‘ಡಬಲ್ ಇಸ್ಮಾರ್ಟ್’ ಅಂಗಳಕ್ಕೆ ಸಂಜಯ್ ದತ್ ಎಂಟ್ರಿ

Public TV
2 Min Read
Sanjay Dutt

ಸ್ತಾದ್ ರಾಮ್ ಪೋತಿನೇನಿ  (Ustad Ram Pothineni) ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ (Puri Jagannath)  ಜೋಡಿಯ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್ (Double ismart) . ಕಳೆದ ತಿಂಗಳಷ್ಟೇ ಅದ್ಧೂರಿಯಾಗಿ ಹೈದ್ರಾಬಾದ್ ನಲ್ಲಿ ಸೆಟ್ಟೇರಿದ್ದ ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರಕ್ಕಾಗಿ ರಾಮ್ ಕಂಪ್ಲೀಟ್ ಲುಕ್ ಬದಲಿಸಿದ್ದು, ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಪುರಿ ಕನೆಕ್ಟ್ಸ್ ಬ್ಯಾನರ್ ನಡಿ ಪುರಿ ಜಗನ್ನಾಥ್ ಹಾಗೂ ಚಾರ್ಮಿ ಕೌರ್ ಅದ್ಧೂರಿಯಾಗಿ ನಿರ್ಮಿಸುತ್ತಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾ ಅಂಗಳಕ್ಕೆ ಬಾಲಿವುಡ್ ಸೂಪರ್ ಸ್ಟಾರ್ ಎಂಟ್ರಿಯಾಗಿದೆ.

Ustad Ram Pothineni 1

ಬಾಲಿವುಡ್ ಸೂಪರ್ ಸ್ಟಾರ್ ಸಂಜಯ್ ದತ್ (Sanjay Dutt) ಇತ್ತೀಚೆಗೆ ಸೌತ್ ಸಿನಿಮಾಗಳತ್ತ ಚಿತ್ತ ಹರಿಸುತ್ತಿದ್ದಾರೆ. ಕೆಜಿಎಫ್ ಬಳಿಕ ಬ್ಯಾಕ್ ಟು ಬ್ಯಾಕ್ ದಕ್ಷಿಣ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಸಂಜುಬಾಬಾ ಈಗ ‘ಡಬಲ್ ಇಸ್ಮಾರ್ಟ್’ ಭಾಗವಾಗಿದ್ದಾರೆ. ಸಂಜಯ್ ದತ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಚಿತ್ರತಂಡ ಸ್ಪೆಷಲ್ ಪೋಸ್ಟರ್ ಬಿಡುಗಡೆ ಮಾಡಿದೆ ಶುಭ ಕೋರಿದೆ. ಇದನ್ನೂ ಓದಿ:ದುಲ್ಕರ್ ಸಲ್ಮಾನ್ ಚಿತ್ರಕ್ಕೆ ‘ಲಕ್ಕಿ ಬಾಸ್ಕರ್’ ಟೈಟಲ್ ಫಿಕ್ಸ್

Ustad Ram Pothineni 3

ಗಡ್ಡ  ಬಿಟ್ಟು ಸ್ಟೈಲೀಶ್ ಲುಕ್ ನಲ್ಲಿ ಸಿಗಾರ್ ಸೇದುತ್ತಾ ರಗಡ್ ಆಗಿ ಮುನ್ನಭಾಯಿ ಕಾಣಿಸಿಕೊಂಡಿದ್ದು, ಈ ಪಾತ್ರಕ್ಕೆ ಬಿಗ್ ಬುಲ್ ಎಂದು ಹೆಸರಿಡಲಾಗಿದೆ. ಸಂಜಯ್ ದತ್ ಹಿಂದೆಂದೂ ಕಾಣದ ರೀತಿಯಲ್ಲಿ ತೋರಿಸಲು ನಿರ್ದೇಶಕ ಪುರಿ ಜಗನ್ನಾಥ್ ಪ್ಲಾನ್ ಮಾಡಿಕೊಂಡಿದ್ದಾರೆ.

ಪುರಿ ಜಗನ್ನಾಥ್ ಕಥೆ ಬರೆದು ನಿರ್ದೇಶಿಸುತ್ತಿರುವ ಡಬಲ್ ಇಸ್ಮಾರ್ಟ್ ಸಿನಿಮಾಗೆ ಹಾಲಿವುಡ್ ಗಿಯಾನಿ ಜಿಯಾನೆಲ್ಲಿ ಕ್ಯಾಮೆರಾ ಹಿಡಿಯಲಿದ್ದಾರೆ. ಲೈಗರ್ ಸಿನಿಮಾದಲ್ಲಿ ಖಳನಾಯಕನಾಗಿ ಘರ್ಜಿಸಿದ್ದ ವಿಷು ರೆಡ್ಡಿ ಪುರಿ ಕನೆಕ್ಟ್ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ. ಭಾರೀ ಬಜೆಟ್ ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ. ಮುಂದಿನ ವರ್ಷದ ಶಿವರಾತ್ರಿ ಹಬ್ಬಕ್ಕೆ ಬಿಡುಗಡೆಯಾಗಲಿರುವ ಈ ಚಿತ್ರ ತೆಲುಗು, ತಮಿಳು, ಕನ್ನಡ, ಹಿಂದಿ ಹಾಗೂ‌ ಮಲಯಾಳಂ ಭಾಷೆಯಲ್ಲಿ ಮೂಡಿ ಬರಲಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಮಾಹಿತಿಯನ್ನು ಶೀಘ್ರದಲ್ಲೇ ಘೋಷಣೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article