ಧಾರವಾಡ: ಇತ್ತೀಚೆಗೆ ಧಾರವಾಡ ಜಿಲ್ಲಾಧಿಕಾರಿ ಮನೆ ಆವರಣದಲ್ಲಿ ಶ್ರೀಗಂಧ ಮರದ ಕಳ್ಳತನ ನಡೆದಿತ್ತು. ಕಳ್ಳತನ ನಡೆಸಿದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದು, ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ
ಆರೋಪಿ ಯಮನಪ್ಪ ಕಟ್ಟಿಮನಿ(31) ನವಲಗುಂದ ತಾಲೂಕಿನ ತಿರ್ಲಾಪುರ ಗ್ರಾಮದವನು. ಆರೋಪಿಯನ್ನು ಗುರುವಾರ ಗಂಧದ ಕಟ್ಟಿಗೆ ಸಮೇತ ಧಾರವಾಡ ವಲಯ ಅರಣ್ಯ ಅಧಿಕಾರಿಗಳು ಬಂಧಿಸಿದ್ದು, ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಜಿಲ್ಲಾಧಿಕಾರಿ ಮನೆ ಆವರಣದಲ್ಲಿನ ಶ್ರೀಗಂಧ ಮರ ಕಳ್ಳತನ
ಆರೋಪಿ ಧಾರವಾಡ ನಗರದಲ್ಲಿರುವ ಜಿಲ್ಲಾಧಿಕಾರಿ ವಸತಿಗೃಹ ಆವರಣದಲ್ಲಿನ ಒಂದು ಶ್ರೀಗಂಧದ ಮರ ಹಾಗೂ ಗುಂಗರಗಟ್ಟಿ ಶ್ರೀಗಂಧದ ನೇಡುತೋಪಿನಲ್ಲಿದ್ದ ಬೆಲೆಬಾಳುವ ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದಿದ್ದ. ಸುಮಾರು 1 ಲಕ್ಷ ರೂ. ಮೌಲ್ಯದ ಶ್ರೀಗಂಧದ ತುಂಡುಗಳನ್ನು ಸಾಗಾಟ ಮಾಡುವ ಸಂದರ್ಭದಲ್ಲಿ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಇದನ್ನೂ ಓದಿ: ಯುದ್ಧ ಬೇಡ: ಲೈವ್‌ನಲ್ಲೇ ರಷ್ಯಾ ಟಿವಿ ಚಾನೆಲ್ ಸಿಬ್ಬಂದಿ ಸಾಮೂಹಿಕ ರಾಜೀನಾಮೆ
ಕಳ್ಳತನದಲ್ಲಿ ಭಾಗಿಯಾಗಿರುವ ಉಳಿದ ಆರೋಪಿಗಳ ಬಂಧನಕ್ಕೆ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.