ರಾಕಿಂಗ್‍ಸ್ಟಾರ್ ಯಶ್ (Yash) ನಟನೆಯ ಬಹುನಿರೀಕ್ಷಿತ ಟಾಕ್ಸಿಕ್ (Toxic) ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದೆಯಂತೆ. ಬಿಗ್ ಬಜೆಟ್‍ನ ಟಾಕ್ಸಿಕ್ ಸಿನಿಮಾ ಈ ವರ್ಷ ಮುಗಿಯೋದು ಡೌಟು, ಅಂದುಕೊಂಡ ದಿನಾಂಕಕ್ಕೆ ಸಿನಿಮಾ ರಿಲೀಸ್ ಕೂಡಾ ಆಗೋದಿಲ್ಲ ಅನ್ನೋ ಗಾಳಿ ಸುದ್ದಿ ಮಧ್ಯೆ ಶೂಟಿಂಗ್ ಕಂಪ್ಲೀಟ್ ಆಗಿದೆ ಅನ್ನೋ ಸುದ್ದಿ ಹೊರ ಬಿದ್ದಿದೆ.
ಅಂದಹಾಗೆ ಟಾಕ್ಸಿಕ್ ಶೂಟಿಂಗ್ ಮುಗಿದಿರುವ ಬಗ್ಗೆ ಜಾಲತಾಣದಲ್ಲಿ ಸುದ್ದಿ ಹರಿದಾಡ್ತಿದೆ. ಈ ಬಗ್ಗೆ ಚಿತ್ರತಂಡದಲ್ಲಿ ಕೆಲಸ ಮಾಡಿರುವರೊಬ್ಬರು ಈ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಲೊಕೇಷನ್ ಬೆಂಗಳೂರು (Bengaluru) ಅಂತಾ ಕೂಡಾ ಹಾಕಿದ್ದಾರೆ. ಅಂದರೆ ಕೊನೆಯ ಹಂತದ ಚಿತ್ರೀಕರಣವನ್ನ ಬೆಂಗಳೂರಿನಲ್ಲಿ ಮಾಡಿ ಮುಗಿಸಿದೆ ಚಿತ್ರತಂಡ. ಕನ್ನಡ ಹಾಗೂ ಇಂಗ್ಲೀಷ್‍ನಲ್ಲಿ ಏಕಕಾಲಕ್ಕೆ ಶೂಟಿಂಗ್ ಮಾಡ್ತಿರುವ ಟಾಕ್ಸಿಕ್ ಸಿನಿಮಾ ಸಾಕಷ್ಟು ರೀತಿಯಲ್ಲಿ ಪ್ಲ್ಯಾನ್ ಮಾಡಿಕೊಂಡಿದೆ. ಇದನ್ನೂ ಓದಿ: ನಾಗಚೈತನ್ಯ-ಶೋಭಿತಾ ಆನಿವರ್ಸರಿ – ನಾನು ಪುಣ್ಯ ಮಾಡಿದ್ದೆ ಎಂದ ನಟ
ಟಾಕ್ಸಿಕ್ ಸಿನಿಮಾ 2026ರ ಮಾರ್ಚ್ 19ಕ್ಕೆ ವಿಶ್ವದಾದ್ಯಂತ ತೆರೆಕಾಣಲು ಸಿದ್ಧತೆ ಮಾಡಿಕೊಳ್ಳಬೇಕಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸುದ್ದಿಗೋಷ್ಠಿ ಮಾಡಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಬೇಕಿದೆ. ಹೀಗಾಗಿ ಸಿನಿಮಾದ ಶೂಟಿಂಗ್ ಬೇಗನೇ ಮುಗಿಸಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ವರ್ಕ್‍ನಲ್ಲಿ ತೊಡಗಿಸಿಕೊಳ್ಳುವ ಯೋಜನೆ ಹಾಕಿಕೊಂಡಂತೆ ಕಾಣುತ್ತಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಎಲ್ಲೂ ಮಾಹಿತಿ ಹಂಚಿಕೊಂಡಿಲ್ಲ. ಸದ್ಯದಲ್ಲಿಯೇ ಮಾಹಿತಿ ಹಂಚಿಕೊಳ್ಳಬಹುದು. ಇದನ್ನೂ ಓದಿ: ಫ್ಯಾನ್ಸ್ ಮುಂದೆ ಮಧ್ಯದ ಬೆರಳು ತೋರಿಸಿ ಆರ್ಯನ್ ಖಾನ್ ಉದ್ಧಟತನ – ಸ್ಪಷ್ಟನೆ ಕೊಟ್ಟ ಜಮೀರ್ ಪುತ್ರ

