ಬೆಂಗಳೂರು: ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ ಹೊಸ ವರ್ಷಕ್ಕೆ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ತಾವು ತಾಯಿ ಆಗುತ್ತಿರುವ ವಿಚಾರವನ್ನು ರಿವೀಲ್ ಮಾಡಿದ್ದಾರೆ.
Advertisement
ಸಂಜನಾ ತಾಯಿಯಾಗುತ್ತಿದ್ದಾರೆ. ಈ ವರ್ಷ ಮೇ ತಿಂಗಳಿನಲ್ಲಿ ಕುಟುಂಬಕ್ಕೆ ಹೊಸ ಅತಿಥಿ ಆಗಮಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಈ ವಿಚಾರವಾಗಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಸಂಜನಾ, ಹೌದು ನಾನು ತಾಯಿ ಆಗುತ್ತಿದ್ದೇನೆ ಎಂದು ಹೇಳುವ ಮೂಲಕ ಎಲ್ಲಾ ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ.
Advertisement
Advertisement
ಮದುವೆ, ಡ್ರಗ್ ಕೇಸ್ ಮುಂತಾದ ಕಾರಣಗಳಿಂದ ಕಳೆದ ಒಂದೂವರೆ ವರ್ಷಗಳಿಂದಲೂ ಸಂಜನಾ ಸುದ್ದಿಯಲ್ಲಿದ್ದಾರೆ. ಈ ನಡುವೆಯೇ ಇದೀಗ ನಟಿ ತಾಯಿಯಾಗುತ್ತಿದ್ದಾರೆ ಎಂಬ ವಿಚಾರ ಸಂಜನಾ ಅಭಿಮಾನಿಗಳಿಗೆ ಸಖತ್ ಸಂತೋಷವನ್ನುಂಟು ಮಾಡಿದೆ. ಇದನ್ನೂ ಓದಿ: ಕಳೆದ ಲಾಕ್ಡೌನ್ನಲ್ಲಿ ನನ್ನ ಮದುವೆಯಾಯ್ತು: ಸಂಜನಾ ಗಲ್ರಾಣಿ
Advertisement
2021 ಜೂನ್ 3ರಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಸಂಜನಾ, ಮದುವೆ ವಿಚಾರ ಬಿಚ್ಚಿಟ್ಟರು. ಕಳೆದ ಲಾಕ್ ಡೌನ್ ನಲ್ಲಿ ನನ್ನ ಮದುವೆಯಾಯ್ತು. ನಾನಾ ಕಾರಣಗಳಿಂದ ಮದುವೆ ಸಂಭ್ರಮವನ್ನ ನಿಮ್ಮೆಲ್ಲರ ಜೊತೆ ಹಂಚಿಕೊಳ್ಳೋಕೆ ಆಗಲಿಲ್ಲ. ದೊಡ್ಡದಾಗಿ ಸೆಲೆಬ್ರೇಷನ್ ಮಾಡಬೇಕು ಅನ್ಕೊಂಡಿದ್ದೆ. ಚಿತ್ರರಂಗದ ಅಣ್ಣ-ತಮ್ಮಂದಿರಿಗೆ ಊಟ ಹಾಕಿಸೋಕೆ ಆಗಲಿಲ್ಲ ಅನ್ನೋ ಕೊರಗಿದೆ ಎಂದಿದ್ದರು. ಇದನ್ನೂ ಓದಿ: ‘ಗಂಡ-ಹೆಂಡತಿ’ ನಟಿ ಮದುವೆ ಸೀಕ್ರೆಟ್- ಮ್ಯಾರೇಜ್ ಆಗಿಲ್ಲ ಅಂತ ಸುಳ್ಳು ಹೇಳಿದ್ರಾ ಸಂಜನಾ?
ನಟಿ ಸಂಜನಾ ಮುಸ್ಲಿಂ ಸಂಪ್ರದಾಯದಲ್ಲಿ ವೈದ್ಯ ಅಜೀಜ್ ಪಾಷ ಅವರನ್ನು ಮದುವೆಯಾಗಿದ್ದರು. ಇದಕ್ಕೆ ಪೂರಕ ಎಂಬಂತೆ ಮದುವೆಯ ಫೋಟೋ ಕೂಡ ವೈರಲ್ ಆಗಿತ್ತು. ಅಜೀಜ್ ಪಾಷ ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದಾರೆ. ಡ್ರಗ್ಸ್ ವಿವಾದದ ವೇಳೆ ಸಂಜನಾ ಮದುವೆ ವಿಚಾರ ಹೊರಬಂದಿತ್ತು. ಇದೀಗ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.