ಬೆಳಗಾವಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ – ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ

Public TV
1 Min Read
belagavi Sangolli Rayanna

ಬೆಳಗಾವಿ: ತಾಲೂಕಿನ ಮಚ್ಚೆ ಪಟ್ಟಣದಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ (Sangolli Rayanna) ಪ್ರತಿಮೆ (Statue) ಪ್ರತಿಷ್ಠಾಪನೆಯಾಗಿದ್ದು ಸ್ಥಳಕ್ಕೆ ಬೆಳಗಾವಿ (Belagavi) ನಗರದ ಡಿಸಿಪಿ ಶೇಖರ್ ಹೆಚ್‌ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.

ತಾಲೂಕಿನ ಮಚ್ಚೆ ಪಟ್ಟಣದಲ್ಲಿ ಸಂಗೋಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಯಿಂದ ಸದ್ಯ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಹೀಗಾಗಿ ಮಚ್ಚೆ ಪಟ್ಟಣಕ್ಕೆ ಡಿಸಿಪಿ ಶೇಖರ್ ಹೆಚ್‌ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

belagavi Sangolli Rayanna 1

ಬೆಳಗಾವಿ ಜಿಲ್ಲೆ ಮಚ್ಚೆ ಪಟ್ಟಣದ ಜೀಜಾಮಾತಾ ಚೌಕ್‌ನಲ್ಲಿರುವ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ಕಳೆದ ಹಲವು ವರ್ಷಗಳಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಕನ್ನಡಪರ ಸಂಘಟನೆಗಳು ಮನವಿ ಮಾಡಿದ್ದವು. ಮತ್ತೊಂದು ಕಡೆ ಜೀಜಾಮಾತಾ ಅಥವಾ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪಿಸಲು ಮರಾಠಿ ಭಾಷಿಕರು ಮನವಿ ಮಾಡಿದ್ದರು. ಇದೆಲ್ಲದರ ನಡುವೆ ಇದೀಗ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ. ಇದನ್ನೂ ಓದಿ: ವಿಶ್ವ ಪರಿಸರ ದಿನಾಚರಣೆಯಂದೇ ಅರಣ್ಯಾಧಿಕಾರಿಗಳಿಗೆ ಡಿಕೆಶಿ ಕ್ಲಾಸ್

ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಭದ್ರತೆಗೆ ಸ್ಥಳದಲ್ಲಿ ಒಂದು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಸದ್ಯ ಸಂಗೊಳ್ಳಿ ರಾಯಣ್ಣ ಮೂರ್ತಿ ಎದುರು ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಜಮಾವಣೆ ಆಗಿದ್ದು ಡಿಸಿಪಿ ಶೇಖರ್ ಹೆಚ್‌ಟಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ವಹಿಸಲಾಗಿದೆ. ಇದನ್ನೂ ಓದಿ: ಶೃಂಗೇರಿಯಿಂದ ಪಂಚಲೋಹ ಮೂರ್ತಿ ರವಾನೆ – 75 ವರ್ಷಗಳ ಬಳಿಕ ಕಾಶ್ಮೀರದ ಶಾರದಾಂಬೆ ದೇಗುಲದಲ್ಲಿ ಪೂಜೆ

Share This Article