ಬಿಗ್ ಬಾಸ್ ಮನೆಯಿಂದ ಆಚೆ ಬರುತ್ತಿದ್ದಂತೆಯೇ ಸಂಗೀತಾ ನಟನೆಯ ಸಿನಿಮಾವೊಂದು ಬಿಡುಗಡೆಗೆ ರೆಡಿಯಾಗುತ್ತಿದೆ. ನಿನ್ನೆಯಷ್ಟೇ ಆ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಈ ಸಮಯದಲ್ಲಿ ತಮ್ಮ ಚೈಲ್ಡ್ ವುಡ್ ಕ್ರಶ್ (Child Wood Crush) ಬಗ್ಗೆ ಮಾತನಾಡಿದ್ದಾರೆ ಸಂಗೀತಾ. ಅದು ಆ ಕ್ರಶ್ ಅವರನ್ನು ಪಕ್ಕದಲ್ಲೇ ಕೂರಿಸಿಕೊಂಡು ಪರಿಚಯಿಸಿದ್ದಾರೆ. ಸಂಗೀತಾ ಚೈಲ್ಡ್ ವುಡ್ ಕ್ರಶ್ ಬೇರೆ ಯಾರೂ ಅಲ್ಲ ದೂದ್ ಪೇಡಾ ದಿಗಂತ್ ಎನ್ನುವುದು ವಿಶೇಷ.
Advertisement
ಕ್ರಶ್ ಜೊತೆ ಸಂಗೀತಾ ಸಿನಿಮಾ
Advertisement
ರಘುವರ್ಧನ್ ನಿರ್ಮಾಣ ಮಾಡಿ ರಾಘವೇಂದ್ರ ಎಂ. ನಾಯ್ಕ. ಆಕ್ಷನ್ ಕಟ್ ಹೇಳಿರುವ ‘ಮಾರಿ ಗೋಲ್ಡ್‘ (Marigold) ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಬಳಿಕ ಮಾತಿಗಿಳಿದ ನಿರ್ಮಾಪಕ ರಘುವರ್ಧನ್, ಗುಣವಂತ ಸೇರಿ ಹಲವು ಚಿತ್ರ ನಿರ್ದೇಶನ ಮಾಡಿದ್ದೇನೆ. ರಾಘವೇಂದ್ರ ನಾಯ್ಕ್ ಹೇಳಿದ ಕಥೆ ಇಷ್ಟವಾಯಿತು. ನಾನು ನಿರ್ಮಾಣ ಮಾಡುತ್ತೇನೆ. ನೀವೇ ನಿರ್ದೇಶನ ಮಾಡಿ ಎಂದು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇನೆ. ಚಿತ್ರ ಅಂದುಕೊಂಡಿದ್ದಕ್ಕಿಂತ ಚೆನ್ನಾಗಿ ಮೂಡಿ ಬಂದಿದೆ. ನಾಯಕ ದಿಗಂತ್ (Diganth), ನಾಯಕಿ ಸಂಗೀತಾ (Sangeetha Sringeri) ಸಹಕಾರ ಅದ್ಬುವಾಗಿತ್ತು. ಎಲ್ಲಾ ಅಂದುಕೊಂಡಂತೆ ಆದರೆ ಮುಂದಿನ ತಿಂಗಳು ಎರಡನೇ ಅಥವಾ ಮೂರನೇ ವಾರ ಚಿತ್ರ ತೆರೆಗೆ ತರುವ ಉದ್ದೇಶವಿದೆ ಸಹಕಾರವಿರಲಿ ಎಂದರು.
