ನವದೆಹಲಿ: ಶಿವಸೇನಾ (Shiv Sena) ಸಂಸದ ಸಂಜಯ್ ರಾವತ್ (Sanjay Raut) ಅವರಿಗೆ ಜೀವ ಬೆದರಿಕೆ ಸಂದೇಶಗಳು ಬಂದಿವೆ. ಈ ಬಗ್ಗೆ ಶುಕ್ರವಾರ ರಾತ್ರಿ ಮುಂಬೈ (Mumbai) ಪೊಲೀಸರಿಗೆ ತಿಳಿಸಿದ್ದೇನೆ ಎಂದು ರಾವತ್ ಹೇಳಿದ್ದಾರೆ. ಈ ಸಂಬಂಧ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಬಗ್ಗೆ ರಾವತ್ ಪ್ರತಿಕ್ರಿಯಿಸಿ, ನನಗೆ ಈ ಹಿಂದೆ ಸಹ ಬೆದರಿಕೆ ಬಂದಿತ್ತು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೆ. ಆದರೆ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಪ್ರತಿಪಕ್ಷ ನಾಯಕರ ಭದ್ರತೆಯ ಬಗ್ಗೆ ರಾಜ್ಯ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ- ಚೆನೈ ಕಲಾಕ್ಷೇತ್ರದ ಪ್ರೊಫೆಸರ್ ವಿರುದ್ಧ ದೂರು ದಾಖಲು
ಕುಖ್ಯಾತ ಕ್ರಿಮಿನಲ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಪಂಜಾಬಿ ಗಾಯಕ ಸಿಧು ಮೂಸೆವಾಲಾ (Sidhu Moose Wala) ಹತ್ಯೆಯ ಮಾಸ್ಟರ್ ಮೈಂಡ್ ಆಗಿದ್ದು, ಪ್ರಸ್ತುತ ಪಂಜಾಬ್ ಜೈಲಿನಲ್ಲಿದ್ದಾನೆ. ಆತನ ಮೇಲೆ ಗಾಯಕನ ತಂದೆ ಬಲ್ಕೌರ್ ಸಿಂಗ್ ಮತ್ತು ನಟ ಸಲ್ಮಾನ್ ಖಾನ್‍ಗೆ (Salman Khan) ಬೆದರಿಕೆ ಒಡ್ಡಿದ ಆರೋಪಗಳಿವೆ. ಇದನ್ನೂ ಓದಿ: ಶಾಸಕ ಮಹೇಶ್ ಕುಮಠಳ್ಳಿಗೆ ಟಿಕೆಟ್ ಟೆನ್ಶನ್- ವಲಸಿಗ ಶಾಸಕರಿಗೆ ಮೂಲ ಬಿಜೆಪಿಗರಿಂದ ಕಿರಿಕ್