100 ಕೋಟಿ ಲಸಿಕೆ ವಿತರಣೆ – ಅನುಮಾನ ವ್ಯಕ್ತಪಡಿಸಿದ ಸಂಜಯ್ ರಾವತ್

Public TV
1 Min Read
modi Sanjay Raut

ಮುಂಬೈ: ಕೊರೊನಾ ವಿರುದ್ಧ ಹೋರಾಡುತ್ತಿರುವ ಭಾರತದಲ್ಲಿ 100 ಕೋಟಿ ಲಸಿಕೆ ವಿತರಣೆ ಆಗಿದೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಅಂಕಿ ಅಂಶದಲ್ಲಿ ನನಗೆ ಸಂಶಯವಿದೆ ಎಂದು ಶಿವಸೇನೆಯ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಕಿಡಿಕಾರಿದ್ದಾರೆ.

modi

ದೇಶದಲ್ಲಿ ವಿತರಣೆ ಆಗಿರುವ ಲಸಿಕೆ ಬಗ್ಗೆ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಹೇಳುತ್ತಿರುವ ಅಂಕಿ ಅಂಶಗಳು ನಿಜವಾಗಿದ್ದರೆ ಈ ಸಂಭ್ರಮಾಚರಣೆಯಲ್ಲಿ ನಾವು ಭಾಗಿಯಾಗುತ್ತೇವೆ. ಆದರೆ ನನಗೆ 100 ಕೋಟಿ ಲಸಿಕೆ ವಿತರಣೆ ಬಗ್ಗೆ ಸಂಶಯವಿದೆ. ದೇಶದಲ್ಲಿ ಕೇವಲ 33 ಕೋಟಿ ಜನರಿಗೆ ಮಾತ್ರ ಲಸಿಕೆ ಆಗಿದೆ ಎಂಬ ಮಾಹಿತಿ ಇದೆ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: 100 ಕೋಟಿ ಕೇವಲ ಅಂಕಿಯಲ್ಲ, ಇತಿಹಾಸದಲ್ಲಿ ದಾಖಲಾದ ಹೊಸ ಅಧ್ಯಾಯ: ಮೋದಿ

Sanjay Raut

ಭಾರತ ನಿನ್ನೆ 9 ತಿಂಗಳಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆಯ ಸಾಧನೆ ಮಾಡಿತ್ತು. ಈ ಮೂಲಕ ಚೀನಾ ನಂತರ 100 ಕೋಟಿ ಲಸಿಕೆ ಸಾಧನೆ ಮಾಡಿದ ಎರಡನೇ ದೇಶವಾಗಿ ಭಾರತ ಹೊರಹೊಮ್ಮಿತ್ತು. ಇಂದು ಪ್ರಧಾನಿ ದೇಶವನ್ನು ಉದ್ದೇಶಿಸಿ ಮಾತನಾಡಿ, 100 ಕೋಟಿ ಲಸಿಕೆ ಕೇವಲ ಅಂಕಿಯಲ್ಲ, ಇದೊಂದು ಇತಿಹಾಸ ಪುಟದಲ್ಲಿ ದಾಖಲಾದ ಹೊಸ ಅಧ್ಯಾಯ ಎಂದಿದ್ದರು. ಆದರೆ ಇದೀಗ ಸಂಜಯ್ ರಾವತ್ ಲಸಿಕೆ ವಿರತಣೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತದ ಐತಿಹಾಸಿಕ ಸಾಧನೆ- ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ಲಸಿಕೆ ವಿತರಿಸಲಾಗಿದೆ?

Share This Article
Leave a Comment

Leave a Reply

Your email address will not be published. Required fields are marked *