ಜೋಗಿ ಪ್ರೇಮ್ (Prem) ಮತ್ತು ಧ್ರುವ ಸರ್ಜಾ (Dhruv Sarja) ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈ ಸಿನಿಮಾದ ಟೈಟಲ್ ಟೀಸರ್ ಅನ್ನು ವಿಶೇಷ ರೀತಿಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಈ ಕಾರ್ಯಕ್ರಮವು ಅದ್ಧೂರಿಯಾಗಿ ನಡೆಯುತ್ತಿದ್ದು, ಭಾರತೀಯ ಸಿನಿಮಾ ರಂಗದ ಅನೇಕ ದಿಗ್ಗಜರು ಇದಕ್ಕೆ ಸಾಕ್ಷಿ ಆಗಲಿದ್ದಾರೆ. ಇದೇ ಅಕ್ಟೋಬರ್ 20 ರಂದು ಕಾರ್ಯಕ್ರಮವು ಬೆಂಗಳೂರಿನಲ್ಲೇ ನಡೆಯುತ್ತಿದೆ.
ಈಗಾಗಲೇ ಈ ಟೀಸರ್ (Title Teaser) ಲಾಂಚ್ ಮಾಡಲು ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ (Mohanlal) ಆಗಮಿಸಲಿದ್ದಾರೆ ಎಂದು ಪ್ರೇಮ್ ತಿಳಿಸಿದ್ದರು. ಮೋಹನ್ ಲಾಲ್ ಅವರನ್ನು ಭೇಟಿ ಮಾಡಿದ ಫೋಟೋವನ್ನೂ ಅವರು ಹಂಚಿಕೊಂಡಿದ್ದರು. ಇದೀಗ ಬಾಲಿವುಡ್ ಖ್ಯಾತ ನಟ ಸಂಜಯ್ ದತ್ತ (Sanjay Dutt) ಕೂಡ ಆಗಮಿಸಲಿದ್ದಾರೆ ಅಂದಿದ್ದಾರೆ. ಇಂದು ಮುಂಬೈನಲ್ಲಿ ಸಂಜಯ್ ದತ್ ಅವರನ್ನು ಪ್ರೇಮ್ ಭೇಟಿ ಮಾಡಿ ಆಹ್ವಾನಿಸಿದ್ದಾರೆ. ಇದನ್ನೂ ಓದಿ:ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಅಪ್ಪು ಕಪ್ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್
Advertisement
Advertisement
ಭಾರತೀಯ ಸಿನಿಮಾ ರಂಗದ ಮೇರು ನಟರು ಮಾತ್ರವಲ್ಲ, ನಿನ್ನೆಯಷ್ಟೇ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರನ್ನೂ ಪ್ರೇಮ್ ಭೇಟಿ ಮಾಡಿದ್ದರು. ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಮುಖ್ಯಮಂತ್ರಿಗಳು ಕೂಡ ಈ ಕಾರ್ಯಕ್ರಮಕ್ಕೆ ಬರಲು ಒಪ್ಪಿಕೊಂಡಿದ್ದು, ಈ ಟೈಟಲ್ ಟೀಸರ್ ಕಾರ್ಯಕ್ರಮಕ್ಕೆ ಅವರೂ ಸಾಕ್ಷಿಯಾಗಲಿದ್ದಾರೆ.
Advertisement
Advertisement
ಈಗಾಗಲೇ ಸಿನಿಮಾದ ಮುಹೂರ್ತ ಮೈಸೂರಿನಲ್ಲಿ ನಡೆದಿದೆ. ಇನ್ನಷ್ಟೇ ಚಿತ್ರೀಕರಣ ಶುರುವಾಗಬೇಕು. ಅದಕ್ಕಾಗಿ ಎಲ್ಲ ಸಿದ್ಧತೆಯನ್ನೂ ಚಿತ್ರತಂಡ ಮಾಡಿಕೊಂಡಿದೆ. ಅದಕ್ಕೂ ಮುನ್ನ ಟೈಟಲ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇಲ್ಲಿಂದ ಸಿನಿಮಾದ ಇತರ ಕೆಲಸಗಳು ಶುರುವಾಗಲಿವೆಯಂತೆ. ಪ್ರೇಮ್ ಸಿನಿಮಾಗಳು ಅಂದರೆ, ಅಲ್ಲೊಂದು ಅಬ್ಬರ ಇರಲೇಬೇಕು. ಆ ಅಬ್ಬರವೂ ಮೊದಲ ದಿನದಿಂದಲೇ ಶುರುವಾಗಿರುವುದು ಮತ್ತೊಂದು ವಿಶೇಷ.