ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಜಯಭೇರಿ ಬಾರಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಸೋಲೊಪ್ಪಿಕೊಂಡಿದ್ದಾರೆ. ಸಂಡೂರು ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿದ್ದಾರೆ. ಪತಿಯಿಂದ ತೆರವಾಗಿ ಸ್ಥಾನದಲ್ಲಿ ಪತ್ನಿ ಗೆದ್ದಿದ್ದಾರೆ.
Advertisement
ಕಾಂಗ್ರೆಸ್ ಅಭ್ಯರ್ಥಿ ಗೆಲುವು ದಾಖಲಿಸುತ್ತಿದ್ದಂತೆ ಮತ ಎಣಿಕೆ ಕೇಂದ್ರ ಬಳಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ‘ಕೈ’ ನಾಯಕರ ಪರ ಜೈಕಾರ ಹಾಕಿದ್ದಾರೆ.
Advertisement
ಇತ್ತ ಸೋಲೊಪ್ಪಿಕೊಂಡಿರುವ ಬಂಗಾರು ಹನುಮಂತ, ಧರ್ಮದ ವಿರುದ್ಧ ಅಧರ್ಮ ಗೆದ್ದಿದೆ. ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ. ಕಾಂಗ್ರೆಸ್ ಹಣ ಬಲದಿಂದ ಗೆದ್ದಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.