Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ

Cinema

ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ

Public TV
Last updated: July 21, 2025 4:32 pm
Public TV
Share
3 Min Read
S O Muttanna
SHARE

ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಂ ದೇವರಾಜ್ ನಾಯಕನಾಗಿ ಹಾಗೂ `ದಿಯಾ’ ಖ್ಯಾತಿಯ ಖುಷಿ ರವಿ (Kushi Ravi) ನಾಯಕಿಯಾಗಿ ನಟಿಸಿರುವ `S/O ಮುತ್ತಣ್ಣ’ (`S/O Muttanna) ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು ಬರೆದಿರುವ, ಸಂಜಿತ್ ಹೆಗ್ಡೆ ಹಾಡಿರುವ ಹಾಗೂ ಸಚಿನ್ ಬಸ್ರೂರ್ ಸಂಗೀತ ನೀಡಿರುವ `ಮಿಡ್ ನೈಟ್ ರಸ್ತೆಯಲ್ಲಿ’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು.

ಬಿಡುಗಡೆಯಾದ ಬೆನ್ನಲ್ಲೇ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಲ್ಲದೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಇದನ್ನೂ ಓದಿ: ಕಾಂತಾರ ಚಾಪ್ಟರ್‌ 1 – ಇದು ಬರೀ ಸಿನಿಮಾ ಅಲ್ಲ `ಶಕ್ತಿ’ ಎಂದ ರಿಷಬ್ ಶೆಟ್ಟಿ

S O Muttannaನಮ್ಮ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಇಂದು ಎರಡನೇ ಹಾಡು ಬಿಡುಗಡೆಯಾಗಿದೆ. ಮೊದಲು ಹಾಡು `ಕಮ್ಮಂಗಿ ನನ್ ಮಗನೇ’ ಸಹ ಮೆಚ್ಚುಗೆ ಪಡೆದುಕೊಂಡಿದೆ. ಇಂದು ಬಿಡುಗಡೆಯಾಗಿರುವ `ಮಿಡ್ನೈಟ್ ರಸ್ತೆಯಲ್ಲಿ’ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ. ಯೋಗರಾಜ್ ಭಟ್ ಅವರು ಬರೆದಿದ್ದಾರೆ. ಉಳಿದ 2 ಹಾಡುಗಳು ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಸಂಗೀತ ನಿರ್ದೇಶಕ ಸಚಿನ್ ಬಸ್ರೂರ್ ಮಾಹಿತಿ ನೀಡಿದರು. ಇದನ್ನೂ ಓದಿ: 3 ವರ್ಷದ ಸಿನಿ ಪಯಣದ ಒಂದು ಝಲಕ್: ಕಾಂತಾರ ಅದ್ಭುತ ಲೋಕ

ಪುರಾತನ ಫಿಲಂಸ್ ಸಂಸ್ಥೆ ಎಸ್‌ಆರ್‌ಕೆ ಫಿಲಂಸ್ ಸಹಯೋಗದೊಂದಿಗೆ ನಿರ್ಮಾಣ ಮಾಡಿರುವ ಈ ಚಿತ್ರ ಅಪ್ಪ-ಮಗನ ಬಾಂಧವ್ಯದ ಕುರಿತಾದ ಕಥಾಹಂದರ ಹೊಂದಿದೆ. ರಂಗಾಯಣ ರಘು ಹಾಗೂ ಪ್ರಣಂ ದೇವರಾಜ್ ಅಪ್ಪ-ಮಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಖುಷಿರವಿ ಈ ಚಿತ್ರದ ನಾಯಕಿ. ಸಚಿನ್ ಬಸ್ರೂರ್ ಅವರ ಸಂಗೀತ ಸಂಯೋಜನೆಯ 4 ಹಾಡುಗಳು ತುಂಬಾ ಚೆನ್ನಾಗಿದೆ ಎಂದರು.

