ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ಬೆಳಗಾವಿ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಾಯಣ್ಣನ ಮೂರ್ತಿಗೆ ಕಲ್ಲು ತೂರಿ, ಸ್ಥಳದಿಂದ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಘಟನೆಯಲ್ಲಿ ರಾಯಣ್ಣನ ಮೂರ್ತಿಯ ಕಾಲಿನ ಭಾಗದಲ್ಲಿ ಹಾನಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ರಾಯಣ್ಣ ಅಭಿಮಾನಿಗಳು ತೀವ್ರ ಆಕ್ರೋಶವನ್ನು ಹೊರ ಹಾಕಿದ್ದಾರೆ. ಇದನ್ನೂ ಓದಿ: ಪಾಪದ ಕೊಡ ನಮ್ಮದಾ ನಿಮ್ಮದಾ?: ಅಶೋಕ್‍ಗೆ ತಿರುಗೇಟು ಕೊಟ್ಟ ಸಿದ್ದು
Advertisement
Advertisement
ಬೆಂಡಿಗೇರಿ ಗ್ರಾಮಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ರಾಯಣ್ಣನ ಮೂರ್ತಿಗೆ ಕಲ್ಲು ತೂರಿರುವ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಘಟನೆಯಿಂದ ಬೆಂಡಿಗೇರಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ಇದನ್ನೂ ಓದಿ: ಆಜಾನ್‌ಗೆ ವಿರೋಧ ರಾಜ್ಯಾದ್ಯಂತ ಜೂ. 1ರಿಂದ ಎರಡನೇ ಸುತ್ತಿನ ಹೋರಾಟ: ಪ್ರಮೋದ್ ಮುತಾಲಿಕ್