ಶಿವಮೊಗ್ಗದ ಹರ್ಷ ಹತ್ಯೆಗೆ ಸ್ಯಾಂಡಲ್ ವುಡ್ ಕೂಡ ದಿಗ್ಭ್ರಮೆ ವ್ಯಕ್ತಪಡಿಸಿದೆ. ಆ ಹುಡುಗನ ಕುಟುಂಬಕ್ಕೆ ನ್ಯಾಯ ಕೊಡಿಸುವಂತೆ ಸರಕಾರಕ್ಕೆ ಹಲವು ಕಲಾವಿದರು ಮತ್ತು ತಂತ್ರಜ್ಞರು ಒತ್ತಾಯ ಮಾಡಿದ್ದಾರೆ. ಜಾತಿ, ಧರ್ಮ ಯಾವುದೇ ಆಗಿರಲಿ, ಇಂತಹ ಹತ್ಯೆಗಳನ್ನು ಯಾರೂ ಸಹಿಸಬಾರದು ಎನ್ನುವ ಸಂದೇಶವನ್ನೂ ಸಾರಿದೆ. ಇದನ್ನೂ ಓದಿ : ಸ್ಮಾರಕವಾಗಲಿದೆ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಮನೆ
Advertisement
ಬಿಗ್ ಬಾಸ್ ಖ್ಯಾತಿಯ ಪ್ರಥಮ್, ಹರ್ಷ ಹತ್ಯೆಯನ್ನು ಖಂಡಿಸಿದ್ದು ಈ ಹುಡುಗನ ಕುಟುಂಬಕ್ಕೆ 25 ಸಾವಿರ ರೂಪಾಯಿ ನೀಡಿದ್ದಾರೆ. ಸಿನಿಮಾ ಮಾಡಿಕೊಂಡು ಸಾಲದಲ್ಲಿದ್ದೇನೆ. ಇಲ್ಲದಿದ್ದರೆ ಮತ್ತಷ್ಟು ಸಹಾಯವನ್ನು ಆ ಕುಟುಂಬಕ್ಕೆ ಮಾಡುತ್ತಿದ್ದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ : ಬಡ್ಡೀಸ್ ಚಿತ್ರಕ್ಕೆ ಯುಎಸ್ಎ ಕ್ಯಾಮೆರಾವುಮೆನ್ : ಇವರು ಎಮ್ಮಿ ಅವಾರ್ಡ್ ನಾಮಿನೇಟರ್
Advertisement
Advertisement
ಹತ್ಯಗೀಡಾದ ಹರ್ಷ ಕುಟುಂಬಕ್ಕೆ ನ್ಯಾಯ ಕೊಡಿಸಿ ಎಂದು ನಟಿ ಅನಿತಾ ಭಟ್ ಒತ್ತಾಯಿಸಿದ್ದಾರೆ. ‘ಇವತ್ತು ಹರ್ಷ, ನಾಳೆ ನಾವುಗಳು. ಎಂತಹ ದುರಂತ. ಯಾವ ತಾಯಿಗೂ ಇಂತಹ ಪರಿಸ್ಥಿತಿ ಬಾರದಿರಲಿ’ ಎಂದು ಟ್ವಿಟ್ ಮಾಡಿದ್ದಾರೆ. ಇದನ್ನೂ ಓದಿ : ಸೀಮಂತ ಕಾರ್ಯಕ್ರಮದಲ್ಲಿ ನೇತ್ರದಾನ ಮಾಡಿದ ಕಾಮಿಡಿ ಕಿಲಾಡಿ ಜೋಡಿ
Advertisement
ನಟಿ ಮಾಳ್ವಿಕಾ ಅವಿನಾಶ ಕೂಡ ಈ ಘಟನೆಗೆ ಪ್ರತಿಕ್ರಿಯಿಸಿದ್ದು ‘ಸದ್ಗತಿ ಪ್ರಾಪ್ತಿರಸ್ತು ಹರ್ಷ’ ಎಂದು ಕಂಬನಿ ಮಿಡಿದಿದ್ದಾರೆ. ಈ ಘಟನೆಯನ್ನು ಸರಕಾರ ಗಂಭೀರವಾಗಿ ತಗೆದುಕೊಳ್ಳಲಿದೆ ಎಂದೂ ಅವರು ಹೇಳಿದ್ದಾರೆ. ಇದನ್ನೂ ಓದಿ : ನಟ ಧನ್ವೀರ್ ಮೇಲೆ ನಿಲ್ಲುತ್ತಿಲ್ಲ ದಾಳಿ : ದಾಳಿ ಹಿಂದೆ ಸ್ಟಾರ್ ನಟರ ಕೈವಾಡ?
ಬಾಲಿವುಡ್ ಖ್ಯಾತ ನಟಿ ರವಿನಾ ಟಂಡನ್ ಕೂಡ ಈ ಹತ್ಯೆಗೆ ದಿಗ್ಭ್ರಮೆ ವ್ಯಕ್ತ ಪಡಿಸಿದ್ದು, ‘ಜಸ್ಟಿಸ್ ಟು ಹರ್ಷ’ ಎಂದು ಸೋಷಿಯಲ್ ಮೀಡಿಯಾ ಮೂಲಕ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ಬಾಲಿವುಡ್ ನಿರ್ಮಾಪಕ ಮನಿಶ್ ಮುಂದ್ರಾ ಸೇರಿದಂತೆ ಬಾಲಿವುಡ್ ಮತ್ತು ಸ್ಯಾಂಡಲ್ ವುಡ್ ನ ಹಲವು ಕಲಾವಿದರು ಮತ್ತು ತಂತ್ರಜ್ಞರು ಹರ್ಷ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಆ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಒತ್ತಾಯಿಸಿದ್ದಾರೆ.