ಮುಂಬೈ: ನಾನು ಬಿಜೆಪಿ ಸಂಸದ, ಹೀಗಾಗಿ ನನ್ನ ಮೇಲೆ ಜಾರಿ ನಿರ್ದೇಶನಾಲಯ(ED)ದಾಳಿ ನಡೆಸುವುದಿಲ್ಲ ಎಂದು ಮಹಾರಾಷ್ಟ್ರದ ಸಾಂಗ್ಲಿ ಕ್ಷೇತ್ರದ ಬಿಜೆಪಿ(BJP) ಸಂಸದ ಸಂಜಯ್ ಪಾಟೀಲ್(SANJAY PATIL )ಹೇಳಿದ್ದಾರೆ.
ಸಾಂಗ್ಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಾನು ಬಿಜೆಪಿ ಸಂಸದನಾದ್ದರಿಂದ ಇ.ಡಿ ನನ್ನ ಬಳಿ ಬರುವುದಿಲ್ಲ. 40 ಲಕ್ಷ ರೂಪಾಯಿ ಮೌಲ್ಯದ ಐಷಾರಾಮಿ ಕಾರು ಖರೀದಿಸುವುದಕ್ಕಾಗಿ ಸಾಲ ತೆಗೆದುಕೊಳ್ಳಬೇಕಿದೆ. ನಮ್ಮ ಸಾಲದ ಮೊತ್ತ ನೋಡಿದರೆ ಇ.ಡಿಗೆ ಆಶ್ಚರ್ಯವಾಗಲಿದೆ. ಕೇಸರಿ ಪಕ್ಷದವರ ಮೇಲೆ ಯಾವುದೇ ತನಿಖೆ ಇರುವುದಿಲ್ಲ. ಹೀಗಾಗಿ ನೆಮ್ಮದಿಯಿಂದ ನಿದ್ದೆ ಮಾಡುತ್ತಿದ್ದೇನೆ ಎಂದು ಬಿಜೆಪಿ ನಾಯಕ ಹರ್ಷವರ್ಧನ್ ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ: ದಂಪತಿಯ ಹನಿ ಟ್ರ್ಯಾಪ್ ಬಲೆಗೆ ಬಿದ್ದ 300 ಮಂದಿ- ಒಂದೇ ವರ್ಷದಲ್ಲಿ 20 ಕೋಟಿ ಸುಲಿಗೆ!
ಪ್ರತಿಪಕ್ಷಗಳನ್ನು ಗುರಿಯಾಗಿಸಲು ಕೇಂದ್ರ ಸರ್ಕಾರವು ಸಿಬಿಐ, ಇ.ಡಿ ಹಾಗೂ ಎನ್‍ಸಿಬಿಗಳನ್ನು ಬಳಸಿಕೊಳ್ಳುತ್ತಿದೆ ಎಂದು ಎನ್‍ಸಿಪಿ ವರಿಷ್ಠ ಶರದ್ ಪವಾರ್ ಇತ್ತೀಚೆಗೆ ಆರೋಪಿಸಿದರು. ಅದೇ ದಿನ ಹರ್ಷವರ್ಧನ್ ಪಾಟೀಲ್ ಕೂಡ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಆನಂದ್ ಬರ್ಬರ ಕೊಲೆ