ಮೈಸೂರು: ಬಿಜೆಪಿಯಲ್ಲಿ ಸಕ್ರಿಯನಾಗಿಲ್ಲ. ಅಕ್ರಮವಾಗಿದ್ದೇನೆ. ಬಿಜೆಪಿ (BJP) ಅವರು ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಅನ್ಯಾಯ ಮಾಡಿದರು ಎಂದು ಸ್ವಪಕ್ಷದ ವಿರುದ್ಧವೇ ಮಾಜಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ (Sandesh Nagaraj) ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಪಕ್ಷದ ವಿರುದ್ಧವೇ ಕಿಡಿಕಾರಿದರು. ಅನ್ಯಾಯ ಮಾಡುವುದರಲ್ಲಿ ಬಿಜೆಪಿ ಅವರು ನಿಸ್ಸೀಮರು. ಬಿಜೆಪಿಯವರು ಹೆಚ್. ವಿಶ್ವನಾಥ್‌ಗೆ ಅನ್ಯಾಯ ಮಾಡಿದರು. ನನಗೂ ಅನ್ಯಾಯ ಮಾಡಿದರು. ಮೋಸ ಮಾಡುವುದರಲ್ಲಿ ಬಿಜೆಪಿ ಅವರು ನಂಬರ್ ಓನ್ ಆಗಿದ್ದು, ಬಿಜೆಪಿ ಸಹವಾಸ ನನಗೆ ಇನ್ನೂ ಸಾಕು. ಈ ಹಿನ್ನೆಲೆಯಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ (Congress) ಸೇರಲು ನಿರ್ಧರಿಸಿದ್ದೇನೆ. ಈ ಕುರಿತಾಗಿ ಸಿದ್ದರಾಮಯ್ಯ ಅವರ ಜೊತೆ ಮಾತಾಡಿದ್ದೇನೆ. ಡಿ.ಕೆ. ಶಿವಕುಮಾರ್ ಅವರ ಜೊತೆಯೂ ಮಾತಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಮಾಲ್ ಬಳಿ ಸಿಗರೇಟ್ ಸೇದುತ್ತಿದ್ದವರಿಂದ ಹಣ ವಸೂಲಿ – ಮತ್ತಿಬ್ಬರು ಪೇದೆಗಳು ಸಸ್ಪೆಂಡ್
Advertisement
Advertisement
ಬಿಜೆಪಿ ಅವರು ಯಡಿಯೂರಪ್ಪರನ್ನು ಒಳ್ಳೆತನದಲ್ಲಿ ಮುಗಿಸಿದರು. ಯಡಿಯೂರಪ್ಪರನ್ನು ಒಳ್ಳೆತನದಲ್ಲಿ ಮುಗಿಸಿದ ವೇಳೆಯೇ ಬಿಜೆಪಿಗೆ 40 ಸ್ಥಾನ ನಷ್ಟವಾಯಿತು. ಈಗ ವಿಜಯೇಂದ್ರರನ್ನು ವರುಣಕ್ಕೆ ತರುವ ಮೂಲಕ ಅವರನ್ನು ಮುಗಿಸಲು ಹೊರಟ್ಟಿದ್ದಾರೆ. ಒಟ್ಟಿನಲ್ಲಿ ಬಿಜೆಪಿಯವರದ್ದು ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ ಆಗಿದೆ ಎಂದು ಕಿಡಿಕಾರಿದರು.
Advertisement
Advertisement
ವಿಜಯೇಂದ್ರರನ್ನು ಬಲಿ ಕೊಡಲು ವರುಣ ಕ್ಷೇತ್ರಕ್ಕೆ ಕರೆ ತರುತ್ತಿದ್ದಾರೆ. ವಿಜಯೇಂದ್ರಗೆ ರಾಜಕೀಯ ಭವಿಷ್ಯ ಚೆನ್ನಾಗಿ ಇರಬೇಕಾದರೆ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡಲಿ ಎಂದ ಅವರು, ಬಿಜೆಪಿಯಿಂದ 10ಕ್ಕಿಂತ ಹೆಚ್ಚು ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಸಂವಿಧಾನ ಉಳಿಸಲು ಮೋದಿ ಹತ್ಯೆ ಮಾಡಿ – ಕಾಂಗ್ರೆಸ್ ಮಾಜಿ ಸಚಿವ ವಿವಾದಾತ್ಮಕ ಹೇಳಿಕೆಗೆ ಆಕ್ರೋಶ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೊತೆ ಮುನಿಸಿಕೊಂಡಿರುವ ಜೆಡಿಎಸ್‌ನಲ್ಲಿದ್ದ ಸಂದೇಶ್ ನಾಗರಾಜ್ ಕಳೆದ ವರ್ಷ ಬಿಜೆಪಿಗೆ ಸೇರಿದ್ದರು. ಆ ಸಂದರ್ಭದಲ್ಲಿ ಅವರು ಮೈಸೂರು- ಚಾಮರಾಜನಗರ ಸ್ಥಳೀಯ ಸಂಸ್ಥೆ ಕ್ಷೇತ್ರದಿಂದ ಜೆಡಿಎಸ್‌ನಿಂದ (JDS) ಗೆದ್ದು ಪರಿಷತ್ ಸದಸ್ಯರಾಗಿದ್ದರು.