ಬೆಳಗಾವಿ: ಖ್ಯಾತ ನಿರ್ಮಾಪಕ ಆನಂದ ಅಪ್ಪುಗೋಳ್ ಅವರು ಅಧ್ಯಕ್ಷರಾಗಿರುವ ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಆರ್ಥಿಕ ಸ್ಥಿತಿ ಸಂಕಷ್ಟದಲ್ಲಿದೆ. ನೋಟ್ ಬ್ಯಾನ್ ಆದ ನಂತರ ಸುಧಾರಿಸಿಕೊಳ್ಳಲಾಗದೇ ಬ್ಯಾಂಕ್‍ನ ಆರ್ಥಿಕ ಸ್ಥಿತಿ ಬಿಗಡಾಯಿಸಿದೆ.
ಸುಮಾರು 300 ಕೋಟಿ ರೂಪಾಯಿ ಠೇವಣಿ, 50 ಸಾವಿರ ಖಾತೆ ಹಾಗೂ 50 ಬ್ರಾಂಚ್ ಹೊಂದಿದ ಸೊಸೈಟಿ ಈಗ ರೋಗಗ್ರಸ್ಥವಾಗಿರುವ ಹಿನ್ನೆಲೆಯಲ್ಲಿ ಗ್ರಾಹಕರು ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ್ದಾರೆ.
Advertisement
Advertisement
ಈ ಕುರಿತಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಆನಂದ ಅಪ್ಪುಗೋಳ್ ಅವರು, ಶೇ.35 ರಷ್ಟು ಹಣವನ್ನು ರಿಯಲ್ ಎಸ್ಟೇಟ್ ಮೇಲೆ ಹೂಡಿಕೆ ಮಾಡಿದ್ದೇವೆ. ಇದರಿಂದಾಗಿ ನಮಗೆ ಸಂಕಷ್ಟವಾಗಿದೆ. ಗ್ರಾಹಕರು ಯಾರು ಹೆದರುವ ಅವಶ್ಯಕತೆ ಇಲ್ಲ. ನನ್ನ ಸಮಸ್ತ ಆಸ್ತಿಯನ್ನ ಮಾರಿ ನಿಮ್ಮ ಹಣವನ್ನು ನೀಡುತ್ತೇನೆ. ದಯವಿಟ್ಟು ಸ್ವಲ್ಪ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿದರು.
Advertisement
ನಾನು ಸತ್ತರೆ ನಿಮ್ಮೆಲ್ಲರ ಠೇವಣಿ ಹಣವನ್ನು ಕೊಟ್ಟು ಸಾಯುತ್ತೇನೆ. ಆದರೆ ಇವತ್ತು ನಾನು ನನ್ನ ಕುಟುಂಬ ಉಳಿಸಿಕೊಂಡು ಬದುಕಿಲ್ಲ. ನನ್ನ ಕುಟುಂಬ ಅಂದರೆ ಸಂಗೊಳ್ಳಿ ರಾಯಣ್ಣ ಪರಿವಾರ, ಠೇವಣಿದಾರರು ಮತ್ತು ಸಾಲಗಾರರು ಅವರೇ ನನ್ನ ಕುಟುಂಬದವರು. ನಾನು ಎಲ್ಲಿಯೂ ಓಡಿಹೋಗಲ್ಲ, ಸಾಯುವುದಿಲ್ಲ ಸ್ವಲ್ಪ ನನಗೆ ನಿಮ್ಮ ಹಣವನ್ನು ಕೊಡಲಿಕ್ಕೆ ಅವಕಾಶ ಮಾಡಿಕೊಡಿ ಎಂದು ವಿನಂತಿಸಿದರು. ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ ಬ್ಯಾಂಕ್ ನ ಪರಿಸ್ಥಿತಿಯನ್ನು ವಿವರಿಸಿ ಮಾಧ್ಯಮದವರ ಮುಂದೆ ಆನಂದ ಅಪ್ಪುಗೋಳ್ ಕಣ್ಣೀರಿಟ್ಟರು.