S o muttanna 3ಈಗ ಬಿಡುಗಡೆಯಾಗಿರುವ ಎರಡು ಹಾಡುಗಳನ್ನು ಯೋಗರಾಜ್ ಭಟ್ ಅವರೇ ಬರೆದಿದ್ದಾರೆ. ಅಂದುಕೊಂಡ ಹಾಗೆ ಚಿತ್ರವನ್ನು ಪೂರ್ಣಗೊಳಿಸಲು ಚಿತ್ರತಂಡದ ಸಹಕಾರವೇ ಕಾರಣ. ಇನ್ನೂ ಈ ಚಿತ್ರದ ಹೆಚ್ಚಿನ ಭಾಗದ ಚಿತ್ರೀಕರಣ ವಾರಣಾಸಿಯಲ್ಲಿ ನಡೆದಿದೆ. ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡಿದ್ದ ಡೈನಾಮಿಕ್ ಸ್ಟಾರ್ ದೇವರಾಜ್, ಇತ್ತೀಚೆಗೆ ಸಿನಿಮಾ ನೋಡಿ ಪ್ರಶಂಸೆ ನೀಡಿದ್ದು ಬಹಳ ಖುಷಿಯಾಗಿದೆ ಎಂದು ನಿರ್ದೇಶಕ ಶ್ರೀಕಾಂತ್ ಹುಣಸೂರು ತಿಳಿಸಿದರು. ಇದನ್ನೂ ಓದಿ: ಮತ್ತೆ ಒಂದಾಯ್ತು ಗುಡ್ ಬ್ಯಾಡ್ ಅಗ್ಲಿ ಕಾಂಬಿನೇಷನ್

ಬಳಿಕ ಮಾತನಾಡಿದ ಚಿತ್ರದ ನಾಯಕ ಪ್ರಣಂ ದೇವರಾಜ್, ನಿರ್ದೇಶಕರು ಕಥೆ ಹೇಳಿದ ರೀತಿಯೇ ಬಹಳ ಚೆನ್ನಾಗಿತ್ತು. ಇದೊಂದು ತಂದೆ-ಮಗನ ಬಾಂಧವ್ಯದ ಚಿತ್ರ. ಜೊತೆಗೆ ಪ್ರೇಮ ಕಥಾನಕವೂ ಹೌದು. ಈ ಚಿತ್ರದ ವಿಶೇಷವೆಂದರೆ ಇದರಲ್ಲಿ ಸಾಹಸ ಸನ್ನಿವೇಶಗಳಿಲ್ಲ. ನಿರ್ದೇಶಕರು ಮಾಡಿಕೊಂಡಿರುವ ಕಥೆ, ಚಿತ್ರಕಥೆ ಬಹಳ ಸೊಗಸಾಗಿದೆ. ರಂಗಾಯಣ ರಘು ಅವರಿಂದ ಸಾಕಷ್ಟು ಕಲಿತಿದ್ದೇನೆ. ಸಚಿನ್ ಬಸ್ರೂರ್ ಸಂಗೀತ ಸಂಯೋಜನೆಯಲ್ಲಿ ಸಂಜಿತ್ ಹೆಗ್ಡೆ ಹಾಡಿರುವ ಈ `ಮಿಡ್ ನೈಟ್ ರಸ್ತೆಯಲ್ಲಿ’ ಸಾಂಗ್ ಅಂತೂ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ. ಧನಂಜಯ್ ಮಾಸ್ಟರ್ ನೃತ್ಯ ನಿರ್ದೇಶನ ಕೂಡ ಹಾಡಿಗೆ ಪೂರಕವಾಗಿದೆ. ಏಳುವರೆ ವರ್ಷಗಳ ನಂತರ ನನ್ನ ಸಿನಿಮಾ ಬಿಡುಗಡೆಯಾಗುತ್ತಿದೆ. ಅವಕಾಶ ನೀಡಿದ ಪುರಾತನ ಫಿಲಂಸ್ ಸಂಸ್ಥೆಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ. ಎಲ್ಲರು ಚಿತ್ರ ನೋಡಿ. ಪ್ರೋತ್ಸಾಹಿಸಿ ಎಂದರು. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್‌ಗೆ ಟ್ವಿಸ್ಟ್‌ – ಪ್ರಮುಖ ಆರೋಪಿಯಿಂದ ನಟಿ ರಚಿತಾ ರಾಮ್‌ಗೆ ಭರ್ಜರಿ ಗಿಫ್ಟ್