Advertisement
Advertisement
ನಿರ್ದೇಶಕ ರಾಘವೇಂದ್ರ ಎಂ, ನಾಯ್ಕ್ ಮಾತನಾಡಿ, ಮಾರಿ ಗೋಲ್ಡ್ ಗೋಲ್ಡ್ ಬಿಸ್ಕಟ್ ಮಾರಲು ಹೋದ 4 ಜನ ಹುಡುಗರ ಕಥೆ, ಚಿತ್ರದುರ್ಗ, ಬೆಂಗಳೂರು ಸಕಲೇಶಪುರ ಮತ್ತಿತರ ಕಡೆ ಚಿತ್ರೀಕರಣ ಮಾಡಲಾಗಿದೆ. ಕೋವಿಡ್ ಆದ ಮೇಲೆ ಆ ನಂತರದ ಬೆಳವಣಿಗೆಗಳು ಚಿತ್ರ ವಿಳಂಬಕ್ಕೆ ಕಾರಣವಾಯಿತು. ಈಗ ಬಿಡುಗಡೆಗೆ ಸಜ್ಜಾಗಿದೆ. ಟೀಸರ್ ಮೂಲಕ ಪ್ರಚಾರ ಆರಂಬಿಸಿದ್ದೇವೆ ಎಂದು ಹೇಳಿದರು. ಶುದ್ದ ಮನರಂಜನೆಗೆ ಒತ್ತು ನೀಡಿ ಚಿತ್ರ ಮಾಡಲಾಗಿದೆ. ಚಿತ್ರದ ಮೂಲಕ ದಿಗಂತ್ ಅವರನ್ನು ಬೇರೆ ರೀತಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಚಿತ್ರೀಕರಣಕ್ಕೂ ಮುನ್ನ ದಿಗಂತ್ ಅವರಿಗೆ ರಿಹಸರ್ಲ್ ಮಾಡಲಾಗಿದೆ. ಮನರಂಜನೆ ಡ್ರಾಮ ಮತ್ತು ಥ್ರಿಲ್ಲರ್ ಕಥೆ ಹೊಂದಿದೆ ಎಂದು ಮಾಹಿತಿ ನೀಡಿದರು.
ನಟ ದಿಗಂತ್ ಮಾತನಾಡಿ, ಹೆಸರಾಂತ ನಿರ್ಮಾಪಕ ಹಣ ನೀಡಿದ್ದು, ಆದರೆ ಅದು ಅಲ್ಲಿಯೇ ನಿಂತಿದೆ. ಮಾರಿಗೋಲ್ಡ್ ಮೇಲೆ ನಿರ್ದೇಶಕರ ಜೊತೆ ಸಿನಿಮಾ ಮಾಡಬಹುದು. ಕಥೆ ಇಷ್ಡವಾಯಿತು, ಯಶ್ ಶೆಟ್ಟಿ, ಸಂಗೀತ ಶೆಟ್ಟಿ, ಸಂಪತ್, ಕಾಕ್ರೋಚ್ ಸುಧಿ, ಟ್ರೈಲರ್ ಇಷ್ಟವಾದರೆ ಎಲ್ಲರಿಗೂ ಹೇಳಿ, ಸಿನಿಮಾ ಗೆದ್ದರೆ ಮತ್ತಷ್ಟು ಮಾಡೋಣ ಎಂದಿದ್ದಾರೆ. ಚಿತ್ರದಲ್ಲಿ ಬುದ್ದಿವಂತ ಸ್ಕಾಮರ್ ಪಾತ್ರ ಎಂದಿದ್ದಾರೆ. ನಟಿ ಸಂಗೀತಾ ಶೃಂಗೇರಿ ಮಾತನಾಡಿ, ನಟ ದಿಗಂತ್ ನನ್ನ ಚೈಲ್ಡ್ ವುಡ್ ಕ್ರಷ್. ಅದನ್ನು ಅವರಿಗೂ ಹೇಳಿದ್ದೇನೆ. ಎಲ್ಲವೂ ಊಹೆ ಮಾಡಿಕೊಂಡು ಸಿನಿಮಾ ಮಾಡಿದ್ದಾರೆ. ಛಾಯಾಗ್ರಾಹಕ ಚಂದ್ರಶೇಖರ್ ಉತ್ತಮವಾಗಿ ತೋರಿಸಿದ್ದಾರೆ. ಚಿತ್ರದಿಂದ ಸುಮಾರು ವರ್ಷದ ಕನಸು ನನಸಾಗಿದೆ ಎಂದರು
