LatestMain PostNational

ಹನುಮಾನ್ ಚಾಲೀಸಾ ವಿಚಾರದಲ್ಲಿ ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ: ಸಂಜಯ್ ರಾವತ್

ಮುಂಬೈ: ಹನುಮಾನ್ ಚಾಲೀಸಾ ವಿಚಾರದಲ್ಲಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಶಿವಸೇನೆ ನಾಯಕ ಹಾಗೂ ಸಂಸದ ಸಂಜಯ್ ರಾವತ್ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಂದ್ರ ಫಡ್ನವೀಸ್ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಹನುಮಾನ್ ಚಾಲೀಸಾ ಪಠಣ ಮಾಡುವುದರಿಂದ ಯಾರಿಗೂ ಶಿಕ್ಷೆಯಾಗುವುದಿಲ್ಲ. ಯಾರಾದರೂ ಹನುಮಾನ್ ಚಾಲೀಸಾವನ್ನು ಪಠಿಸುವುದಾದರೇ ಅದನ್ನು ಅವರ ಮನೆ ಅಥವಾ ದೇಗುಲದಲ್ಲಿ ಪಠಿಸಬೇಕು. ಆದರೆ ಬೇರೆಯವರ ಮನೆಗೆ ನುಗ್ಗಿ ಅವರ ಶಾಂತಿಯನ್ನು ಹಾಳು ಮಾಡುವುದು ತಪ್ಪು ಎಂದರು.

ಈ ಹಿಂದೆ ಫಡ್ನವಿಸ್ ಮಾತನಾಡಿ, ನಾವೆಲ್ಲರೂ ಹನುಮಾನ್ ಚಾಲೀಸಾವನ್ನು ಜಪಿಸುತ್ತೇವೆ. ಸರ್ಕಾರಕ್ಕೆ ಧೈರ್ಯವಿದ್ದರೆ, ನಮ್ಮ ಮೇಲೆ ದೇಶದ್ರೋಹದ ಆರೋಪ ಹೊರಿಸಲು ಪ್ರಯತ್ನಿಸಿ ಎಂದ ಅವರು ರಾಜ್ಯ ಸರ್ಕಾರವು ಹಿಟ್ಲರ್ ಪಾತ್ರವನ್ನು ವಹಿಸಿಕೊಂಡಿದೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆಯು ಅಲ್ಪಸಂಖ್ಯಾತರ ವಿರೋಧಿ ಕ್ರಮ: ಮುಸ್ಲಿಂ ಕಾನೂನು ಮಂಡಳಿ

ಮುಂಬೈನಲ್ಲಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸದ ಹೊರಗೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಬೆದರಿಕೆ ಹಾಕಿದ್ದ ಸಂಸದ ನವನೀತ್ ರಾಣಾ ಮತ್ತು ಅವರ ಪತಿ ರವಿ ರಾಣಾ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದರು. ಇದಕ್ಕೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದನ್ನೂ ಓದಿ: ಗಾಂಧಿ ಕುಟುಂಬ ರಜೆಯಲ್ಲಿ ತೆರಳಿದೆಯೇ: ಅನೂರಾಗ್ ಠಾಕೂರ್ ಪ್ರಶ್ನೆ

Leave a Reply

Your email address will not be published.

Back to top button