– 6 ಗಂಟೆಗಳ ಕಾಲ ನಡೆದ ಆಪರೇಷನ್
ವಾಷಿಂಗ್ಟನ್: ಸ್ಯಾಂಡಲ್‌ವುಡ್‌ನ (Sandalwood) ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ (Shiva Rajkumar) ಫ್ಲೋರಿಡಾದ ಮಿಯಾಮಿ ಕ್ಯಾನ್ಸರ್ ಇನ್ಸಿಟ್ಯೂಟ್‌ನಲ್ಲಿ (Miami Cancer Institute) ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸುಮಾರು 6 ಗಂಟೆಗಳ ಕಾಲ ತಜ್ಞ ವೈದ್ಯರು ಶಿವಣ್ಣನಿಗೆ ಆಪರೇಷನ್ ಮಾಡಿದ್ದಾರೆ.
ಭಾರತೀಯ ಮೂಲದ ತಜ್ಞ ವೈದ್ಯ ಡಾ. ಮುರುಗೇಶ್ ನೇತೃತ್ವದಲ್ಲಿ ಮಿಯಾಮಿ ಆಸ್ಪತ್ರೆಯಲ್ಲಿ ಶಿವಣ್ಣನಿಗೆ ಆಪರೇಷನ್ ಮಾಡಲಾಗಿದೆ. ಭಾರತೀಯ ಕಾಲಮಾನ ಮಂಗಳವಾರ ರಾತ್ರಿ 11:30ರ ಸುಮಾರಿಗೆ ಶಸ್ತ್ರಚಿಕಿತ್ಸೆ ಮುಗಿದಿದೆ. ಅಮೆರಿಕದ ಕಾಲಮಾನ ಬೆಳಗ್ಗೆ 8 ಗಂಟೆಗೆ ಅಂದರೆ ಭಾರತೀಯ ಕಾಲಮಾನದ ಪ್ರಕಾರ 6 ಗಂಟೆಗೆ ಆಪರೇಷನ್ ಥಿಯೇಟರ್‌ಗೆ ಶಿವಣ್ಣರನ್ನು ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಸುಮಾರು 6 ಗಂಟೆಗಳ ಕಾಲ ಸರ್ಜರಿ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಶಿವಣ್ಣನೊಂದಿಗೆ ಪತ್ನಿ ಗೀತಾ, ಪುತ್ರಿ ನಿವೇದಿತಾ, ಬಾಮೈದ ಮಧು ಬಂಗಾರಪ್ಪ ಜೊತೆಗಿದ್ದಾರೆ. ಇದನ್ನೂ ಓದಿ: ಪೂಂಚ್‌ನಲ್ಲಿ 300 ಅಡಿ ಆಳದ ಕಂದಕಕ್ಕೆ ಬಿತ್ತು ಸೇನಾ ವಾಹನ – ಚಿಕ್ಕೋಡಿ ಯೋಧ ಹುತಾತ್ಮ
ಇನ್ನು ಕ್ಯಾನ್ಸರ್ ಚಿಕಿತ್ಸೆಗೊಳಾಗಿರುವ ಶಿವಣ್ಣನಿಗೆ ಆಸ್ಪತ್ರೆಯಲ್ಲೇ ಇನ್ನೊಂದು ವಾರ ಚಿಕಿತ್ಸೆ ಮುಂದುವರೆಯಲಿದೆ. ನುರಿತ ವೈದ್ಯರ ನಿಗಾದಲ್ಲಿ ಶಿವಣ್ಣ ಇರಲಿದ್ದಾರೆ. ಬಳಿಕ ಮನೆಗೆ ಶಿಫ್ಟ್ ಆಗಲಿದ್ದಾರೆ. ಇನ್ನೊಂದು ತಿಂಗಳು ಅಮೆರಿಕದಲ್ಲೇ ಇರುವ ಶಿವರಾಜ್‌ಕುಮಾರ್ ಜನವರಿ 26ರಂದು ಭಾರತಕ್ಕೆ ಮರಳಲಿದ್ದಾರೆ. ಇದನ್ನೂ ಓದಿ: ಫೋನ್ ಮಾಡಿ ಶಿವಣ್ಣ ಆರೋಗ್ಯ ವಿಚಾರಿಸಿದ ಸಿಎಂ