S o Muttanna 2

ನಾಯಕಿ ಖುಷಿ ರವಿ ಮಾತನಾಡಿದ ಅವರು, ನಾನು ಈ ಚಿತ್ರದಲ್ಲಿ ವೈದ್ಯೆ. ಸಾಕ್ಷಿ ನನ್ನ ಪಾತ್ರದ ಹೆಸರು. ಒಂದೊಳ್ಳೆ ಚಿತ್ರದಲ್ಲಿ ನಟಿಸಿದ ಖುಷಿಯಿದೆ. ಇದು ನಾನು ನಾಯಕಿಯಾಗಿ ನಟಿಸಿರುವ ಏಳನೇ ಚಿತ್ರ. ಬೇರೆ ಭಾಷೆಗಳಲ್ಲಿ ನನಗೆ ಅವಕಾಶ ಸಿಗುತ್ತಿದೆ. ಆದರೆ ಕನ್ನಡದಲ್ಲಿ ಹೆಚ್ಚು ಅವಕಾಶಗಳು ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಹಾಡಿನ ನೃತ್ಯ ನಿರ್ದೇಶನದ ಬಗ್ಗೆ ಧನು ಮಾಸ್ಟರ್, ಛಾಯಾಗ್ರಹಣದ ಕುರಿತು ಛಾಯಾಗ್ರಾಹಕ ಸ್ಕೇಟಿಂಗ್ ಕೃಷ್ಣ ಮಾಹಿತಿ ನೀಡಿದರು. ಸಂಕಲನಕಾರ ಹರೀಶ್ ಕೊಮ್ಮೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ವೇಳೆ ಸಂಜಿತ್ ಹೆಗ್ಡೆ `ಮಿಡ್ ನೈಟ್ ರಸ್ತೆಯಲ್ಲಿ’ ಹಾಡನ್ನು ವೇದಿಕೆಯ ಮೇಲೆ ಸುಮಧುರವಾಗಿ ಹಾಡಿದರು.

TAGGED:cinemaKhushi RaviPranam DevarajS/O MuttannaS/O ಮುತ್ತಣ್ಣಸಿನಿಮಾ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

dubai airport 1
Latest

ದುಬೈ ಏರ್‌ಪೋರ್ಟ್‌ ಬಳಿ ಇರಾನ್ ಡ್ರೋನ್‌ ದಾಳಿ – ವಿಮಾನಗಳ ಹಾರಾಟ ಸ್ಥಗಿತ

Public TV
By Public TV
57 minutes ago
Vijayanagara Brother Murder
Bellary

ಆಸ್ತಿ ಕಲಹ – ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ಕೊಂದ ತಮ್ಮ

Public TV
By Public TV
1 hour ago
Odishas Cuttack Hospital Fire
Latest

ಒಡಿಶಾದ ಕಟಕ್‌ನ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಸಾವು

Public TV
By Public TV
2 hours ago
Hotel Association Meeting With Govt
Bengaluru City

20% ಗ್ಯಾಸ್ ವಿತರಣೆಗೆ ಕೇಂದ್ರ ಗ್ರೀನ್ ಸಿಗ್ನಲ್ – ಇಂದು ಹೋಟೆಲ್ ಸಂಘದಿಂದ ಸರ್ಕಾರದ ಭೇಟಿ

Public TV
By Public TV
2 hours ago
UAE attack
Latest

ಇರಾನ್‌ ಯುದ್ಧದ ಬಗ್ಗೆ ಸುಳ್ಳು ಸುದ್ದಿ, ವೀಡಿಯೋ ಪೋಸ್ಟ್‌ – 19 ಭಾರತೀಯರ ಬಂಧನಕ್ಕೆ UAE ಆದೇಶ

Public TV
By Public TV
2 hours ago
Benjamin Netanyahu
Latest

7,656 ಕೋಟಿ ರೂ. ತುರ್ತು ಮಿಲಿಟರಿ ಬಜೆಟ್‌ಗೆ ಇಸ್ರೇಲ್ ಅನುಮೋದನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?