ್ ನಟರು ಮತ್ತು ನಿರ್ಮಾಪಕ ಮನೆಯ ಮೇಲೆ ದಾಳಿ ನಡೆಸಿದ್ದಾರೆ.
ಸ್ಯಾಂಡಲ್‍ವುಡ್ ಇತಿಹಾಸದಲ್ಲೇ ಇದು ಅತಿದೊಡ್ಡ ಐಟಿ ದಾಳಿಯಾಗಿದ್ದು ನಟರಾದ ಪುನೀತ್, ಯಶ್, ಸುದೀಪ್, ಶಿವರಾಜ್ ಕುಮಾರ್, ನಿರ್ಮಾಪಕರಾದ ಸಿಆರ್ ಮನೋಹರ್, ರಾಕ್‍ಲೈನ್ ವೆಂಕಟೇಶ್, ವಿಜಯ್ ಕಿರಗಂದೂರ್, ಜಯಣ್ಣ ನಿವಾಸದ ಮೇಲೆ ದಾಳಿ ನಡೆದಿದೆ.
Advertisement
ದಾಳಿ ನಡೆಸಿದ್ದು ಯಾಕೆ?
ರಿಯಲ್ ಎಸ್ಟೇಟ್ ಮತ್ತು ಫೈನ್ಯಾನ್ಶಿಯರ್ಸ್ ಗಳು ಬ್ಲಾಕ್ ಮನಿಯನ್ನು ವೈಟ್ ಮನಿ ಮಾಡಲು ಸಿನಿಮಾದಲ್ಲಿ ಹಣ ಹೂಡಿಕೆ ಮಾಡುತ್ತಿದ್ದಾರೆ. ಇವರೆಲ್ಲ ಹೆಸರಾಂತ ನಿರ್ಮಾಪಕರ ಮೂಲಕ ದೊಡ್ಡ ದೊಡ್ಡ ಬಜೆಟ್ ಸಿನಿಮಾಗೆ ಹಣ ಹೂಡಿಕೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಇವರು ಥಿಯೇಟರ್, ವಿತರಕರ ಮೂಲಕ ಕೋಟ್ಯಂತರ ರೂಪಾಯಿ ಸುಳ್ಳು ಲೆಕ್ಕ ನೀಡಿ ತೆರಿಗೆ ವಂಚನೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪರಿಶೀಲನೆಗಾಗಿ ದಾಳಿ ನಡೆದಿದೆ.
Advertisement
Advertisement
ನಟರ ಮನೆ ಮೇಲೆ ದಾಳಿ ನಡೆಸಿದ್ದು ಯಾಕೆ?
ಈಗ ನಟರು ಚಲನಚಿತ್ರದಲ್ಲಿ ಷೇರನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ ಲಾಭ ನಷ್ಟಕ್ಕೆ ನಿರ್ಮಾಪಕರು ಮಾತ್ರ ಹೊಣೆ ಆಗಿರುತ್ತಿದ್ದಾರೆ. ಹೀಗೆ ಬಂದ ಲಾಭವನ್ನು ಬ್ಲಾಕ್ ಮೂಲಕ ವೈಟ್ ಮಾಡುತ್ತಿದ್ದಾರೆ. ಕೇವಲ ಆದಾಯ ತೆರಿಗೆ ವಂಚನೆ ಮಾತ್ರ ಅಲ್ಲ. ಚಿತ್ರದಲ್ಲಿ ಬಂದ ಲಾಭವನ್ನು ಗೌಪ್ಯವಾಗಿಟ್ಟು ಬ್ಲಾಕ್ ಮನಿಯನ್ನು ವೈಟ್ ಮಾಡುತ್ತಿದ್ದಾರೆ ಎನ್ನುವ ಆರೋಪವಿದೆ. ಈ ಆರೋಪದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಲೆಕ್ಕ ಪತ್ರಗಳ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
Advertisement
ಸುದೀಪ್, ಶಿವರಾಜ್ ಕುಮಾರ್ ಅಭಿನಯದ ‘ದಿ ವಿಲನ್’ ಅಕ್ಟೋಬರ್ 18 ರಂದು ಬಿಡುಗಡೆಯಾಗಿದ್ದರೆ, ಯಶ್ ಅಭಿನಯದ ‘ಕೆಜಿಎಫ್’ ಡಿಸೆಂಬರ್ 21 ರಂದು ಬಿಡುಗಡೆಯಾಗಿತ್ತು. ಪುನೀತ್ ರಾಜ್‍ಕುಮಾರ್ ಅಭಿನಯದ ‘ನಟಸಾರ್ವಭೌಮ’ ಫೆಬ್ರವರಿ 7ಕ್ಕೆ ಬಿಡುಗಡೆಯಾಗಲಿದೆ.
ಐಟಿ ದಾಳಿ ನಡೆಸಿದ ಮಾತ್ರಕ್ಕೆ ತೆರಿಗೆ ವಂಚನೆ ನಡೆಸಿದ್ದಾರೆ ಎಂದರ್ಥವಲ್ಲ. ತಮ್ಮ ಆದಾಯಕ್ಕೆ ಸರಿಯಾಗಿ ಮಾಹಿತಿ ನೀಡಿದರೆ ಯಾರೂ ಹೆದರುವ ಅಗತ್ಯವಿಲ್ಲ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv