ಬಳ್ಳಾರಿ: ಸಂಡೂರು ಉಪಚುನಾವಣೆ (Sandur By Election) ಅಖಾಡ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು (Bangaru Hanumanthu) ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಇದುವರೆಗೂ ಪ್ರಚಾರದಿಂದ ದೂರವೇ ಉಳಿದಿದ್ದ ಮಾಜಿ ಸಚಿವ ಶ್ರೀರಾಮುಲು ಕೊನೆಗೂ ಸಂಡೂರು ಉಪಚುನಾವಣೆ ಪ್ರಚಾರಕ್ಕೆ ಎಂಟ್ರಿ ಕೊಟ್ಟಿದ್ದು, ಜನಾರ್ದನ ರೆಡ್ಡಿ ಜೊತೆ ಜಂಟಿ ಪ್ರಚಾರ ಆರಂಭಿಸಿದ್ದಾರೆ.
2023ರ ಚುನಾವಣೆ ವೇಳೆ ಶ್ರೀರಾಮುಲು (Sriramulu) ಹಾಗೂ ಜನಾರ್ದನ ರೆಡ್ಡಿ (Janardhan Reddy) ಆಂತರಿಕ ಭಿನ್ನಾಭಿಪ್ರಾಯದಿಂದ ದೂರವಾಗಿದ್ದರು. ಸಂಡೂರು ಚುನಾವಣೆ ವೇಳೆ ಶ್ರೀರಾಮುಲುಗಿಂತ ಮುಂಚೆನೇ ಜನಾರ್ದನ ರೆಡ್ಡಿ ಪ್ರಚಾರದ ಅಖಾಡಕ್ಕೆ ಧುಮುಕಿದ್ದರು. ಆಂತರಿಕ ಸಮಸ್ಯೆಯಿಂದ ಹಿಂದೆ ಸರಿದಿದ್ದ ರಾಮುಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನವೊಲಿಸಿದ್ದರು. ನಾಮಪತ್ರ ಸಲ್ಲಿಕೆ ಬಳಿಕ ಪ್ರಚಾರಕ್ಕೆ ಬರುತ್ತೇನೆ ಎಂದಿದ್ದ ರಾಮುಲು ಇದೀಗ ಪ್ರಚಾರಕ್ಕೆ ಬಂದಿದ್ದಾರೆ. ಆದರೆ ರಾಮುಲು- ಜನಾರ್ದನ ರೆಡ್ಡಿ ಜಂಟಿ ಪ್ರಚಾರದ ನಡುವೆಯೂ ಬಿಜೆಪಿ ನಾಯಕರಿಗೆ ಒಳೇಟಿನ ಆತಂಕ ಕಾಡುತ್ತಿದೆ. ಇದನ್ನೂ ಓದಿ: ಡಿಕೆಶಿಗೆ ಸಿಎಂ ಆಗುವ ಅವಕಾಶ ಇದೆ, ಯೋಗೇಶ್ಬರ್ ಗೆಲ್ಲಿಸಿದ್ರೆ ಶಕ್ತಿ ಬರುತ್ತೆ: ಎಂಎಲ್‌ಸಿ ಪುಟ್ಟಣ್ಣ
ಇತ್ತ ಕಾಂಗ್ರೆಸ್‌ನಲ್ಲೂ ಎಲ್ಲವೂ ಸರಿ ಇಲ್ಲ ಅನ್ನೋದು ಸ್ಪಷ್ಟವಾಗಿದೆ. ಜಿಲ್ಲೆಯಲ್ಲಿ ನಾಲ್ವರು ಕಾಂಗ್ರೆಸ್ ಶಾಸಕರಿದ್ದರೂ ಯಾರೊಬ್ಬರೂ ಇದುವರೆಗೂ ಪ್ರಚಾರ ಕಾರ್ಯದಲ್ಲಿ ತೊಡಗಿಲ್ಲ. ಸಂಸದ ತುಕಾರಾಂ ಹಾಗೂ ಪತ್ನಿ ಅನ್ನಪೂರ್ಣ ತುಕಾರಾಂ ಮಾತ್ರ ಪ್ರಚಾರ ಮಾಡುತ್ತಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಮನೆದೇವ್ರು ದುರ್ಯೋಧನ, ಲಾಂಛನ ನಾಗರಹಾವು ಅಂದಿದ್ದು ಯಡಿಯೂರಪ್ಪ: ಬಾಲಕೃಷ್ಣ