ಬಿಗ್ ಬಾಸ್ (Big Boss Kannada) ಮನೆಯಲ್ಲಿ ಫಿನಾಲೆ ಸಮೀಪಿಸುತ್ತಿದ್ದಂತೆಯೇ ಬಿಗ್‌ಬಾಸ್ ಮನೆಯೊಳಗಿನ ಸಂಬಂಧಗಳ ಬಣ್ಣಗಳೆಲ್ಲ ಮಾಸುತ್ತಿವೆ. ಗೆಲುವಿನ ಗುರಿಯೊಂದೇ ಎಲ್ಲರ ಕಣ್ಣಮುಂದೆ ಹೊಳೆಯುತ್ತಿದೆ. ಹಿಂದಿನ ಎಪಿಸೋಡ್‌ನಲ್ಲಿ ನಮ್ರತಾ ಅವರು ವಿನಯ್ ಅವರನ್ನು ಆಟದಿಂದ ಕೈಬಿಟ್ಟಾಗಲೇ ಇಂಥದೊಂದು ಸೂಚನೆ ಕಾಣಿಸಿಕೊಂಡಿತ್ತು. ಈಗ ಅಂಥದ್ದೇ ಇನ್ನೊಂದು ಘಟನೆ ಬಿಗ್‌ಬಾಸ್ ಮನೆಯೊಳಗೆ ನಡೆದಿದೆ. ಅದರ ಸೂಚನೆ ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಕಾಣಿಸಿಕೊಂಡಿದೆ.
ಅತಿ ಹೆಚ್ಚು ಅಂಕ ಗಳಿಸಿಕೊಂಡವರಲ್ಲಿ ಸಂಗೀತಾ (Sangeetha) ಮತ್ತು ಪ್ರತಾಪ್ (Drone Pratap) ಮಧ್ಯೆ ಪೈಪೋಟಿ ಇತ್ತು. ನಿನ್ನೆ ಒಂದು ಟಾಸ್ಕ್ ನಲ್ಲಿ ಗೆಲುವು ಕಂಡು ನಮ್ರತಾ ಕೂಡ ರೇಸ್‌ಗೆ ಬಂದಿದ್ದರು. ಮೊದಲ ಕೆಲವು ಟಾಸ್ಕ್‌ಗಳಲ್ಲಿ ಉತ್ತಮವಾಗಿ ಆಡಿದ ವರ್ತೂರು ಸಂತೋಷ್ ಕೂಡ ಇನ್ನೂರರ ಗಡಿ ದಾಟಿದ್ದಾರೆ. ಈ ಹಂತದಲ್ಲಿ ಪ್ರತಾಪ್ ಅವರಿಗೆ ತಮ್ಮ ಎದುರಾಳಿಗಳನ್ನು ಆಯ್ದುಕೊಳ್ಳುವ ಅಧಿಕಾರವನ್ನು ಬಿಗ್‌ಬಾಸ್ ನೀಡಿದ್ದಾರೆ. ಪ್ರತಾಪ್ ಅವರು ಸಂಗೀತಾ ಅವರನ್ನೂ ಆರಿಸಿಕೊಂಡಿದ್ದಾರೆ. ಆದರೆ ಮೊದಲ ಹಂತದಲ್ಲಿ ಯಾರನ್ನಾದರೂ ಹೊರಗಿಡುವ ಸಂದರ್ಭದಲ್ಲಿ ಸಂಗೀತಾ ಅವರನ್ನೇ ಆಟದಿಂದ ಹೊರಗಿಟ್ಟಿದ್ದಾರೆ.
ಸಂಗೀತಾ ದೀದಿ ಎಂದು ಯಾವಾಗಲೂ ಜೊತೆಗಿರುತ್ತಿದ್ದ ಪ್ರತಾಪ್ ಅವರೇ ಅವರನ್ನು ಹೊರಗಿಟ್ಟಿದ್ದು ಸಂಗೀತಾ ಅವರನ್ನು ದಿಗ್ಭ್ರಮೆಗೊಳಿಸಿದೆ. ‘ಇನ್ನೂ ಅವನನ್ನು ಬೆಂಬಲಿಸುತ್ತ ಬಂದೆನಲ್ಲ, ನಾನೆಂಥ ದಡ್ಡಿ’ ಎಂದು ಅವರು ತಮ್ಮನ್ನು ತಾವೇ ಹಳಿದುಕೊಂಡಿದ್ದಾರೆ. ಪ್ರತಾಪ್ ಹೀಗೆ ಮಾಡಬಾರದಿತ್ತು ಎಂದು ಶಪಿಸಿದ್ದಾರೆ. ಡ್ರೋನ್ ಹೀಗೆ ಮಾಡ್ತಾನೆ ಅಂತ ಕಂಡಿತಾ ಅಂದುಕೊಂಡಿರಲಿಲ್ಲ ಎಂದು ಕೋಪಿಸಿಕೊಂಡಿದ್ದಾರೆ.
ಹೌದು, ಬಿಗ್ ಬಾಸ್ ಮನೆ ಫಿನಾಲೆಗೆ ಸಮೀಪಿಸುತ್ತಿದ್ದಂತೆಯೇ ಸಂಬಂಧಗಳು ಹಳಸ ತೊಡಗಿವೆ. ಗೆಲುವು ಒಂದೇ ಕಣ್ಮುಂದೆ ಕುಣಿಯುತ್ತಿದೆ. ಹಾಗಾಗಿ ಕೇವಲ ಸಂಗೀತ ಮತ್ತು ಡ್ರೋನ್ ಪ್ರತಾಪ್ ಬಾಂಧವ್ಯ ಮಾತ್ರವಲ್ಲ, ಕುಚಿಕು ಗೆಳೆಯರಂತಿದ್ದ ವರ್ತೂರು ಸಂತೋಷ್ ಮತ್ತು ತುಕಾಲಿ ಸಂತು ನಡುವೆಯೂ ಬಿರುಕು ಕಾಣಿಸಿಕೊಂಡಿದೆ. ಇಬ್ಬರ ಫ‍್ರೆಂಡ್ ಶಿಪ್ ಕಟ್ ಆಗಿದೆ. ಇದೆಲ್ಲ ಮುಂದಿನ ದಿನಗಳಲ್ಲಿ ಇನ್ನ್ಯಾವ ಹಂತಕ್ಕೆ ಹೋಗುತ್ತೋ ಕಾದು ನೋಡಬೇಕು.