ಬಳ್ಳಾರಿ: ಸಂಡೂರು ಉಪ ಚುನಾವಣೆಯಲ್ಲಿ (Sandur By Election) ಜನಾರ್ದನ ರೆಡ್ಡಿ (Janardhan Reddy) ಸದ್ದಿಲ್ಲದೇ ಆಪರೇಷನ್ ಮಾಡಿ ಕಾಂಗ್ರೆಸ್‌ಗೆ ಮಾಸ್ಟರ್ ಸ್ಟ್ರೋಕ್ ನೀಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ.
ಸಂಡೂರಿನಲ್ಲೇ ಮನೆ ಮಾಡಿರುವ ಜನಾರ್ದನ ರೆಡ್ಡಿ ಗೌಪ್ಯವಾಗಿ ಕಾಂಗ್ರೆಸ್ (Congress) ಅತೃಪ್ತರ ಮುಖಂಡರ ಸಂಪರ್ಕ ಮಾಡುತ್ತಿದ್ದಾರೆ ಎನ್ನಲಾಗಿದೆ.
ತುಕಾರಾಂ ಪತ್ನಿ ಅನ್ನಪೂರ್ಣ (Annapurna Tukaram) ಅವರಿಗೆ ಟಿಕೆಟ್ ಸಿಕ್ಕಿದ್ದಕ್ಕೆ ಕಾಂಗ್ರೆಸ್ ಕೆಲ ಮುಖಂಡರಿಗೆ ಒಳಗೊಳಗೆ ಅಸಮಾಧಾನ ಇದೆ. ಹೀಗಾಗಿ ಇದರ ಲಾಭ ಪಡೆಯಲು ಜನಾರ್ದನ ರೆಡ್ಡಿ ತೆರೆಮರೆಯ ಕಸರತ್ತು ನಡೆಸಿದ್ದಾರೆ. ಇದನ್ನೂ ಓದಿ: ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ.ಗೆ ನಿಗದಿಪಡಿಸುವಂತೆ ಸಿಎಂಗೆ ಮನವಿ
ಇತಿಹಾಸದಲ್ಲಿ ಇಲ್ಲಿಯವರೆಗೆ ಸಂಡೂರಿನಲ್ಲಿ ಬಿಜೆಪಿ ಗೆಲುವು ಸಾಧಿಸಿಲ್ಲ. ಹೀಗಾಗಿ ಈ ಬಾರಿ ಹೇಗಾದರೂ ಮಾಡಿ ಕಮಲ ಅರಳಿಸಲೇಬೇಕು ಎಂದು ಹಠಕ್ಕೆ ಬಿದ್ದಿದ್ದಾರೆ. ಇದೇ ಕಾರಣಕ್ಕೆ ಏನೆಲ್ಲಾ ಸಾಧ್ಯವೋ ಅದೆಲ್ಲವನ್ನೂ ಮಾಡುತ್ತಿರುವ ರೆಡ್ಡಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ (Bangaru Hanumantha) ಗೆಲುವಿಗಾಗಿ ಟೊಂಕ ಕಟ್ಟಿ ನಿಂತಿದ್ದಾರೆ.
ನಾಮಪತ್ರ ಸಲ್ಲಿಕೆಯ ಬಳಿಕ ಶ್ರೀರಾಮುಲು ಸಹಿತ ಅಖಾಡಕ್ಕೆ ಇಳಿದಿದ್ದು, ಜಂಟಿಯಾಗಿ ಪ್ರಚಾರ ನಡೆಸುವ ಜೊತೆ ಜೊತೆಗೆ ಕಾಂಗ್ರೆಸ್ ಕೆಲ ಅತೃಪ್ತರನ್ನ ಪಕ್ಷಕ್ಕೆ ಸೆಳೆಯುವ ಕೆಲಸ ಮಾಡುತ್ತಿದ್ದಾರೆ.