ಕಲಾವಿದ ಭಜರಂಗ ಶೆಟ್ಟಿ ಮಾತನಾಡಿ, ಮಾರಿಗೋಲ್ಡ್‌ನಲ್ಲಿ ನಟಿಸಲು ಗೆಳೆಯ ಯಶ್ ಶೆಟ್ಟಿ ಕಾರಣ ಕೋವಿಡ್ ಸಮಯದಲ್ಲಿ ಊರಲ್ಲಿ ಮೀನು ಹಿಡಿಯುತ್ತಿದ್ದೆ. ಬಳಿಕ ಕಾಕ್ರೋಚ್ ಸುಧಿ ಮಾತನಾಡಿದರು. ನಂತರ ನಿರ್ದೇಶಕರು ಮಾತನಾಡಿದ ಮಾಹಿತಿ ಹಂಚಿಕೊಂಡರು. ಸಂಭಾಷಣೆ ಬರೆದಿರುವ ರಘು ನಿಡವಳ್ಳಿ ವಿಭಿನ್ನ ಸಂಭಾಷಣೆ ಇದೆ ಎಂದರೆ ಸಂಗೀತ ನಿರ್ದೇಶಕ ವೀರ್ ಸಮರ್ಥ್ , ಚಿತ್ರದಲ್ಲಿ ಎರಡೆ ಹಾಡು ಇವೆ. ಇದೊಂದು ಥ್ರಿಲ್ಲರ್ ಸಿನಿಮಾ ಆಕ್ಷನ್ ಸಿನಿಮಾ, ಸಿನಿಮಾ ಹಿಟ್ ಆದರೆ ದಿಗಂತ್ ಆಕ್ಷನ್ ಹೀರೋ ಆಗಲಿದ್ದಾರೆ. ಯೋಗರಾಜ್ ಭಟ್, ವಿಜಯ್ ಭರಮಸಾಗರ, ಕವಿರಾಜ್ ಹಾಡು ಬರೆದಿದ್ದಾರೆ. ಗೆಲವಿನ ಆಶಾಕಿರಣ ಇದೆ ಎಂದರು.
ಛಾಯಾಗ್ರಾಹಕ ಚಂದ್ರಶೇಖರ್ ಹೊಸ ಜಾನರ್ ಸಿನಿಮಾ, ಥ್ರಿಲ್ಲರ್ ಸಿನಿಮಾ ಮಾಡಿರಲಿಲ್ಲ. ನಿರ್ಮಾಪಕ ರಘುವರ್ಧನ್ ಜೊತೆ ಗುಣವಂತದಲ್ಲಿ ಕೆಲಸ ಮಾಡಿದ್ದೆ. ಈಗ ಅವರ ನಿರ್ಮಾಣದಲ್ಲಿ ಕೆಲಸ ಮಾಡಿದ್ದೇವೆ ಎಂದರು. ಚಿತ್ರದಲ್ಲಿ ದಿಗಂತ್ ಮಂಚಾಲೆ, ಸಂಗೀತ ಶ್ರಂಗೇರಿ, ಸಂಪತ್ ಮೈತ್ರೇಯ, ಯಶ್ ಶೆಟ್ಟಿ, ಕಾಕ್ರೋಚ್ ಸುಧೀ, ವಜ್ರಾಂಗ್ ಶೆಟ್ಟಿ, ಬಾಲಾ ರಾಜವಾಡಿ, ಮಹಂತೇಶ್, ಸಂದೀಪ್ ಮಲಾನಿ ಮತ್ತಿತರರು ಚಿತ್ರದ ತಾರಾಬಳಗದಲ್ಲಿದ್ದಾರೆ.